ETV Bharat / business

ಬಜೆಟ್​​ನಲ್ಲಿ ಹುಸಿಯಾದ ಮಧ್ಯಮ ವರ್ಗದ ನಿರೀಕ್ಷೆ: ಹಳೆಯ ತೆರಿಗೆ ಪದ್ಧತಿ ಮುಂದುವರೆಸಿದ್ದಕ್ಕಾಗಿ ವೈರಲ್​​ ಆದ ಮೀಮ್ಸ್​​! - ಕೇಂದ್ರ ಬಜೆಟ್‌ 2022

Budget 2022: ನಿರ್ಮಲಾ ಸೀತಾರಾಮನ್ ಮಂಡನೆ ಮಾಡಿರುವ ಬಜೆಟ್​ನಲ್ಲಿ ಮಧ್ಯಮ ವರ್ಗದ ಜನರ ನಿರೀಕ್ಷೆ ಹುಸಿಯಾಗಿದೆ. ಇದೇ ಕಾರಣವನ್ನಿಟ್ಟುಕೊಂಡು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಸಿಕ್ಕಾಪಟ್ಟೆ ಮೀಮ್ಸ್​​​ ವೈರಲ್​ ಆಗ್ತಿವೆ.

Budget 2022
Budget 2022
author img

By

Published : Feb 1, 2022, 3:05 PM IST

ನವದೆಹಲಿ : 2022-23ನೇ ಸಾಲಿನ ಕೇಂದ್ರ ಬಜೆಟ್​​ನಲ್ಲಿ ಮಧ್ಯಮ ವರ್ಗದ ಜನರ ನಿರೀಕ್ಷೆ ಹುಸಿಯಾಗಿದೆ. ವೈಯಕ್ತಿಕ ಮೂಲ ತೆರಿಗೆ ವಿನಾಯ್ತಿ ಮಿತಿ ಹೆಚ್ಚಳವಾಗಬಹುದೆಂಬ ಕನಸು ಕಂಡಿದ್ದರು. ಆದರೆ, ಇದರಲ್ಲಿ ಯಾವುದೇ ರೀತಿಯ ಬದಲಾವಣೆ ಆಗದ ಕಾರಣಕ್ಕಾಗಿ ಸಾಮಾಜಿಕ ಜಾಲತಾಣಗಳಲ್ಲಿ ಕೆಲವೊಂದು ಮೀಮ್​​ಗಳು ಹರಿದಾಡ್ತಿವೆ.

2014ರ ಬಳಿಕ ಮಂಡನೆಯಾಗಿರುವ ಬಜೆಟ್​​ಗಳಲ್ಲಿ ಮೂಲ ತೆರಿಗೆ ವಿನಾಯಿತಿ ಮಿತಿಯಲ್ಲಿ ಯಾವುದೇ ರೀತಿಯ ಬದಲಾವಣೆಯಾಗಿಲ್ಲ. ಕೋವಿಡ್​ನಿಂದಾಗಿ ಸಂಕಷ್ಟಕ್ಕೊಳಗಾಗಿರುವ ಜನರಿಗೆ ಈ ಸಲದ ಬಜೆಟ್​ನಲ್ಲಿ ಗಿಫ್ಟ್​ ಸಿಗಲಿದೆ ಎಂಬ ನಿರೀಕ್ಷೆ ಇತ್ತು. ಆದರೆ, ನಿರ್ಮಲಾ ಸೀತಾರಾಮನ್​ ಮಂಡನೆ ಮಾಡಿರುವ ಬಜೆಟ್​ನಲ್ಲಿ ಯಾವುದೇ ಬದಲಾವಣೆಯಾಗದ ಕಾರಣ ಇದೀಗ ಮೀಮ್ಸ್​​​ಗಳು ಸದ್ದು ಮಾಡುತ್ತಿವೆ.

ನಿರ್ಮಲಾ ಸೀತಾರಾಮನ್ ಮಂಡನೆ ಮಾಡಿರುವ ಬಜೆಟ್ ಗುರಿಯಾಗಿಸಿಕೊಂಡು ಸಾಮಾಜಿಕ ಜಾಲತಾಣಗಳಲ್ಲಿ ಅನೇಕರು ತರಹೇವಾರಿ ಮೀಮ್ಸ್ ಮಾಡಿದ್ದು, ಬಿಜೆಟ್​​ನಲ್ಲಿ ಜನಸಾಮಾನ್ಯರ ಕಡಗಣನೆ ಮಾಡಲಾಗಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.

ಇದನ್ನೂ ಓದಿರಿ: Central Budget: ಆದಾಯ ತೆರಿಗೆಯಲ್ಲಿ ಬದಲಾವಣೆ ಇಲ್ಲ.. ನಿರ್ಮಲಾ ಸೀತಾರಾಮನ್

ಈ ಹಿಂದೆ ಹಣಕಾಸು ಸಚಿವರಾಗಿದ್ದ ಅರುಣ್​ ಜೇಟ್ಲಿ ಮೂಲ ಆದಾಯ ತೆರಿಗೆ ವಿನಾಯಿತಿ ಮಿತಿಯನ್ನು 2 ಲಕ್ಷದಿಂದ 2.5 ಲಕ್ಷಕ್ಕೆ ಏರಿಸಿದ್ದರು. ಹಿರಿಯ ನಾಗರಿಕರಿಗೆ ವಿನಾಯಿತಿ ಮಿತಿಯನ್ನು 2.5 ಲಕ್ಷದಿಂದ 3 ಲಕ್ಷಕ್ಕೆ ಹೆಚ್ಚಿಸಿದ್ದರು.

ಹಾಗೆಯೇ 60ರಿಂದ 80 ವರ್ಷದವರಿಗೆ 3 ಲಕ್ಷ ರೂಪಾಯಿ, 80 ವರ್ಷ ಮೇಲ್ಪಟ್ಟವರಿಗೆ 5 ಲಕ್ಷ ರೂಪಾಯಿಯನ್ನು ತೆರಿಗೆ ವಿನಾಯಿತಿ ಮಿತಿಯಾಗಿ ನಿಗದಿಪಡಿಸಲಾಗಿತ್ತು. ಹಾಗೆಯೇ 60ರಿಂದ 80 ವರ್ಷದವರಿಗೆ 3 ಲಕ್ಷ ರೂಪಾಯಿ, 80 ವರ್ಷ ಮೇಲ್ಪಟ್ಟವರಿಗೆ 5 ಲಕ್ಷ ರೂಪಾಯಿಯನ್ನು ತೆರಿಗೆ ವಿನಾಯಿತಿ ಮಿತಿಯಾಗಿ ನಿಗದಿಪಡಿಸಲಾಗಿತ್ತು. ಆದ್ರೆ 2014ರ ಬಳಿಕ ಮೂಲ ತೆರಿಗೆ ವಿನಾಯಿತಿ ಮಿತಿಯಲ್ಲಿ ಯಾವುದೇ ಬದಲಾವಣೆಯಾಗಿಲ್ಲ.

ಜಾಹೀರಾತು: ನಿಮ್ಮ ಸೂಕ್ತ ಸಂಗಾತಿ ಹುಡುಕುತ್ತಿರುವಿರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ ನೋಂದಣಿ ಉಚಿತ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.