ನವದೆಹಲಿ: ಕೇಂದ್ರ ಸರ್ಕಾರದಿಂದ 2021-22ನೇ ಸಾಲಿನ ಬಜೆಟ್ ಮಂಡನೆಯಾಗಿದ್ದು, ಇದಕ್ಕೆ ಕೆಲವರಿಂದ ತೀವ್ರ ವಿರೋಧ ವ್ಯಕ್ತವಾಗುತ್ತಿದೆ. ಇದೇ ವಿಷಯವಾಗಿ ಮಾತನಾಡಿರುವ ರೈತ ಸಂಘಟನೆ ಮುಖಂಡ ರಾಕೇಶ್ ಟಿಕಾಯತ್ ಪ್ರತ್ಯೇಕ ಕೃಷಿ ಬಜೆಟ್ ಮಂಡನೆ ಮಾಡುವಂತೆ ಆಗ್ರಹಿಸಿದ್ದಾರೆ.
ಗಾಜಿಪೂರ್ ಗಡಿಯಲ್ಲಿ ಕೃಷಿ ಕಾಯ್ದೆಗಳ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ಅವರು, ಕೃಷಿ ಸಮುದಾಯ ಅನೇಕ ತೊಂದರೆ ಅನುಭವಿಸುತ್ತಿದ್ದು, ಅದಕ್ಕಾಗಿ ಪ್ರತ್ಯೇಕ ಬಜೆಟ್ ಮಂಡನೆ ಮಾಡಬೇಕಾದ ಅವಶ್ಯಕತೆ ಇದೆ ಎಂದು ಪ್ರತಿಪಾದಿಸಿದ್ದಾರೆ.
ಓದಿ: ಪೆಟ್ರೋಲ್, ಡೀಸೆಲ್, ಮಧ್ಯದ ಮೇಲೆ ಸೆಸ್: ಗ್ರಾಹಕರಿಗಿಲ್ಲ ಯಾವುದೇ ರೀತಿಯ ಬೆಲೆ ಏರಿಕೆ ಬರೆ!
ಕೃಷಿ ಸಾಲ ಮನ್ನಾ ಮಾಡುವಂತೆ ಆಗ್ರಹಿಸಿರುವ ಅವರು, ರೈತರಿಗಾಗಿ ಉಚಿತ ವಿದ್ಯುತ ನೀಡುವಂತೆ ಮನವಿ ಮಾಡಿದ್ದಾರೆ. ಕೃಷಿ ಕೆಲಸಗಾರರಿಗೆ ನಿಯಮಿತವಾಗಿ ಹಣ ಪಾವತಿ ಮಾಡಬೇಕು ಅದಕ್ಕಾಗಿ ಮಹಾತ್ಮ ಗಾಂಧಿ ಉದ್ಯೋಗ ಖಾತರಿ ಕಾಯ್ದೆ ಅಡಿ ಪ್ರತ್ಯೇಕ ನಿಧಿ ಘೋಷಣೆ ಮಾಡಬೇಕು ಎಂದಿದ್ದಾರೆ.
ಈಗಾಗಲೇ ಪ್ರಧಾನ್ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಮೂಲಕ ಹಣ ನೀಡಲಾಗುತ್ತಿದ್ದು, ಇದರಲ್ಲಿ ಏರಿಕೆ ಮಾಡಬಹುದು ಎಂದು ತಿಳಿಸಿದ್ದಾರೆ.