ETV Bharat / business

ಪ್ರಾದೇಶಿಕ ಅಸಮತೋಲನ ನಿವಾರಣೆ ಸರ್ಕಾರದ ಗುರಿ: ತಾಲೂಕುಗಳ ಅಭಿವೃದ್ಧಿಗೆ ವಿಶೇಷ ಯೋಜನೆ - ಕರ್ನಾಟಕ ಬಜೆಟ್​ 2020 ಕನ್ನಡ

ತಾಲೂಕುಗಳ ಅಭಿವೃದ್ಧಿಗಾಗಿ ವಿಶೇಷ ಅಭಿವೃದ್ಧಿ ಯೋಜನೆಯನ್ನು ಮುಂದುವರೆಸಲಾಗುವುದು. ಈ ಯೋಜನೆಗೆ 2020-21ನೇ ಸಾಲಿನಲ್ಲಿ 3,060 ಕೋಟಿ ರೂ. ಒದಗಿಸಲಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.

Our goal is to alleviate regional imbalancesತಾಲೂಕು ಅಭಿವೃದ್ಧಿಗಾಗಿ ವಿಶೇಷ ಯೋಜನೆ
ತಾಲೂಕು ಅಭಿವೃದ್ಧಿಗಾಗಿ ವಿಶೇಷ ಯೋಜನೆ
author img

By

Published : Mar 5, 2020, 5:27 PM IST

ಬೆಂಗಳೂರು: ರಾಜ್ಯದ ಪ್ರಾದೇಶಿಕ ಅಸಮತೋಲನೆಯನ್ನು ನಿವಾರಿಸಲು ವಿಶೇಷ ಅಭಿವೃದ್ಧಿ ಯೋಜನೆಯನ್ನು ಬಹಳ ವರ್ಷಗಳಿಂದ ಅನುಷ್ಠಾನಗೊಳಿಸಲಾಗುತ್ತಿದೆ. ಪ್ರಾದೇಶಿಕ ಅಸಮತೋಲನೆಯನ್ನು ನಿವಾರಿಸುವುದು ಈ ಸರ್ಕಾರದ ಮುಖ್ಯವಾದ ಗುರಿಯಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಬಜೆಟ್​ನಲ್ಲಿ ತಿಳಿಸಿದ್ದಾರೆ.

ತಾಲೂಕುಗಳ ಅಭಿವೃದ್ಧಿಗಾಗಿ ವಿಶೇಷ ಅಭಿವೃದ್ಧಿ ಯೋಜನೆಯನ್ನು ಮುಂದುವರೆಸಲಾಗುವುದು. ಈ ಯೋಜನೆಗೆ 2020-21ನೇ ಸಾಲಿನಲ್ಲಿ 3,060 ಕೋಟಿ ರೂ. ಗಳನ್ನು ಒದಗಿಸಲಾಗಿದೆ ಎಂದು ತಿಳಿಸಿದರು.

ಹೈದ್ರಾಬಾದ್-ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯನ್ನು ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ ಎಂದು ಮರುನಾಮಕರಣ ಮಾಡಲಾಗಿದೆ. ಕಲ್ಯಾಣ ಕರ್ನಾಟಕ ಭಾಗದ ಸರ್ವತೋಮುಖ ಅಭಿವೃದ್ಧಿಗೆ ಈ ಸರ್ಕಾರ ಬದ್ಧವಾಗಿದೆ. ಇದಕ್ಕಾಗಿ ಮಂಡಳಿಗೆ 2020-21ನೇ ಸಾಲಿನಲ್ಲಿ 1,500 ಕೋಟಿ ರೂ.ಗಳ ಅನುದಾನ ನೀಡಲಾಗುವುದು ಎಂದು ಘೋಷಿಸಿದರು.

