ನವದೆಹಲಿ: ಮುಂಬರುವ ಕೇಂದ್ರ ಹಣಕಾಸು ಬಜೆಟ್ಗೆ ಸಂಬಂಧಿಸಿದಂತೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಬುಧವಾರ ಪ್ರಮುಖ ಅರ್ಥಶಾಸ್ತ್ರಜ್ಞರೊಂದಿಗೆ ಬಜೆಟ್ ಪೂರ್ವ ಸಮಾಲೋಚನಾ ಸಭೆ ನಡೆಸಲಿದ್ದಾರೆ.
'ಕೇಂದ್ರ ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್ ಅವರು ಮುಂಬರುವ 2022-23ನೇ ಸಾಲಿನ ಕೇಂದ್ರ ಬಜೆಟ್ಗೆ ಸಂಬಂಧಿಸಿದಂತೆ ಬುಧವಾರ ಮಧ್ಯಾಹ್ನ ನಡೆಯಲಿರುವ ಬಜೆಟ್ ಪೂರ್ವ ಸಮಾಲೋಚನಾ ಸಭೆಯ ಅಧ್ಯಕ್ಷತೆ ವಹಿಸಲಿದ್ದಾರೆ. ಈ ಸಭೆ ವಿಡಿಯೋ ಕಾನ್ಫರೆನ್ಸ್ ಮೂಲಕ ನಡೆಯಲಿದ್ದು, ದೇಶದ ಪ್ರಮುಖ ಅರ್ಥಶಾಸ್ತ್ರಜ್ಞರು ಈ ಸಭೆಯಲ್ಲಿ ಭಾಗಿಯಾಗಲಿದ್ದಾರೆ' ಎಂದು ಕೇಂದ್ರ ಹಣಕಾಸು ಸಚಿವಾಲಯ ಟ್ವೀಟ್ ಮಾಡಿದೆ.
ಪ್ರತಿ ವರ್ಷ ಫೆಬ್ರವರಿ 1ರಂದು ಸಂಸತ್ನಲ್ಲಿ ಕೇಂದ್ರ ಸಚಿವರು ಹಣಕಾಸು ಬಜೆಟ್ ಅನ್ನು ಮಂಡನೆ ಮಾಡಲಿದ್ದು, ಈ ಹಿನ್ನೆಲೆಯಲ್ಲಿ ಹಲವು ಪೂರ್ವಭಾವಿ ಸಭೆಗಳನ್ನು ನಡೆಸಲಾಗುತ್ತದೆ.
ಇದನ್ನೂ ಓದಿ: ಪೆಟ್ರೋಲ್, ಡೀಸೆಲ್ ಜಿಎಸ್ಟಿಗೆ ಸೇರಿಸಲು ಶಿಫಾರಸು ಬಂದಿಲ್ಲ: ಸಂಸತ್ತಿಗೆ ಕೇಂದ್ರ ಸರ್ಕಾರ ಮಾಹಿತಿ