ನವದೆಹಲಿ : ಕೊರೊನಾ ವೈರಸ್ ಸಾಂಕ್ರಾಮಿಕ ಮಧ್ಯೆ ಅಂತಾರಾಷ್ಟ್ರೀಯ ವಿಮಾನಗಳ ಅಮಾನತು ಆದೇಶವನ್ನು ಅಗಸ್ಟ್ 31ರವರೆಗೆ ವಿಸ್ತರಿಸಲಾಗಿದೆ ಎಂದು ವಿಮಾನಯಾನ ನಿಯಂತ್ರಕ ಡಿಜಿಸಿಎ ತಿಳಿಸಿದೆ.
ಅಂತಾರಾಷ್ಟ್ರೀಯ ವಾಣಿಜ್ಯ ಸೇವೆಗಳ ಹಾರಾಟ ಸ್ಥಗಿತವನ್ನು ಜುಲೈ 31ರವರೆಗೆ ನಿಗದಿಪಡಿಸಲಾಗಿತ್ತು. ಕೊರೊನಾ ಸಾಂಕ್ರಾಮಿಕ ಹಿನ್ನೆಲೆ ಮಾರ್ಚ್ ಅಂತ್ಯದಲ್ಲಿ ಸಾಗರೋತ್ತರ ವಿಮಾನಗಳ ಸೇವೆ ಸ್ಥಗಿತಗೊಳಿಸಲಾಗಿತ್ತು. ಸರಕು ಮತ್ತು ಡಿಜಿಸಿಎ ಅನುಮೋದಿಸಿದ ವಿಮಾನಗಳ ಹಾರಾಟಕ್ಕೆ ಮಾತ್ರವೇ ಅನುಮತಿ ನೀಡಲಾಗಿದೆ.
ಭಾರತದಿಂದ ವಿದೇಶಗಳಿಗೆ/ವಿದೇಶಗಳಿಂದ ಭಾರತಕ್ಕೆ ಹಾರಾಟ ನಡೆಸುವ ಷೆಡ್ಯೂಲ್ಡ್ ಅಂತಾರಾಷ್ಟ್ರೀಯ ವಾಣಿಜ್ಯ ಪ್ರಯಾಣಿಕರ ಸೇವೆಯ ಅಮಾನತು ಅಗಸ್ಟ್ 31ರವರೆಗೆ ವಿಸ್ತರಿಸಲು ನಿರ್ಧರಿಸಿದೆ ಎಂದು ನಾಗರಿಕ ವಿಮಾನಯಾನ ನಿರ್ದೇಶನಾಲಯ(ಡಿಜಿಸಿಎ) ಪ್ರಕಟಣೆಯಲ್ಲಿ ತಿಳಿಸಿದೆ.