ETV Bharat / business

ಮಲ್ಯ ವಿರುದ್ಧ ದಿವಾಳಿತನದ ಆದೇಶಕ್ಕೆ ಒತ್ತಾಯ: ಲಂಡನ್​ ಹೈಕೋರ್ಟ್​ಗೆ ಅರ್ಜಿ ಸಲ್ಲಿಸಿದ ಬ್ಯಾಂಕ್​ ಒಕ್ಕೂಟ - ವಿಜಯ್‌ ಮಲ್ಯ ವಿರುದ್ಧ ದಿವಾಳಿತನದ ಆದೇಶ ಸುದ್ದಿ

ಎಸ್‌ಬಿಐ ನೇತೃತ್ವದ 13 ಭಾರತೀಯ ಬ್ಯಾಂಕ್​ಗಳ ಒಕ್ಕೂಟವು ಉದ್ಯಮಿ ವಿಜಯ್‌ ಮಲ್ಯ ವಿರುದ್ಧ ದಿವಾಳಿತನದ ಆದೇಶ ಹೊರಡಿಸುವಂತೆ ಕೋರಿ ಲಂಡನ್‌ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದೆ. ಈ ಹಿನ್ನೆಲೆಯಲ್ಲಿ ಶುಕ್ರವಾರದಂದು ವಿಡಿಯೋ ಕಾನ್ಫರೆನ್ಸ್​ ಮೂಲಕ ವಿಚಾರಣೆ ನಡೆಸಲಾಯಿತು.

ವಿಜಯ್‌ ಮಲ್ಯ
ವಿಜಯ್‌ ಮಲ್ಯ
author img

By

Published : Dec 20, 2020, 7:47 AM IST

ಲಂಡನ್‌: ವಿಜಯ್‌ ಮಲ್ಯ ವಿರುದ್ಧ ದಿವಾಳಿತನದ ಆದೇಶ ಹೊರಡಿಸುವಂತೆ ಕೋರಿ ಎಸ್‌ಬಿಐ ಸಮ್ಮುಖದ ಭಾರತೀಯ ಬ್ಯಾಂಕ್​ಗಳ ಒಕ್ಕೂಟ ಲಂಡನ್‌ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದೆ. ಈ ಹಿನ್ನೆಲೆಯಲ್ಲಿ ಇಲ್ಲಿನ ಚೀಫ್‌ ಇನ್ಸಾಲ್ವೆನ್ಸಿಯಸ್‌ ಆ್ಯಂಡ್‌ ಕಂಪನೀಸ್‌ ನ್ಯಾಯಾಲಯವು ಶುಕ್ರವಾರ ಇದರ ವಿಚಾರಣೆ ನಡೆಸಿದೆ.

ವಿಡಿಯೋ ಕಾನ್ಫರೆನ್ಸ್​ ಮೂಲಕ ನಡೆದ ವಿಚಾರಣೆಯಲ್ಲಿ ನ್ಯಾಯಾಧೀಶ ಮೈಕಲ್‌ ಬ್ರಿಗ್ಸ್‌ ಅವರು ಅರ್ಜಿದಾರರು ಹಾಗೂ ಪ್ರತಿವಾದಿಗಳ ವಾದ ಆಲಿಸಿದರು.

ಸುಪ್ರೀಂಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿಗಳಾದ ದೀಪಕ್‌ ವರ್ಮಾ ಹಾಗೂ ಗೋಪಾಲ ಗೌಡ ಅವರು ಕ್ರಮವಾಗಿ ಮಲ್ಯ ಹಾಗೂ ಬ್ಯಾಂಕ್‌ಗಳ ಒಕ್ಕೂಟದ ಪರ ಭಾರತೀಯ ಕಾನೂನಿನ ಪರಿಣಿತರಾಗಿ ವಿಚಾರಣೆಯಲ್ಲಿ ಪಾಲ್ಗೊಂಡಿದ್ದರು.

‘ವಾಣಿಜ್ಯ ಘಟಕವಾದ ಬ್ಯಾಂಕ್​, ತನ್ನ ಭದ್ರತೆಯೊಂದಿಗೆ ಏನು ಮಾಡಬೇಕೆಂಬುದನ್ನು ನಿರ್ಧರಿಸುವ ಹಕ್ಕನ್ನು ಹೊಂದಿದೆ. ಸಾಲಗಾರರಿಂದ ಸಾಲ ಹಿಂಪಡೆಯಲು ಕಠಿಣ ಕ್ರಮ ಕೈಗೊಳ್ಳುವ ಹಕ್ಕು ಸಹ ಬ್ಯಾಂಕ್​ಗಿದೆ’ ಎಂದು ಬ್ಯಾಂಕ್‌ಗಳ ಒಕ್ಕೂಟದ ಪರ ಬ್ಯಾರಿಸ್ಟರ್‌ ಮಾರ್ಸಿಯಾ ಶೆಕರ್ಡೆಮಿಯಾನ್‌ ಅವರು ವಾದಿಸಿದರು.

ಮಲ್ಯ ಪರ ವಾದ ಮಂಡಿಸಿದ ಬ್ಯಾರಿಸ್ಟರ್‌ ಫಿಲಿಪ್‌ ಮಾರ್ಷಲ್‌ ಇದನ್ನು ವಿರೋಧಿಸಿದರು. ಒಂದು ಹಂತದಲ್ಲಿ ವಾದ–ಪ್ರತಿವಾದ ಜೋರಾಗಿದ್ದರಿಂದ ಕಾವೇರಿದ ವಾತಾವರಣ ನಿರ್ಮಾಣಗೊಂಡಿತ್ತು. ಆಗ ಮಧ್ಯಪ್ರವೇಶಿಸಿದ ನ್ಯಾಯಾಧೀಶ ಬ್ರಿಕ್ಸ್‌ ಅವರು ಅಸಮಂಜಸ ಪ್ರಶ್ನೆಗಳನ್ನು ಕೇಳುವ ಮೂಲಕ ವಿಚಾರಣೆಯ ದಿಕ್ಕು ತಪ್ಪಿಸಬಾರದು ಎಂದು ಉಭಯ ಬ್ಯಾರಿಸ್ಟರ್‌ಗಳಿಗೆ ಸೂಚಿಸಿದ್ದಾರೆ. ಬಳಿಕ ವಿಚಾರಣೆಯನ್ನು ಮುಂದೂಡಲಾಗಿದೆ.

ಎಸ್‌ಬಿಐ ನೇತೃತ್ವದ 13 ಭಾರತೀಯ ಬ್ಯಾಂಕ್​ಗಳ ಒಕ್ಕೂಟ ಮಲ್ಯ ವಿರುದ್ಧ ಡಿಸೆಂಬರ್ 2018ರಿಂದ ತನ್ನ ಸಾಲ ಹಿಂಪಡೆಯುವುದಕ್ಕಾಗಿ ಸೆಣಸಾಡುತ್ತಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.