ನವದೆಹಲಿ: ವಿಶ್ವ ಬ್ಯಾಂಕ್‌ನ ವ್ಯವಸ್ಥಾಪಕ ನಿರ್ದೇಶಕಿ (ಎಂಡಿ) ಮತ್ತು ಮುಖ್ಯ ಹಣಕಾಸು ಅಧಿಕಾರಿಯಾಗಿ ನೇಮಕಗೊಂಡಿದ್ದ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ವ್ಯವಸ್ಥಾಪಕ ನಿರ್ದೇಶಕ ಅನ್ಶುಲಾ ಕಾಂತ್ ಅವರ ರಾಜೀನಾಮೆಯನ್ನು ಕೇಂದ್ರ ಸರ್ಕಾರ ಸ್ವೀಕರಿಸಿದೆ.
ನೋಟಿಸ್ ಅವಧಿಯನ್ನು ಸಡಿಲಿಸಲು ಆಗಸ್ಟ್ 31ರಿಂದ ಜಾರಿಗೆ ಬರುವಂತೆ ಬ್ಯಾಂಕಿನ ವ್ಯವಸ್ಥಾಪಕ ನಿರ್ದೇಶಕಿ ಅನ್ಶುಲಾ ಕಾಂತ್ ಅವರ ರಾಜೀನಾಮೆಯನ್ನು ಸರ್ಕಾರ ಸ್ವೀಕರಿಸುತ್ತದೆ ಎಂದು ಎಸ್‌ಬಿಐನ ಬಿಎಸ್‌ಇ ಫೈಲಿಂಗ್‌ನಲ್ಲಿ ತಿಳಿಸಿದೆ.
ಅನ್ಶುಲಾ ಕಾಂತ್ ಅವರು ವಿಶ್ವ ಬ್ಯಾಂಕ್ನಲ್ಲಿ ಹಣಕಾಸು ಮತ್ತು ರಿಸ್ಕ್ ಮ್ಯಾನೆಜಮೆಂಟ್ ಜವಾಬ್ದಾರಿಯನ್ನು ವಹಿಸಿಕೊಳ್ಳಲಿದ್ದಾರೆ.