ETV Bharat / business

ಬಜೆಟ್​ 2020: 'ಶ್ರವಣ ದೋಷ ಮುಕ್ತ' ಕರ್ನಾಟಕ ಮಾಡಲು ಬಿಎಸ್​ವೈ ಪಣ - Karnataka state budget 2020

ಮುಖ್ಯಮಂತ್ರಿಗಳು ಮಂಡಿಸಿರುವ ರಾಜ್ಯ ಆಯವ್ಯಯ -2020ರಲ್ಲಿ ಆರೋಗ್ಯ ಮತ್ತು ವೈದ್ಯಕೀಯ ಕ್ಷೇತ್ರಕ್ಕೆ ಹೆಚ್ಚಿನ ಅನುದಾನವನ್ನು ಘೋಷಣೆ ಮಾಡಿದ್ದು, ಆರೋಗ್ಯ ಕರ್ನಾಟಕ ನಿರ್ಮಾಣ ಮಾಡಲು ಪಣ ತೊಟ್ಟಿದ್ದಾರೆ. ಕೇಂದ್ರ ಸರಕಾರದ ಸಹಯೋಗದೊಂದಿಗೆ ಹಲವು ಯೋಜನೆಗಳನ್ನು ರಾಜ್ಯದಲ್ಲಿ ಜಾರಿ ತರಲಾಗುವುದು ಎಂದು ಬಿಎಸ್‌ವೈ ಘೋಷಿಸಿದ್ದಾರೆ.

karnataka-budget-cm-yeddyurappa-health-budget-2020karnataka-budget-cm-yeddyurappa-health-budget-2020
karnataka-budget-cm-yeddyurappa-health-budget-2020
author img

By

Published : Mar 5, 2020, 3:14 PM IST

ಬೆಂಗಳೂರು: ಮುಖ್ಯಮಂತ್ರಿಗಳು ಮಂಡಿಸಿರುವ ರಾಜ್ಯ ಆಯವ್ಯಯ -2020ರಲ್ಲಿ ಆರೋಗ್ಯ ಮತ್ತು ವೈದ್ಯಕೀಯ ಕ್ಷೇತ್ರಕ್ಕೆ ಹೆಚ್ಚಿನ ಅನುದಾನವನ್ನು ಘೋಷಣೆ ಮಾಡಿದ್ದು, ಆರೋಗ್ಯ ಕರ್ನಾಟಕ ನಿರ್ಮಾಣ ಮಾಡಲು ಪಣ ತೊಟ್ಟಿದ್ದಾರೆ. ಕೇಂದ್ರ ಸರಕಾರದ ಸಹಯೋಗದೊಂದಿಗೆ ಹಲವು ಯೋಜನೆಗಳನ್ನು ರಾಜ್ಯದಲ್ಲಿ ಜಾರಿ ತರಲಾಗುವುದು ಎಂದು ಬಿಎಸ್‌ವೈ ಘೋಷಿಸಿದ್ದಾರೆ.

  • ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲ್ಲೂಕಿನ ಸರ್ಕಾರಿ ಆಸ್ಪತ್ರೆಯನ್ನು 200 ಹಾಸಿಗೆಗಳ ಆಸ್ಪತ್ರೆಯಾಗಿ ಮೇಲ್ದರ್ಜೆಗೇರಿಸಲಾಗುವುದು.
  • ಕರ್ನಾಟಕವನ್ನು “ಶ್ರವಣ ದೋಷ ಮುಕ್ತ” ಮಾಡಲು ಆರು ವರ್ಷದೊಳಗಿನ ಮಕ್ಕಳಲ್ಲಿ ಜನ್ಮಜಾತ ಕಿವುಡುತನವನ್ನು ಆರಂಭಿಕ ಹಂತದಲ್ಲಿಯೇ ಪತ್ತೆ ಹಚ್ಚಿ ಕಾಕ್ಲಿಯರ್ ಇಂಪ್ಲಾಂಟ್ ಶಸ್ತ್ರ ಚಿಕಿತ್ಸೆ ನಡೆಸಿ, ಶ್ರವಣಯಂತ್ರ ಒದಗಿಸಿ ಗುಣಪಡಿಸುವ ಯೋಜನೆ ಕೈಗೊಳ್ಳಲು ಉದ್ದೇಶಿಸಲಾಗಿದೆ. ಈ ಯೋಜನೆಗೆ 2020-21ನೇ ಸಾಲಿನಲ್ಲಿ 28 ಕೋಟಿ ರೂ.ಗಳನ್ನು ಒದಗಿಸಲಾಗುವುದು.
    karnataka-budget-cm-yeddyurappa-health-budget-2020
    ಆರೋಗ್ಯ ಕರ್ನಾಟಕ ಮಾಡಲು ಬಿಎಸ್​ವೈ ಪಣ
  • ರಾಜ್ಯದ ಎಲ್ಲಾ ತಾಲ್ಲೂಕು ಆಸ್ಪತ್ರೆಗಳಲ್ಲಿ ತೀವ್ರ ನಿಗಾ ಘಟಕಗಳನ್ನು ಸ್ಥಾಪಿಸಲಾಗಿದ್ದು, ಸಾರ್ವಜನಿಕ ಖಾಸಗಿ ಸಹಭಾಗಿತ್ವದಲ್ಲಿ ಸದರಿ ತೀವ್ರ ನಿಗಾ ಘಟಕಗಳನ್ನು ಪರಿಣಾಮಕಾರಿಯಾಗಿ ನಿರ್ವಹಿಸಲು ಉದ್ದೇಶಿಸಲಾಗಿದೆ. 2020-21ನೇ ಸಾಲಿನಲ್ಲಿ ಈ ಘಟಕಗಳನ್ನು ಪ್ರಾಯೋಗಿಕವಾಗಿ ಎರಡು ಜಿಲ್ಲೆಗಳಲ್ಲಿ ಅನುಷ್ಠಾನಗೊಳಿಸಲಾಗುವುದು.
  • ಕಿಡ್ನಿ ವೈಫಲ್ಯತೆಯಿಂದ ಬಳಲುತ್ತಿರುವ ಬಿ.ಪಿ.ಎಲ್. ಕಾರ್ಡ್ ಹೊಂದಿರುವ ರೋಗಿಗಳ ಅನುಕೂಲಕ್ಕಾಗಿ ರಾಜ್ಯದ ಆಯ್ದ ಐದು ಜಿಲ್ಲೆಗಳಲ್ಲಿ 5 ಕೋಟಿ ರೂ. ವೆಚ್ಚದಲ್ಲಿ ಉಚಿತ ಪೆರಿಟೋನಿಯಲ್ ಡಯಾಲಿಸಿಸ್ ಸೇವೆ ನೀಡಲಾಗುವುದು.
  • ಕೆ.ಸಿ. ಜನರಲ್ ಆಸ್ಪತ್ರೆ ಮತ್ತು ಇತರೆ ಐದು ಆಸ್ಪತ್ರೆಗಳ ತುರ್ತು ವೈದ್ಯಕೀಯ ಚಿಕಿತ್ಸಾ ವಿಭಾಗಗಳನ್ನು ಅಂತರಾಷ್ಟ್ರೀಯ ಮಟ್ಟಕ್ಕೆ ಮೇಲ್ದರ್ಜೆಗೇರಿಸುವುದು.
  • ಬೆಂಗಳೂರಿನ ಕೆ.ಸಿ. ಜನರಲ್ ಆಸ್ಪತ್ರೆ ಮತ್ತು ಸಿ.ವಿ. ರಾಮನ್ ಆಸ್ಪತ್ರೆಗಳಲ್ಲಿ ಹೃದಯ ರೋಗದ ಚಿಕಿತ್ಸೆಗಾಗಿ ಕ್ಯಾತ್‍ಲ್ಯಾಬ್​ ಅನ್ನು ಸಾರ್ವಜನಿಕ-ಖಾಸಗಿ ಸಹಭಾಗಿತ್ವದೊಂದಿಗೆ ಸ್ಥಾಪಿಸಲಾಗುವುದು.
