ETV Bharat / business

ಕೃಷಿಕರಿಗೆ ಸಿಹಿ ಸುದ್ದಿ: ಕನಿಷ್ಠ ಬೆಂಬಲ ಬೆಲೆಯಡಿ ಭತ್ತ, ರಾಗಿ, ಬಿಳಿ ಜೋಳ, ತೊಗರಿ, ಹೆಸರು ಕಾಳು ಖರೀದಿ - white corn support price

ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಆಹಾರ ಧಾನ್ಯಗಳನ್ನು ಖರೀದಿಸುವ ಸಂಬಂಧವಾಗಿ ವಿಧಾನಸೌಧದಲ್ಲಿ ಸಚಿವ ಸಂಪುಟದ ಉಪಸಮಿತಿಯ ಸಭೆ ನಡೆಯಿತು. ಈ ಸಾಲಿನಲ್ಲಿ ಕೇಂದ್ರ ಸರ್ಕಾರ 1.10 ಲಕ್ಷ ಮೆಟ್ರಿಕ್‌ ಟನ್‌ ಭತ್ತ ಖರೀದಿಗೆ ಅನುಮತಿ ನೀಡಿದೆ. ಹೆಚ್ಚುವರಿಯಾಗಿ ಇನ್ನೂ 1 ಲಕ್ಷ ಮೆಟ್ರಿಕ್‌ ಟನ್‌ ಭತ್ತ ಖರೀದಿಗೆ ನಿರ್ಧರಿಸಲಾಯಿತು.

VC
ವಿಧಾನಸೌಧ
author img

By

Published : Dec 8, 2020, 4:17 AM IST

ಬೆಂಗಳೂರು: ಡಿಸಿಎಂ ಲಕ್ಷ್ಮಣ ಸವದಿ ಅಧ್ಯಕ್ಷತೆಯಲ್ಲಿ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಆಹಾರ ಧಾನ್ಯಗಳನ್ನು ಖರೀದಿಸುವ ಸಂಬಂಧ ವಿಧಾನಸೌಧದಲ್ಲಿ ಸಚಿವ ಸಂಪುಟದ ಉಪಸಮಿತಿಯ ಸಭೆ ನಡೆಯಿತು.

ಸಭೆಯಲ್ಲಿ ಈ ಸಾಲಿನಲ್ಲಿ ಕೇಂದ್ರ ಸರ್ಕಾರ 1.10 ಲಕ್ಷ ಮೆಟ್ರಿಕ್‌ ಟನ್‌ ಭತ್ತ ಖರೀದಿಗೆ ಅನುಮತಿ ನೀಡಿದೆ. ಹೆಚ್ಚುವರಿಯಾಗಿ ಇನ್ನೂ 1 ಲಕ್ಷ ಮೆಟ್ರಿಕ್‌ ಟನ್‌ ಭತ್ತ ಖರೀದಿ ಪ್ರಮಾಣಕ್ಕೆ ಅಂದರೆ, ಒಟ್ಟು ಸುಮಾರು 2.10 ಲಕ್ಷ ಟನ್ ಭತ್ತವನ್ನು ಖರೀದಿಸಲು ಪ್ರಸ್ತಾವನೆ ಸಲ್ಲಿಸಲು ನಿರ್ಧರಿಸಲಾಯಿತು. ಭತ್ತ ಖರೀದಿಗಾಗಿ ರೈತರ ನೋಂದಣಿ ಈಗಾಗಲೇ ಆರಂಭಿಸಿದ್ದು, ಖರೀದಿ ಕಾರ್ಯವನ್ನು ತಕ್ಷಣದಿಂದಲೇ ಶುರುವಾಗಲಿದ್ದು, ರೈತರ ನೋಂದಣಿ ಜನವರಿ ಅಂತ್ಯದವರೆಗೂ ಇರಲಿದೆ.