ಕಲ್ಯಾಣ ಕರ್ನಾಟಕದ ಸರ್ವತೋಮುಖ ಅಭಿವೃದ್ಧಿಗಾಗಿ ಕಲ್ಯಾಣ ಕರ್ನಾಟಕ ಮಾನವ ಸಂಪನ್ಮೂಲ, ಕೃಷಿ ಹಾಗೂ ಸಾಂಸ್ಕೃತಿಕ ಸಂಘವನ್ನು ಹೊಸದಾಗಿ ರಚಿಸಲಾಗಿದೆ. ಕಲ್ಯಾಣ ಕರ್ನಾಟಕ ವ್ಯಾಪ್ತಿಯ ಆರು ಜಿಲ್ಲೆಗಳಲ್ಲಿ ಕೃಷಿ, ಶಿಕ್ಷಣ, ಆರೋಗ್ಯ, ಮಹಿಳಾ ಸಬಲೀಕರಣ, ಸ್ವಯಂ ಉದ್ಯೋಗ,ಯುವ ಸಬಲೀಕರಣ ಮುಂತಾದ ವಲಯಗಳಲ್ಲಿ ಕಾರ್ಯಕ್ರಮಗಳನ್ನು ರೂಪಿಸಿ ಈ ಪ್ರದೇಶದ ಮಾನವ ಸಂಪನ್ಮೂಲ ಅಭಿವೃದ್ಧಿಗೆ ಶ್ರಮಿಸುವುದು ಈ ಸಂಘದ ಉದ್ದೇಶವಾಗಿದೆ. ಈ ಚಟುವಟಿಕೆಗಳನ್ನು ಮುಂಬರುವ ವರ್ಷಗಳಲ್ಲಿ 500 ಕೋಟಿ ರೂ. ವೆಚ್ಚದಲ್ಲಿ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಪಂಚಾಯತ್‍ರಾಜ್ ಸಂಸ್ಥೆಗಳಿಗೆ ಅಧಿಕಾರವನ್ನು ವಿಕೇಂದ್ರೀಕರಣಗೊಳಿಸುವ ನಿಟ್ಟಿನಲ್ಲಿ ಕರ್ನಾಟಕವು ಇಡೀ ದೇಶಕ್ಕೆ ಮಾದರಿಯಾಗಿದೆ. ಈ ವ್ಯವಸ್ಥೆಯನ್ನು ಮತ್ತಷ್ಟು ವಿಕೇಂದ್ರೀಕರಣಗೊಳಿಸುವ ಹಾಗೂ ಬಲಪಡಿಸುವ ಉದ್ದೇಶದಿಂದ ಪಂಚಾಯತ್‍ರಾಜ್ ಆಯುಕ್ತಾಲಯವನ್ನು 2020-21ನೇ ಸಾಲಿನಿಂದ ಪ್ರಾರಂಭಿಸಲಾಗುವುದು ಎಂದು ಘೋಷಿಸಿದರು.

ರಾಜ್ಯದಲ್ಲಿ ಚಾಲ್ತಿಯಲ್ಲಿರುವ ನಮ್ಮ ಗ್ರಾಮ ನಮ್ಮ ರಸ್ತೆ ಯೋಜನೆಯು 2020-21ನೇ ಸಾಲಿನಲ್ಲಿ ಮುಕ್ತಾಯಗೊಳ್ಳಲಿದೆ. ಗ್ರಾಮೀಣ ರಸ್ತೆಗಳ ಸುಧಾರಣೆಗಾಗಿ ಹೊಸದಾಗಿ 'ಗ್ರಾಮೀಣ ಸುಮಾರ್ಗ ಯೋಜನೆ'ಯನ್ನು ಜಾರಿಗೆ ತರಲು ಪ್ರಸ್ತಾಪಿಸಲಾಗಿದೆ. ಇದರಡಿಯಲ್ಲಿ ಮುಂದಿನ ಐದು ವರ್ಷಗಳಲ್ಲಿ 20,000 ಕಿ.ಮೀ. ಗ್ರಾಮೀಣ ರಸ್ತೆ ಅಭಿವೃದ್ಧಿಪಡಿಸಲು ಉದ್ದೇಶಿಸಿದೆ. ಗ್ರಾಮೀಣ ರಸ್ತೆಗಳ ಸುಧಾರಣೆಗಾಗಿ 2020-21ನೇ ಸಾಲಿನಲ್ಲಿ 780 ಕೋಟಿ ರೂ. ಒದಗಿಸಲಾಗಿದೆ ಎಂದು ಘೋಷಿಸಿದರು.

'ಕರ್ನಾಟಕ ನಗ ವೀಕ್ಷಣಾಲಯ' ಸ್ಥಾಪನೆಗೆ ವಿಸ್ತೃತ ಯೋಜನಾ ವರದಿಯನ್ನು ಸಿದ್ಧಪಡಿಸಿ ಅನುಷ್ಠಾನಗೊಳಿಸಲು ಉದ್ದೇಶಿಸಲಾಗಿದೆ. ಇದು ತಂತ್ರಜ್ಞಾನ ಆಧಾರಿತ ಆಡಳಿತದ ಪ್ರಾತ್ಯಕ್ಷಿಕೆ, ದತ್ತಾಂಶಗಳ ಬಳಕೆ ಆಧಾರಿತ ನೀತಿ, ನಿರೂಪಣೆ ಮತ್ತು ದತ್ತಾಂಶಗಳ ಮುಕ್ತ ಉಪಯೋಗಕ್ಕೆ ಪೂರಕವಾಗಲಿದೆ ಎಂದು ತಿಳಿಸಿದರು.

