ETV Bharat / business

ಉದ್ಯಮದವರ ಸಹಯೋಗದೊಂದಿಗೆ ಆಕ್ಸಲರೇಷನ್​ ಪ್ರೋಗ್ರಾಂ​ ಪ್ರಾರಂಭ

ನವೋದ್ಯಮಗಳ ವೇಗ ವರ್ಧಿಸಲು ಹಾಗೂ ಅವುಗಳು ದೇಶ ವಿದೇಶಗಳ ಮಾರುಕಟ್ಟೆಗೆ ಪ್ರವೇಶಿಸಲು ಸಹಾಯಕವಾಗಲು ಉದ್ಯಮದವರ ಸಹಯೋಗದೊಂದಿಗೆ ಆಕ್ಸಲರೇಷನ್​ ಪ್ರೋಗ್ರಾಮ್​ (Acceleration Programme)ನ್ನು ಪ್ರಾರಂಭಿಸಲಾಗುವುದು ಎಂದು ಇಂದಿನ ಬಜೆಟ್​ ಮಂಡನೆಯಲ್ಲಿ ಬಿಎಸ್​ವೈ ಘೋಷಿಸಿದ್ದಾರೆ.

(Acceleration Programme
ಆಕ್ಸಲರೇಷನ್​ ಪ್ರೋಗ್ರಾಮ್
author img

By

Published : Mar 5, 2020, 7:52 PM IST

ಬೆಂಗಳೂರು: ನವೋದ್ಯಮಗಳ ವೇಗ ವರ್ಧಿಸಲು ಹಾಗೂ ಅವುಗಳು ದೇಶ ವಿದೇಶಗಳ ಮಾರುಕಟ್ಟೆಗೆ ಪ್ರವೇಶಿಸಲು ಸಹಾಯಕವಾಗಲು ಉದ್ಯಮದವರ ಸಹಯೋಗದೊಂದಿಗೆ ಅಕ್ಸಲರೇಷನ್​ ಪ್ರೋಗ್ರಾಮ್​ (Acceleration Programme)ನ್ನು ಪ್ರಾರಂಭಿಸಲಾಗುವುದು ಎಂದು ಇಂದಿನ ಬಜೆಟ್​ ಮಂಡನೆಯಲ್ಲಿ ಬಿಎಸ್​ವೈ ಘೋಷಿಸಿದ್ದಾರೆ.

2020-21ನೇ ಸಾಲಿನಲ್ಲಿ ಮೂರು ಕೋಟಿ ರೂ.ಗಳ ಅನುದಾನವನ್ನು ಒದಗಿಸಲಿದ್ದು, ರಾಜ್ಯದ 11 ಜಿಲ್ಲೆಗಳಲ್ಲಿ ಕಾರ್ಯಾಚರಣೆಯಲ್ಲಿರುವ ‘ಸಂಚಾರಿ ಡಿಜಿಟಲ್ ತಾರಾಲಯಗಳು’, ಖಗೋಳ ವಿಜ್ಞಾನದ ವಿಸ್ಮಯಗಳ ಬಗ್ಗೆ ಗ್ರಾಮೀಣ ಶಾಲೆಗಳ ವಿದ್ಯಾರ್ಥಿಗಳನ್ನು ಸುಶಿಕ್ಷಿತರನ್ನಾಗಿಸುವಲ್ಲಿ ಯಶಸ್ವಿಯಾಗಿವೆ. ಈ ಸೌಲಭ್ಯವನ್ನು ಐದು ಕೋಟಿ ರೂ. ವೆಚ್ಚದಲ್ಲಿ ರಾಜ್ಯದ ಐದು ಇತರೆ ಜಿಲ್ಲೆಗಳಿಗೆ ವಿಸ್ತರಿಸಲಾಗುವುದು ಎಂದಿದ್ದಾರೆ.

