ನವದೆಹಲಿ: ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್ ಮತ್ತು ಜಿಯೋ ಪ್ಲಾಟ್‌ಫಾರ್ಮ್ಸ್ ಲಿಮಿಟೆಡ್ನಲ್ಲಿ ಸಿಲ್ವರ್ ಲೇಕ್ ಹಾಗೂ ಅದರ ಸಹ ಹೂಡಿಕೆದಾರರು ಜಿಯೋದಲ್ಲಿ ಹೆಚ್ಚುವರಿಯಾಗಿ 4,546.80 ಕೋಟಿ ರೂ. ಹೂಡಿಕೆ ಮಾಡಿವೆ.
ಮೇ 4ರಂದು ಘೋಷಿಸಿದ ಸಿಲ್ವರ್ ಲೇಕ್ 5,655.75 ಕೋಟಿ ರೂ. ಹೂಡಿಕೆಯ ಸೇರಿ ಒಟ್ಟಾರೆ ಹೂಡಿಕೆ ಮೊತ್ತ 10,202.55 ಕೋಟಿ ರೂ.ನಷ್ಟಾಗಲಿದೆ.
ಇದು ಕೇವಲ ಆರು ವಾರಗಳಲ್ಲಿ ಜಿಯೋ ಪ್ಲಾಟ್‌ಫಾರ್ಮ್‌ಗಳಲ್ಲಿ ಏಳನೇ ಹೂಡಿಕೆಯಾಗಿದೆ. ಈ ಹೂಡಿಕೆಯೊಂದಿಗೆ ಜಿಯೋ ಪ್ಲಾಟ್‌ಫಾರ್ಮ್‌ಗಳಲ್ಲಿ ಫೇಸ್‌ಬುಕ್, ಸಿಲ್ವರ್ ಲೇಕ್ ಪಾರ್ಟ್‌ನರ್ಸ್, ವಿಸ್ಟಾ ಈಕ್ವಿಟಿ ಪಾರ್ಟ್‌ನರ್ಸ್, ಜನರಲ್ ಅಟ್ಲಾಂಟಿಕ್, ಕೆಕೆಆರ್ ಮತ್ತು ಮುಬುಡಾಲ ಸೇರಿ ಒಟ್ಟಾರೆ ಹೂಡಿಕೆಯು 92,202.15 ಕೋಟಿ ರೂ. ಆಗಿದೆ.
ಸಿಲ್ವರ್ ಲೇಕ್ ಹೂಡಿಕೆಯು ಜಿಯೋ ಪ್ಲಾಟ್‌ಫಾರ್ಮ್ಸ್‌ನ ಈಕ್ವಿಟಿ ಮೌಲ್ಯವನ್ನು 4.91 ಲಕ್ಷ ಕೋಟಿ ರೂ.ಗಳಿಗೆ ಹಾಗೂ ಎಂಟರ್‌ಪ್ರೈಸ್ ಮೌಲ್ಯ 5.16 ಲಕ್ಷ ಕೋಟಿ ರೂ.ಗಳಿಗೆ ಕೊಂಡೊಯ್ಯಲಿದೆ. ಫುಲ್ಲಿ ಡೈಲ್ಯೂಟೆಡ್ ಬೇಸಿಸ್‌ನಲ್ಲಿ ಜಿಯೋ ಪ್ಲಾಟ್‌ಫಾರ್ಮ್ಸ್‌ನ ಶೇ 2.08ರಷ್ಟು ಈಕ್ವಿಟಿ ಪಾಲುದಾರಿಕೆಗೆ ಸಮಾನವಾಗಿರಲಿದೆ. ಈ ಹೂಡಿಕೆಯೊಂದಿಗೆ 6 ವಾರಗಳಿಗಿಂತ ಕಡಿಮೆ ಅವಧಿಯಲ್ಲಿ ಮುಂಚೂಣಿ ತಂತ್ರಜ್ಞಾನ ಹೂಡಿಕೆದಾರರಿಂದ ಜಿಯೋ ಪ್ಲಾಟ್‌ಫಾರ್ಮ್ಸ್ 92,202.15 ಕೋಟಿ ರೂ. ಹೂಡಿಕೆ ಪಡೆದುಕೊಂಡಿದೆ.
ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್‌ನ ಅಂಗಸಂಸ್ಥೆಯಾದ ಜಿಯೋ ಪ್ಲಾಟ್‌ಫಾರ್ಮ್ಸ್, 388 ದಶಲಕ್ಷಕ್ಕೂ ಅಧಿಕ ಚಂದಾದಾರರನ್ನು ಹೊಂದಿದೆ. ಬ್ರಾಡ್‌ಬ್ಯಾಂಡ್ ಸಂಪರ್ಕ, ಸ್ಮಾರ್ಟ್ ಸಾಧನ, ಕ್ಲೌಡ್ ಮತ್ತು ಎಡ್ಜ್ ಕಂಪ್ಯೂಟಿಂಗ್, ಬಿಗ್ ಡೇಟಾ ಅನಲಿಟಿಕ್ಸ್, ಆರ್ಟಿಫಿಶಿಯಲ್ ಇಂಟಲಿಜೆನ್ಸ್, ಇಂಟರ್‌ನೆಟ್ ಆಫ್ ಥಿಂಗ್ಸ್, ಆಗ್ಮೆಂಟೆಡ್ ಮತ್ತು ಮಿಕ್ಸೆಡ್ ರಿಯಾಲಿಟಿ ಮತ್ತು ಬ್ಲಾಕ್‌ಚೈನ್‌ನಂತಹ ಮುಂಚೂಣಿ ತಂತ್ರಜ್ಞಾನಗಳನ್ನು ಹೊಂದಿದೆ.