ನವದೆಹಲಿ: ಆಗಸ್ಟ್ ತಿಂಗಳಿಗೂ ಮುನ್ನ ಹೆಚ್ಚಿನ ಸಂಖ್ಯೆಯಲ್ಲಿ ಅಂತಾರಾಷ್ಟ್ರೀಯ ವಿಮಾನ ಹಾರಾಟ ಆರಂಭಿಸಲು ಭಾರತ ಪ್ರಯತ್ನಿಸಲಿದೆ ಎಂದು ನಾಗರಿಕ ವಿಮಾನಯಾನ ಸಚಿವ ಹರ್ದೀಪ್ ಸಿಂಗ್ ಪುರಿ ಶನಿವಾರ ಹೇಳಿದ್ದಾರೆ.
ಕೊರೊನಾ ವೈರಸ್ ಪ್ರೇರೇಪಿತ ಲಾಕ್ಡೌನ್ನಿಂದಾಗಿ ಮಾರ್ಚ್ 25ರಿಂದ ದೇಶಿ ಹಾಗೂ ಅಂತಾರಾಷ್ಟ್ರೀಯ ಪ್ರಯಾಣಿಕರ ವಿಮಾನಗಳ ಹಾರಾಟ ಸ್ಥಗಿತಗೊಳಿಸಲಾಗಿದೆ.
ಆಗಸ್ಟ್ ಅಥವಾ ಸೆಪ್ಟೆಂಬರ್ ಒಳಗೆ ಅಂತಾರಾಷ್ಟ್ರೀಯ ವಿಮಾನ ಹಾರಾಟ ಪುನರಾರಂಭಿಸುವ ಬಗ್ಗೆ ಪೂರ್ಣ ಭರವಸೆಯಿದೆ. ಪೂರ್ಣ ಪ್ರಮಾಣದಲ್ಲಿ ಅಲ್ಲದಿದ್ದರೂ ಹೆಚ್ಚಿನ ಸಂಖ್ಯೆಯಲ್ಲಿ ಆರಂಭವಾಗಲಿದೆ. ಯಾವ ದಿನ ಎಂಬುದನ್ನು ಈಗಲೇ ಖಚಿತವಾಗಿ ಹೇಳಲಾಗದು. ಪರಿಸ್ಥಿತಿ ನೋಡಿಕೊಂಡು ಆರಂಭಿಸಲಾಗುವುದು ಎಂದು ಫೇಸ್ಬುಕ್ನಲ್ಲಿ ಹೇಳಿದ್ದಾರೆ.
ವೈರಸ್ ಊಹಿಸಬಹುದಾದ ರೀತಿಯಲ್ಲಿ ವರ್ತಿಸಿದರೆ, ನಾವು ವ್ಯವಸ್ಥೆಗಳನ್ನು ಮಾಡಲು ಸಾಧ್ಯವಾಗುತ್ತದೆ. ನಾವು ವೈರಸ್ನೊಂದಿಗೆ ಬದುಕಲು ಸಾಧ್ಯವಾದರೆ, ಅಂತಾರಾಷ್ಟ್ರೀಯ ಕಾರ್ಯಾಚರಣೆಯನ್ನು ಪುನರಾರಂಭಿಸಲು ನಾವು ಆಶಿಸುತ್ತೇವೆ ಎಂದರು.