ಪದವಿ ಪೂರ್ವ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿರುವ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಗುರುತಿಸಿ, ಅವರಿಗೆ ಶಿಕ್ಷಣ ನೀಡಲು ‘ವಿಜ್ಞಾನ ಪ್ರತಿಭಾ ಶೋಧನೆ’ ಕಾರ್ಯಕ್ರಮವನ್ನು ಪ್ರಾರಂಭಿಸಲಾಗುವುದು. ಪ್ರಮುಖ ವಿಜ್ಞಾನ ಸಂಸ್ಥೆಗಳ ಮೂಲಕ ಸುಮಾರು 500 ವಿದ್ಯಾರ್ಥಿಗಳನ್ನು ಆಯ್ಕೆ ಮಾಡಿ ಎರಡು ವರ್ಷಗಳವರೆಗೆ ಶಿಕ್ಷಣ ನೀಡಲಾಗುವುದು. ಆಯ್ಕೆಯಾದ ವಿದ್ಯಾರ್ಥಿಗಳಿಗೆ ಮಾಸಿಕ 1000 ರೂ.ಗಳ ಶಿಷ್ಯವೇತನವನ್ನು ನೀಡಲಾಗುವುದು ಎಂದು ತಿಳಿಸಿದರು.

ಮುಖ್ಯಮಂತ್ರಿಗಳ ಕೌಶಲ್ಯ ಕರ್ನಾಟಕ ಯೋಜನೆಯು ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆಯಾಗಿದೆ. ಈ ಯೋಜನೆಯಡಿ ಈವರೆಗೆ ವಸತಿರಹಿತ ತರಬೇತಿಯನ್ನು ನಡೆಸಲಾಗುತ್ತಿದೆ. ಬಹಳಷ್ಟು ತರಬೇತಿ ಸಂಸ್ಥೆಗಳು ನಗರ ಹಾಗೂ ಜಿಲ್ಲಾ ಕೇಂದ್ರಗಳಲ್ಲಿ ಕಾರ್ಯನಿರ್ವಹಿಸುತ್ತಿವೆ. ಗ್ರಾಮೀಣ ಯುವಕ/ಯುವತಿಯರು ತರಬೇತಿಯನ್ನು ಪಡೆಯಲು ನೆರವಾಗಲು ಕೇಂದ್ರ ಸರ್ಕಾರದ ಸಾಮಾನ್ಯ ವೆಚ್ಚ ನಿಯಮಾವಳಿಗನುಸಾರವಾಗಿ ವಸತಿ ತರಬೇತಿ ಕಾರ್ಯಕ್ರಮವನ್ನು ಪ್ರಾರಂಭಿಸಲಾಗುವುದು. ಈ ಉದ್ದೇಶಕ್ಕಾಗಿ 2020-21ನೇ ಸಾಲಿನಲ್ಲಿ 20 ಕೋಟಿ ರೂ. ಗಳನ್ನು ಒದಗಿಸಲಾಗುವುದು ಎನ್ನಲಾಗಿದೆ.

ಸಾರ್ವಜನಿಕ ಖಾಸಗಿ ಸಹಭಾಗಿತ್ವದೊಂದಿಗೆ ಬೆಳಗಾವಿ, ಹುಬ್ಬಳ್ಳಿ, ಮಂಗಳೂರು, ಶಿವಮೊಗ್ಗ, ಹಾಸನ, ತುಮಕೂರು ಮತ್ತು ಹರಿಹರದ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರಗಳಲ್ಲಿ 353 ಕೋಟಿ ರೂ. ವೆಚ್ಚದಲ್ಲಿ ಉತ್ಕೃಷ್ಟತಾ ಕೇಂದ್ರಗಳನ್ನು ಸ್ಥಾಪಿಸಲಾಗುವುದು. ಇದರಿಂದ ಕೈಗಾರಿಕಾ ಉದ್ಯಮ ಕ್ಷೇತ್ರಗಳ ಉನ್ನತ ಮಟ್ಟದ ಡೊಮೈನ್‍ಗಳಲ್ಲಿ ಕೌಶಲ್ಯ ತರಬೇತಿ ನೀಡುವುದರ ಮೂಲಕ ರಾಜ್ಯದ ಯುವ ಜನತೆಗೆ ಉದ್ಯೋಗವಕಾಶವನ್ನು ಹೆಚ್ಚಿಸಲಾಗುವುದು.

ಮುಂದಿನ ಐದು ವರ್ಷಗಳಲ್ಲಿ 12,600 ವಿದ್ಯಾರ್ಥಿಗಳಿಗೆ ಉದ್ಯೋಗ ನಿಯುಕ್ತಿಗೊಳಿಸುವ ಗುರಿಯನ್ನು ಹೊಂದಲಾಗಿದೆ ಎಂದು ಬಜೆಟ್​ನಲ್ಲಿ ತಿಳಿಸಲಾಗಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.