ನವದೆಹಲಿ: ಕೋವಿಡ್ ಎರಡನೇ ಅಲೆಯಿಂದಾಗಿ ಪ್ರಸಕ್ತ ಹಣಕಾಸು ವರ್ಷದಲ್ಲಿ ದೇಶಕ್ಕೆ 2 ಲಕ್ಷ ಕೋಟಿ ರೂ. ನಷ್ಟವಾಗಬಹುದು ಎಂದು ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ (ಆರ್‌ಬಿಐ) ಜೂನ್ 2021 ರ ತನ್ನ ಮಾಸಿಕ ಬುಲೆಟಿನ್ನಲ್ಲಿ ವರದಿ ಮಾಡಿದೆ.
ನಗರಗಳಿಂದ ಹಳ್ಳಿ ಹಳ್ಳಿಗೂ ವೈರಸ್ ದಾಪುಗಾಲಿಟ್ಟು, ಅಲ್ಲಿನ ಉದ್ಯೋಗಗಳನ್ನೂ ಕಸಿದುಕೊಂಡ ಕಾರಣ ದೇಶೀಯ ಬೇಡಿಕೆ ಕುಸಿದಿದೆ. ಹೀಗಾಗಿ ಕಳೆದ ಬಾರಿಗಿಂತ ಈ ಬಾರಿ ದೇಶದ ಆರ್ಥಿಕತೆಗೆ ಹೆಚ್ಚು ಹೊಡೆತ ಬೀಳಲಿದೆ ಎಂದು ಆರ್‌ಬಿಐ ತಿಳಿಸಿದೆ. ಆದರೆ 2ನೇ ಅಲೆಯಲ್ಲಿ ಕೃಷಿ ಉತ್ಪಾದನೆ ಕಡಿಮೆಯಾಗಿದ್ದು, ಕೈಗಾರಿಕಾ ಉತ್ಪಾದನೆ ಮತ್ತು ರಫ್ತು ಹೆಚ್ಚಾಗಿದೆ ಎಂದೂ ತಿಳಿಸಿದೆ.
ಇದನ್ನೂ ಓದಿ: Mehul Choksi ಒಡೆತನದ ಸಂಸ್ಥೆಗಳಿಂದ ಪಿಎನ್ಬಿಗೆ 6 ಸಾವಿರ ಕೋಟಿ ರೂ. ವಂಚನೆ- ಸಿಬಿಐ
ದೇಶದಲ್ಲಿ ತುರ್ತು ಆರೋಗ್ಯ ಪರಿಸ್ಥಿತಿ ಹಿನ್ನೆಲೆಯಲ್ಲಿ ವಿಶ್ವದಾದ್ಯಂತ ರಾಷ್ಟ್ರಗಳಿಂದ ಆರ್ಥಿಕ ನೆರವು ಪಡೆಯುವುದು ಭಾರತಕ್ಕೆ ಅನಿವಾರ್ಯದ ವಾತಾವರಣ ಸೃಷ್ಟಿಸಿತ್ತು. ಆದರೆ ಯಶಸ್ವಿ ವ್ಯಾಕ್ಸಿನೇಷನ್ ಅಭಿಯಾನವು ಪರಿಸ್ಥಿತಿಯನ್ನು ಸುಧಾರಿಸುತ್ತಿದೆ ಎಂದು ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಅಭಿಪ್ರಾಯಪಟ್ಟಿದೆ.