ಬೆಂಗಳೂರು: ಕೊರೊನಾ ವೈರಸ್‍ನ ಪರಿಣಾಮ ಬಹುರಾಷ್ಟ್ರೀಯ ಕಂಪೆನಿ ಇನ್ಫೋಸಿಸ್‍ಗೂ ಬಿಸಿ ತಟ್ಟಿದೆ. ಬೆಂಗಳೂರಿನಲ್ಲಿರುವ ಐಐಪಿಎಂ ಇನ್ಫೋಸಿಸ್ ಕಚೇರಿಯ ಕಟ್ಟಡವನ್ನು ತಾತ್ಕಾಲಿಕವಾಗಿ ಖಾಲಿ ಮಾಡಲಾಗಿದೆ ಎಂದು ತಿಳಿಸಿದೆ.
ಇನ್ಫೋಸಿಸ್‍ನ ಉದ್ಯೋಗಿಯೊಬ್ಬರಿಗೆ ಕೊರೊನಾ ವೈರಸ್ ತಗುಲಿರುವ ಶಂಕೆ ವ್ಯಕ್ತವಾಗುತ್ತಿದ್ದಂತೆ ಸಂಸ್ಥೆ ತೀವ್ರ ಕಟ್ಟೆಚ್ಚರ ವಹಿಸಿದೆ. ಶಂಕಿತ ಉದ್ಯೋಗಿ ಕೆಲಸ ಮಾಡುತ್ತಿದ್ದ ಕಚೇರಿಯ ಐಐಪಿಎಂ ಕಟ್ಟಡವನ್ನು ತಾತ್ಕಾಲಿಕವಾಗಿ ಖಾಲಿ ಮಾಡಲಾಗಿದೆ.
ಸಂಸ್ಥೆಯ ಉದ್ಯೋಗಿಯೊಬ್ಬರಿಗೆ ಕೊರೊನಾ ವೈರಸ್‍ನ ಲಕ್ಷಣಗಳು ಕಂಡು ಬಂದಿರುವುದರಿಂದ ನೌಕರರ ಸುರಕ್ಷತೆಯ ದೃಷ್ಟಿಯಿಂದ ನಾವು ಮುನ್ನೆಚ್ಚರಿಕೆ ವಹಿಸಿದ್ದೇವೆ. ರಾಜ್ಯ ಸರ್ಕಾರದ ಸೂಚನೆಯಂತೆ ಮನೆಯಿಂದಲೇ ಕೆಲಸ ಮಾಡಲು ಈಗಾಲೇ ಸೂಚನೆ ನೀಡಿದ್ದೇವೆ ಎಂದು ಇನ್ಫೋಸಿ ಅಧಿಕಾರಿಗಳು ಪ್ರಕಟಣೆ ಮೂಲಕ ತಿಳಿಸಿದ್ದಾರೆ.
ಐಐಪಿಎಂ ಕಟ್ಟಡದಲ್ಲಿದ್ದ ಎಲ್ಲಾ ನೌಕರರನ್ನು ಹೊರಗೆ ಕಳುಹಿಸಲಾಗಿದೆ. ಇಡೀ ಕಟ್ಟಡವನ್ನು ಸ್ವಚ್ಛತೆ ಮಾಡಲಾಗುತ್ತಿದೆ. ಸ್ವಚ್ಛಗೊಂಡ ಬಳಿಕ ಮತ್ತೆ ಅದೇ ಕಟ್ಟಡದಲ್ಲಿ ಕೆಲಸ ಈ ಮೊದಲಿನಂತೆ ಆರಂಭವಾಗಲಿವೆ. ಅನಗತ್ಯವಾಗಿ ಯಾರೂ ಆತಂಕಕ್ಕೆ ಒಳಗಾಗಬಾರದು. ಗೊಂದಲಕ್ಕೆ ಅವಕಾಶ ನೀಡಬಾರದು ಎಂದು ಮನವಿ ಮಾಡಿದ್ದಾರೆ.