ಕಾವೇರಿ ಕೂಗು ಅಭಿಯಾನ: ಸರ್ಕಾರದ ಸ್ಪಷ್ಟನೆ ಕೇಳಿದ ಹೈಕೋರ್ಟ್

ಭತ್ತ ಖರೀದಿ ಪ್ರಮಾಣದ ಮಿತಿಯನ್ನು ಪ್ರತಿ ಎಕರೆಗೆ 25 ಕ್ವಿಂಟಾಲ್​ನಂತೆ ಗರಿಷ್ಠ ಪ್ರತಿ ರೈತರಿಂದ 75 ಕ್ವಿಂಟಾಲ್‌ ನಿಗದಿಪಡಿಸಲಾಯಿತು. ಈಗಾಗಲೇ ಕನಿಷ್ಠ ಬೆಂಬಲ ಬೆಲೆ ಅಡಿಯಲ್ಲಿ ಭತ್ತ (ಸಾಮಾನ್ಯ) ಪ್ರತಿ ಕ್ವಿಂಟಾಲ್ 1868 ರೂ., ಭತ್ತ ಗ್ರೇಡ್ 'ಎ'ಗೆ 1,888 ರೂ. ದರ ಘೋಷಿಸಲಾಗಿದೆ.

ರಾಗಿ ಮತ್ತು ಬಿಳಿಜೋಳ:

ರಾಗಿ ಮತ್ತು ಬಿಳಿಜೋಳ ಖರೀದಿ ನೋಂದಣಿ ಈಗಿನಿಂದಲೇ ಶರುವಾಗಿದ್ದು, ಖರೀದಿ ಪ್ರಕ್ರಿಯೆಯು ಡಿಸೆಂಬರ್‌ 15ರಿಂದ ಆರಂಭವಾಗಲಿದೆ. ರಾಗಿ ಖರೀದಿ ಪ್ರಮಾಣದ ಮಿತಿಯನ್ನು ಪ್ರತಿ ಎಕರೆಗೆ 10 ಕ್ವಿಂಟಾಲ್​ನಂತೆ ಗರಿಷ್ಠ ಪ್ರತಿ ರೈತರಿಂದ 50 ಕ್ವಿಂಟಾಲ್ ನಿಗದಿಪಡಿಸಲಾಗಿದೆ.

ರಾಗಿ ಖರೀದಿ ಪ್ರಮಾಣದ ಒಟ್ಟು ಗುರಿಯನ್ನು ಈಗಿರುವ 3 ಲಕ್ಷ ಮೆಟ್ರಿಕ್ ಟನ್‌ ಜೊತೆಗೆ ಇನ್ನೂ 1 ಲಕ್ಷ ಮೆಟ್ರಿಕ್ ಟನ್ ಹೆಚ್ಚುವರಿ ಪ್ರಮಾಣಕ್ಕೆ ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಸಲು ನಿರ್ಧರಿಸಲಾಯಿತು. ಬಿಳಿಜೋಳ ಖರೀದಿಗೆ ಮುಂಗಾರು ಪ್ರಮಾಣ 4,000 ಮೆಟ್ರಿಕ್ ಟನ್‌ ಈಗಾಗಲೇ ನಿಗದಿಯಾಗಿದ್ದು, ಇದನ್ನು 1 ಲಕ್ಷ ಮೆಟ್ರಿಕ್‌ ಟನ್​ಗೆ ನಿಗದಿಪಡಿಸುವಂತೆ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಕೆ ಆಗಲಿದೆ. ಬಿಳಿಜೋಳ ಖರೀದಿ ಪ್ರಮಾಣದ ಮಿತಿಯನ್ನು ಪ್ರತಿ ಎಕರೆಗೆ 15 ಕ್ವಿಂಟಾಲ್‌ ನಂತೆ ಗರಿಷ್ಠ ಪ್ರತಿ ರೈತರಿಂದ 75 ಕ್ವಿಂಟಾಲ್‌ ಮಿತಿ ನಿಗದಿಪಡಿಸಿರುವುದನ್ನು ಮುಂದುವರೆಸುವಂತೆ ತಿರ್ಮಾನಿಸಲಾಯಿತು.

ಈಗಾಗಲೇ ಕನಿಷ್ಠ ಬೆಂಬಲ ಬೆಲೆ ಅಡಿಯಲ್ಲಿ ರಾಗಿಗೆ ಪ್ರತಿ‌ ಕ್ವಿಂಟಾಲ್‌ಗೆ 3,295 ರೂ., ಬಿಳಿ ಜೋಳ ಹೈಬ್ರಿಡ್​ಗೆ 2,620 ರೂ. ಹಾಗೂ ಬಿಳಿ ಜೋಳ ಮಾಲ್ದಂಡಿಗೆ 2,640 ರೂ. ದರ ಘೋಷಿಸಲಾಗಿದೆ.

