ಹೈದರಾಬಾದ್: ಭಾರತೀಯ ಐಟಿ ಕ್ಷೇತ್ರದಲ್ಲಿ ಸಾಧನೆ ಮಾಡಿದ್ದ ಶಿವ ನಾಡರ್ ಅವರು ಜುಲೈ 19 ರಂದು ಎಚ್‌ಸಿಎಲ್ ಟೆಕ್ನಾಲಜೀಸ್‌ನ ವ್ಯವಸ್ಥಾಪಕ ನಿರ್ದೇಶಕ ಮತ್ತು ಮಂಡಳಿಯ ಸದಸ್ಯ ಸ್ಥಾನದಿಂದ ಅಧಿಕೃತವಾಗಿ ಕೆಳಗಿಳಿದಿದ್ದಾರೆ. ಕಳೆದ ವರ್ಷ ಜುಲೈನಲ್ಲಿ ನಾಡರ್ ಅಧ್ಯಕ್ಷ ಸ್ಥಾನದಿಂದ ನಿರ್ಗಮಿಸಿದ್ದರು.
ಇನ್ನು ನಾಡರ್ ಅಧ್ಯಕ್ಷ ಸ್ಥಾನದಿಂದ ಕೆಳಗಿಳಿದ ಬಳಿಕ ಅವರ ಮಗಳು ರೋಶ್ನಿ ಉತ್ತರಾಧಿಕಾರಿಯಾಗಿ ಆಯ್ಕೆಯಾಗಿದ್ದರು. ಇನ್ನು ಭಾರತೀಯ ಐಟಿ ಸಂಸ್ಥೆಯ ಅಧ್ಯಕ್ಷರಾದ ಮೊದಲ ಮಹಿಳೆಯಾಗಿ ರೋಶ್ನಿ ಕಾಣಿಸಿಕೊಂಡಿದ್ದಾರೆ.
ಇನ್ನು ಐಟಿ ಸೇವಾ ಕಂಪನಿ ಎಚ್‌ಸಿಎಲ್ ಟೆಕ್ನಾಲಜೀಸ್ ಜೂನ್‌ಗೆ ಕೊನೆಗೊಂಡ ತ್ರೈಮಾಸಿಕದಲ್ಲಿ 3,214 ಕೋಟಿ ರೂ. ಲಾಭ ಗಳಿಸಿದೆ ಎಂದು ತಿಳಿದು ಬಂದಿದೆ. ಕಂಪನಿಯ ವ್ಯವಸ್ಥಾಪಕ ನಿರ್ದೇಶಕ ಹಾಗೂ ಕಂಪನಿ ಆಡಳಿತ ಮಂಡಳಿಯ ಹುದ್ದೆಗಳನ್ನು ತೊರೆಯಲು ಶಿವ ನಾಡಾರ್ ನಿರ್ಧರಿಸಿದ್ದು, ಇದೇ ವೇಳೆ ಈ ಬಗ್ಗೆ ಅಧಿಕೃತವಾಗಿ ಘೋಷಿಸಿದ್ದಾರೆ. ಮುಂದೆ ಅವರು ಕಂಪನಿಯ ಗೌರವಾಧ್ಯಕ್ಷರಾಗಿ ಮುಂದುವರೆಯಲಿದ್ದಾರೆ.
ಇನ್ನು ಕಂಪನಿಯ ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿ (ಸಿಇಒ) ಸಿ. ವಿಜಯಕುಮಾರ್ ಅವರು ಕಂಪನಿಯ ವ್ಯವಸ್ಥಾಪಕ ನಿರ್ದೇಶಕರಾಗಿ ಐದು ವರ್ಷಗಳ ಅವಧಿಗೆ ಇಂದಿನಿಂದ ಅಧಿಕಾರ ವಹಿಸಿಕೊಳ್ಳಲಿದ್ದಾರೆ.