ETV Bharat / business

ಪಿಎಂ ಸ್ವನಿಧಿ ಯೋಜನೆ: ಫಲಾನುಭವಿ ಬೀದಿ ಬದಿ ವ್ಯಾಪಾರಿಗಳ ಜತೆ ನಾಳೆ ಮೋದಿ ಸಂವಾದ - PM Modi interact with SVANidhi beneficiaries

ಕೋವಿಡ್ -19 ಸಾಂಕ್ರಾಮಿಕದಿಂದ ಸಂಕಷ್ಟಕ್ಕೆ ತುತ್ತಾಗಿರುವ ಬೀದಿ ಬದಿ ವ್ಯಾಪಾರಿಗಳ ಜೀವನೋಪಾಯ ಚಟುವಟಿಕೆಗಳನ್ನು ಪುನಾರಂಭಿಸಲು ಆರ್ಥಿಕ ನೆರವು ನೀಡುವ ಉದ್ದೇಶದಿಂದ ಪ್ರಧಾನಮಂತ್ರಿಗಳ ಬೀದಿ ಬದಿ ವ್ಯಾಪಾರಿಗಳ ಆತ್ಮನಿರ್ಭರ್ ನಿಧಿ (ಪಿಎಂ ಸ್ವನಿಧಿ) ಯೋಜನೆಯನ್ನು 2020ರ ಜೂನ್ 1ರಂದು ಆರಂಭಿಸಲಾಯಿತು.

PM Modi
ಪಿಎಂ ಸ್ವನಿಧಿ ಯೋಜನೆ
author img

By

Published : Oct 26, 2020, 4:15 PM IST

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ನಾಳೆ (ಮಂಗಳವಾರ ಅ. 27ರಂದು) ಬೆಳಗ್ಗೆ 10.30ಕ್ಕೆ ವಿಡಿಯೋ ಕಾನ್ಫರೆನ್ಸ್ ಮೂಲಕ ಉತ್ತರಪ್ರದೇಶದ ಪಿಎಂ ಸ್ವನಿಧಿ ಯೋಜನೆಯ ಫಲಾನುಭವಿಗಳೊಂದಿಗೆ ಸಂವಾದ ನಡೆಸಲಿದ್ದಾರೆ.

ಉತ್ತರಪ್ರದೇಶದ ಮುಖ್ಯಮಂತ್ರಿಗಳೂ ಸಹ ಈ ಸಂದರ್ಭದಲ್ಲಿ ಭಾಗವಹಿಸಲಿದ್ದಾರೆ. ಕೋವಿಡ್-19 ಸಾಂಕ್ರಾಮಿಕದಿಂದ ಸಂಕಷ್ಟಕ್ಕೆ ತುತ್ತಾಗಿರುವ ಬೀದಿ ಬದಿ ವ್ಯಾಪಾರಿಗಳ ಜೀವನೋಪಾಯ ಚಟುವಟಿಕೆಗಳನ್ನು ಪುನಾರಂಭಿಸಲು ಆರ್ಥಿಕ ನೆರವು ನೀಡುವ ಉದ್ದೇಶದಿಂದ ಪ್ರಧಾನಮಂತ್ರಿಗಳ ಬೀದಿ ಬದಿ ವ್ಯಾಪಾರಿಗಳ ಆತ್ಮನಿರ್ಭರ್ ನಿಧಿ (ಪಿಎಂ ಸ್ವನಿಧಿ) ಯೋಜನೆಯನ್ನು 2020ರ ಜೂನ್ 1ರಂದು ಆರಂಭಿಸಲಾಯಿತು.

ಈವರೆಗೆ ಈ ಯೋಜನೆಯಡಿ ಒಟ್ಟು 24 ಲಕ್ಷಕ್ಕೂ ಅಧಿಕ ಅರ್ಜಿಗಳನ್ನು ಸ್ವೀಕರಿಸಲಾಗಿದೆ. 12 ಲಕ್ಷಕ್ಕೂ ಅಧಿಕ ಅರ್ಜಿಗಳಿಗೆ ಸಾಲವನ್ನು ಅನುಮೋದಿಸಲಾಗಿದೆ. 5.35 ಲಕ್ಷ ಸಾಲಗಳನ್ನು ಈಗಾಗಲೇ ವಿತರಿಸಲಾಗಿದೆ. ಉತ್ತರ ಪ್ರದೇಶ ರಾಜ್ಯವೊಂದರಲ್ಲೇ 6 ಲಕ್ಷಕ್ಕೂ ಅಧಿಕ ಬೀದಿ ಬದಿ ವ್ಯಾಪಾರಿಗಳು ಅರ್ಜಿ ಸಲ್ಲಿಸಿದ್ದು, ಆ ಪೈಕಿ 3.27 ಲಕ್ಷ ಅರ್ಜಿಗಳಲ್ಲಿ ಸಾಲ ಅನುಮೋದಿಸಲಾಗಿದೆ ಮತ್ತು 1.87 ಲಕ್ಷ ಸಾಲಗಳನ್ನು ವಿತರಣೆ ಮಾಡಲಾಗಿದೆ.

ಉತ್ತರ ಪ್ರದೇಶ ರಾಜ್ಯಾದ್ಯಂತ ಎಲ್ಲ ಫಲಾನುಭವಿಗಳು ಸಂವಾದ ಕಾರ್ಯಕ್ರಮಕ್ಕೆ ಸಾಕ್ಷಿಯಾಗಲಿದ್ದಾರೆ. ಆ ಸಂವಾದ ಕಾರ್ಯಕ್ರಮವನ್ನು ಡಿಡಿ ನ್ಯೂಸ್ ನೇರ ಪ್ರಸಾರ ಮಾಡಲಿದೆ.

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.