ಇತ್ತೀಚೆಗೆ ಸ್ವಿಟ್ಜರ್​ಲ್ಯಾಂಡ್​ನ ದಾವೋಸ್‍ನಲ್ಲಿ ನಡೆದ ‘ವಿಶ್ವ ಆರ್ಥಿಕ ವೇದಿಕೆ’ಯ ಸಮ್ಮೇಳನದಲ್ಲಿ ಕರ್ನಾಟಕ ರಾಜ್ಯದ ಪರವಾಗಿ ನಾವು ಭಾಗವಹಿಸಿದ್ದೇವೆಂದು ತಿಳಿಸಲು ಹರ್ಷಿಸುತ್ತೇನೆ. ನಾವು 40 ಕ್ಕೂ ಹೆಚ್ಚು ಅಂತರಾಷ್ಟ್ರೀಯ ಕಂಪನಿಗಳೊಂದಿಗೆ ಮತ್ತು ಹಲವಾರು ಹೂಡಿಕೆದಾರರೊಂದಿಗೆ ಸಂವಾದ ನಡೆಸಿದ್ದೇವೆ. ಈ ಸಂದರ್ಭದಲ್ಲಿ ಕರ್ನಾಟಕದಲ್ಲಿ ಕೈಗಾರಿಕೆಗಳನ್ನು ಸ್ಥಾಪಿಸಲು ಹಾಗೂ ಹೂಡಿಕೆ ಮಾಡಲು ಅತ್ಯುತ್ತಮವಾದ ವಾತಾವರಣವಿದ್ದರೂ ಸಹ ಭೂ ಖರೀದಿ ಹಾಗೂ ವಿವಿಧ ಪ್ರಾಧಿಕಾರಗಳಿಂದ ಅಗತ್ಯ ಅನುಮೋದನೆ ಪಡೆಯುವುದು ಕ್ಲಿಷ್ಟಕರವಾಗಿದೆ ಎಂಬ ವಿಷಯವನ್ನು ನಮ್ಮ ಗಮನಕ್ಕೆ ತಂದಿರುತ್ತಾರೆ. ನಮ್ಮ ಸರ್ಕಾರ ಈ ವಿಷಯವನ್ನು ಆದ್ಯತೆಯ ಮೇರೆಗೆ ಸುಧಾರಿಸಲು ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಲಿದೆ ಎಂದು ತಿಳಿಸಿದರು.

ರಾಜ್ಯದಲ್ಲಿ ಹೂಡಿಕೆದಾರರಿಗೆ ಉತ್ತೇಜನ ನೀಡಲು, ಕೈಗಾರಿಕೆ ಸ್ಥಾಪನೆಗೆ ಗುರುತಿಸುವ ಜಾಗದಲ್ಲಿ ನೇರವಾಗಿ ಭೂ ಮಾಲೀಕರಿಂದ ಭೂಮಿ ಖರೀದಿಸಲು ಅನುಕೂಲವಾಗುವಂತೆ ಸಂಬಂಧಿಸಿದ ಕಾಯ್ದೆಗಳಿಗೆ ತಿದ್ದುಪಡಿ ತಂದು ನಿಯಮಗಳನ್ನು ರೂಪಿಸಲಾಗುವುದು. ಜಾಗತಿಕ ಮಟ್ಟದಲ್ಲಿ ರಾಜ್ಯದಲ್ಲಿ ಹೂಡಿಕೆ ಅವಕಾಶಗಳನ್ನು ಪ್ರದರ್ಶಿಸಲು 2020ರ ನವೆಂಬರ್​ನಲ್ಲಿ 'ಇನ್‍ವೆಸ್ಟ್ ಕರ್ನಾಟಕ-2020' ಜಾಗತಿಕ ಹೂಡಿಕೆದಾರರ ಸಮಾವೇಶವನ್ನು ಬೆಂಗಳೂರಿನಲ್ಲಿ ಆಯೋಜಿಸಲಾಗುವುದು ಎಂದು ತಿಳಿಸಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.