  • ಹಾವೇರಿ ಜಿಲ್ಲೆಯಲ್ಲಿ 20 ಹಾಸಿಗೆಗಳ ಆಯುಷ್ ಸಂಯುಕ್ತ ಆಸ್ಪತ್ರೆಯನ್ನು 20 ಕೋಟಿ ರೂ. ವೆಚ್ಚದಲ್ಲಿ ಪ್ರಾರಂಭಿಸಲಾಗುವುದು. ಈ ಉದ್ದೇಶಕ್ಕಾಗಿ 2020-21ನೇ ಸಾಲಿನಲ್ಲಿ ಐದು ಕೋಟಿ ರೂ.ಗಳ ಅನುದಾನ ಒದಗಿಸಲಾಗುವುದು.
  • ರಾಜ್ಯದಲ್ಲಿ ನವಜಾತ ಶಿಶುಗಳ ಪೋಷಣೆ ಗುಣಮಟ್ಟ ಹೆಚ್ಚಿಸಲು, 17 ವೈದ್ಯಕೀಯ ಕಾಲೇಜುಗಳ ಆಸ್ಪತ್ರೆಗಳಲ್ಲಿರುವ ನವಜಾತ ಶಿಶುವಿನ ತೀವ್ರ ನಿಗಾ ಘಟಕಗಳನ್ನು ಹಂತ ಹಂತವಾಗಿ ಉನ್ನತೀಕರಿಸಲಾಗುವುದು. ಮಂಗಳೂರಿನ ವಿಭಾಗೀಯ ಆಧುನಿಕ ಮಕ್ಕಳ ಆರೋಗ್ಯ ಕೇಂದ್ರದ ಮಾದರಿಯಲ್ಲಿ, ರಾಜ್ಯದ ವಿವಿಧ ಭಾಗಗಳಲ್ಲಿ ಖಾಸಗಿ ಸಹಭಾಗಿತ್ವದಲ್ಲಿ ಇಂತಹ ಕೇಂದ್ರಗಳನ್ನು ಸ್ಥಾಪಿಸಲಾಗುವುದು.
  • ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ಸಹಯೋಗದೊಂದಿಗೆ ಎಲ್ಲಾ ಸರ್ಕಾರಿ ವೈದ್ಯಕೀಯ ಕಾಲೇಜುಗಳಲ್ಲಿ ತಲಾ ಮೂರು ಕೋಟಿ ರೂ. ವೆಚ್ಚದಲ್ಲಿ ಸಿಮ್ಯುಲೇಷನ್ ಲ್ಯಾಬ್‍ಗಳನ್ನು ಮತ್ತು ತಲಾ 30 ಲಕ್ಷ ರೂ.ಗಳ ವೆಚ್ಚದಲ್ಲಿ ಮಾಲಿಕ್ಯುಲಾರ್ ಬಯಾಲಜಿ ಲ್ಯಾಬ್‍ಗಳನ್ನು ಸ್ಥಾಪನೆ ಮಾಡಲಾಗುವುದು.
  • ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ಆರ್ಥಿಕ ನೆರವಿನೊಂದಿಗೆ ಒಂದು ಚರ್ಮಶಾಸ್ತ್ರ ಮತ್ತು ಸೌಂದರ್ಯವರ್ಧಕ ಶಾಸ್ತ್ರದ ಸಂಸ್ಥೆ ಮತ್ತು ಜಿರಿಯಾಟ್ರಿಕ್ಸ್ ಸಂಸ್ಥೆಗಳನ್ನು ಸ್ಥಾಪಿಸಲಾಗುವುದು.
  • ಕರ್ನಾಟಕ ರಾಜ್ಯದಿಂದ ಉತ್ತೀರ್ಣರಾಗುವ ವೈದ್ಯಕೀಯ, ಶುಶ್ರೂಷಾ, ಅರೆ-ವೈದ್ಯಕೀಯ ಮತ್ತು ಫಾರ್ಮಸಿ ವಿದ್ಯಾರ್ಥಿಗಳಿಗೆ ಉದ್ಯೋಗಾವಕಾಶ ಕಲ್ಪಿಸಲು ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದಲ್ಲಿ ಒಂದು ಕೇಂದ್ರೀಕೃತ ಉದ್ಯೋಗ ಕೋಶವನ್ನು ಸ್ಥಾಪಿಸಲಾಗುವುದು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.