ತೊಗರಿ: ಉತ್ತರ ಕರ್ನಾಟಕದ ಪ್ರಮುಖ ಬೆಳೆಯಾದ ತೊಗರಿ ಖರೀದಿಗೆ ರೈತರ ನೋಂದಣಿಯನ್ನು 2020ರ ಡಿಸೆಂಬರ್ 12ರಿಂದ ಮತ್ತು ಖರೀದಿ ಪ್ರಕ್ರಿಯೆ 2021ರ ಜನವರಿ 1ರಿಂದ ಪ್ರಾರಂಭವಾಗಲಿದೆ. ಖರೀದಿ ಅವಧಿ 90 ದಿನಗಳಾಗಿವೆ. ಪ್ರತಿ ಎಕರೆಗೆ ಗರಿಷ್ಠ 7.5 ಕ್ವಿಂಟಾಲ್ ಮತ್ತು ಗರಿಷ್ಟ ಒಟ್ಟು 20 ಕ್ವಿಂಟಾಲ್​ವರೆಗೆ ಒಬ್ಬ ರೈತರಿಂದ ಖರೀದಿಗೆ ಅವಕಾಶ ಕಲ್ಪಿಸಲು ನಿರ್ಧರಿಸಲಾಯಿತು. ಈಗಾಗಲೇ ಕನಿಷ್ಠ ಬೆಂಬಲ ಬೆಲೆ ಅಡಿಯಲ್ಲಿ ತೊಗರಿಗೆ ಪ್ರತಿ ಕ್ವಿಂಟಾಲ್ ಗೆ ರೂ. 6,000 ದರ ಘೋಷಿಸಲಾಗಿದೆ.

ಹೆಸರುಕಾಳು: 2020ರ ಸೆಪ್ಟೆಂಬರ್ 14ರಿಂದಲೇ ಖರೀದಿ ಕೇಂದ್ರ ಪ್ರಾರಂಭಿಸಲಾಗಿದ್ದರೂ ಹೆಚ್ಚಿನ ಆವಕಗಳು ಬಂದಿರುವುದಿಲ್ಲ. ಆದರೂ ರೈತರಿಗೆ ಮುಂದೆ ಅನುಕೂಲ ಕಲ್ಪಿಸಲು ಪ್ರತಿ ರೈತರಿಂದಲೂ ಗರಿಷ್ಠ 20 ಕ್ವಿಂಟಾಲ್​ವರೆಗೆ ಖರೀದಿಸಲು ನಿರ್ಧಾರಿಸಲಾಯಿತು. ಮುಂದಿನ ವರ್ಷದಿಂದ ಜುಲೈ ಮತ್ತು ಆಗಸ್ಟ್ ತಿಂಗಳಿನಲ್ಲಿಯೇ ಖರೀದಿ ಪ್ರಕ್ರಿಯೆಯನ್ನು ಪ್ರಾರಂಭಿಸಿ ರೈತರಿಗೆ ಅನುಕೂಲ ಕಲ್ಪಿಸಲಾಗುತ್ತಿದೆ.

ಉದ್ದು: ಉದ್ದಿನ ಖರೀದಿ ಪ್ರಕ್ರಿಯೆ ಈಗಾಗಲೇ ಜಾರಿಯಲ್ಲಿದ್ದರೂ ಹೆಚ್ಚಿನ ಆವಕ ಬಂದಿರುವುದಿಲ್ಲ. ಮುಂದಿನ ವರ್ಷದಿಂದ ಜುಲೈ ಮತ್ತು ಆಗಸ್ಟ್ ತಿಂಗಳಿನಲ್ಲಿಯೇ ಖರೀದಿ ಪ್ರಕ್ರಿಯೆಯನ್ನು ಪ್ರಾರಂಭಿಸಲು ನಿರ್ಧರಿಸಲಾಯಿತು.

ಶೇಂಗಾ: ಶೇಂಗಾ ಖರೀದಿ ಪ್ರಕ್ರಿಯೆ ಈಗಾಗಲೇ ಜಾರಿಯಲ್ಲಿದ್ದು, 173 ರೈತರು ಮಾತ್ರ ಈವರೆಗೆ ನೋಂದಣಿ ಮಾಡಿಸಿಕೊಂಡಿದ್ದಾರೆ. ಈಗಾಗಲೇ ಕನಿಷ್ಠ ಬೆಂಬಲ ಬೆಲೆ ಅಡಿಯಲ್ಲಿ ಶೇಂಗಾಗೆ ಪ್ರತಿ ಕ್ವಿಂಟಾಲ್​ಗೆ 5,275 ರೂ. ದರ ಘೋಷಿಸಲಾಗಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.