ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಇನ್ಫೋಸಿಸ್ ಅಧಿಕಾರಿಗಳೊಂದಿಗಿನ ಸಭೆಯಲ್ಲಿ ಹೊಸ ಆದಾಯ ತೆರಿಗೆ ಪೋರ್ಟಲ್‌ನ ಕುರಿತು ಕಳವಳ ವ್ಯಕ್ತಪಡಿಸಿದ್ದು, ಅದರಲ್ಲಿರುವ ಸಮಸ್ಯೆಗಳನ್ನು ಬಗೆಹರಿಸುವಂತೆ ತಿಳಿಸಿದ್ದಾರೆ.
ಹೊಸ ಆದಾಯ ತೆರಿಗೆ ಪೋರ್ಟಲ್‌ನಲ್ಲಿನ ತೊಂದರೆಗಳ ಕುರಿತು ಚರ್ಚಿಸಲು ಹಣಕಾಸು ಸಚಿವಾಲಯದ ಹಿರಿಯ ಅಧಿಕಾರಿಗಳು ಮತ್ತು ಇನ್ಫೋಸಿಸ್ ಅಧಿಕಾರಿಗಳೊಂದಿಗೆ ನಿರ್ಮಲಾ ಸೀತಾರಾಮನ್ ಸಭೆ ನಡೆಸಿದರು ಎಂದು ಆದಾಯ ತೆರಿಗೆ ಆಯುಕ್ತೆ ಸುರಭಿ ಅಹ್ಲುವಾಲಿಯಾ ಹೇಳಿದ್ದಾರೆ.
ಆದಾಯ ತೆರಿಗೆ ಪೋರ್ಟಲ್ ಅನ್ನು ಹೆಚ್ಚು ಯೂಸರ್ ಫ್ರೆಂಡ್ಲಿ ಮಾಡುವತ್ತ ಕೆಲಸ ಮಾಡಲು ಸೀತಾರಾಮನ್ ಇನ್ಫೋಸಿಸ್ಗೆ (ಸೇವಾ ಪೂರೈಕೆದಾರ) ಸೂಚಿಸಿದ್ದಾರೆ. ಆದಾಯ ತೆರಿಗೆ ಇಲಾಖೆಯ (incometax.gov.in) ಹೊಸ ಇ-ಫೈಲಿಂಗ್ ಪೋರ್ಟಲ್ 2.0 ಜುಲೈ 7ರಂದು ಪ್ರಾರಂಭವಾಗಿದ್ದು, ಹೊಸ ಪೋರ್ಟಲ್‌ನ ಕಾರ್ಯನಿರ್ವಹಣೆಯಲ್ಲಿ ಹಲವಾರು ತೊಂದರೆಗಳಿವೆ.