ಶ್ರೀನಗರ: ಜಮ್ಮು- ಕಾಶ್ಮೀರ ಕೇಂದ್ರಾಡಳಿತ ಪ್ರದೇಶಗಳನ್ನಾಗಿ ಮಾಡಿದ ಬಳಿಕ ಹಾಕಿದ್ದ ನಿಷೇಧಾಜ್ಞೆ ತೆರವುಗೊಳಿಸಿದ ನಂತರ ಉಗ್ರರ ದುಷ್ಕೃತ್ಯಗಳು ಹೆಚ್ಚಾಗಿವೆ.
ಕಣಿವೆ ರಾಜ್ಯದಲ್ಲಿ ಉಗ್ರರು ಅಟ್ಟಹಾಸ ಮೆರೆಯುತ್ತಿದ್ದು, ಬಾರಾಮುಲ್ಲಾದಲ್ಲಿ ಇಂದು ಜ್ಯೂವೆಲ್ಲರಿ ಶಾಪ್ ವೊಂದರ ಮೇಲೆ ಉಗ್ರರು ದಾಳಿ ನಡೆಸಿದ್ದಾರೆ. ಆದರೆ, ದಾಳಿಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎನ್ನಲಾಗಿದೆ.
ಉಗ್ರರ ದಾಳಿ ಹಿನ್ನೆಲೆಯಲ್ಲಿ ಸೇನೆ ಸ್ಥಳಕ್ಕೆ ಧಾವಿಸಿದೆ. ಸ್ಥಳದಲ್ಲಿ ಪೊಲೀಸ್ ಭದ್ರತೆ ಹೆಚ್ಚಿಸಲಾಗಿದೆ.