ನವದೆಹಲಿ: ಸೋಷಿಯಲ್ ಮೀಡಿಯಾ ಬಳಕೆದಾರರ ಪ್ರೊಫೈಲ್‌ಗಳನ್ನು ಆಧಾರ್‌ನೊಂದಿಗೆ ಜೋಡಣೆ ಮಾಡುವ ವಿಷಯವನ್ನು ಶೀಘ್ರದಲ್ಲೇ ತೀರ್ಮಾನಿಸಬೇಕಾಗಿದೆ ಎಂದು ಸುಪ್ರೀಂಕೋರ್ಟ್ ಹೇಳಿದೆ.
ನ್ಯಾಯಮೂರ್ತಿಗಳಾದ ದೀಪಕ್ ಗುಪ್ತಾ ಮತ್ತು ಅನಿರುದ್ಧ ಬೋಸ್ ಅವರಿದ್ದ ನ್ಯಾಯಪೀಠವು, ಈ ಹಂತದಲ್ಲಿ ಇದನ್ನು ನಾವು ನಿರ್ಧರಿಸಬಹುದೇ ಅಥವಾ ಹೈಕೋರ್ಟ್ ನಿರ್ಧರಿಸುತ್ತದೆಯೇ ಎಂಬುದು ನಮಗೆ ತಿಳಿದಿಲ್ಲ ಎಂದಷ್ಟೇ ಹೇಳಿದೆ.
ಮದ್ರಾಸ್, ಬಾಂಬೆ ಮತ್ತು ಮಧ್ಯಪ್ರದೇಶದ ಹೈಕೋರ್ಟ್‌ಗಳ ಮುಂದೆ ಬಾಕಿ ಇರುವ ಪ್ರಕರಣಗಳನ್ನು ಉನ್ನತ ನ್ಯಾಯಾಲಯಕ್ಕೆ ವರ್ಗಾಯಿಸುವಂತೆ ಕೋರಿ ಫೇಸ್‌ಬುಕ್ ಸಲ್ಲಿಸಿದ ವರ್ಗಾವಣೆ ಅರ್ಜಿಯನ್ನು ತೀರ್ಮಾನಿಸುವುದಾಗಿ ನ್ಯಾಯಪೀಠ ಹೇಳಿದೆ.
ಪ್ರಕರಣಗಳನ್ನು ಹೈಕೋರ್ಟ್‌ಗಳಿಂದ ಉನ್ನತ ನ್ಯಾಯಾಲಯಕ್ಕೆ ವರ್ಗಾಯಿಸಲು ಯಾವುದೇ ಆಕ್ಷೇಪವಿಲ್ಲ ಎಂದು ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ನ್ಯಾಯಪೀಠಕ್ಕೆ ತಿಳಿಸಿದರು.
ಫೇಸ್‌ಬುಕ್ ಇಂಕ್ ಮತ್ತು ಇತರ ಸಾಮಾಜಿಕ ಮಾಧ್ಯಮ ಕಂಪನಿಗಳು ಭಾರತೀಯ ಕಾನೂನುಗಳನ್ನು ಪಾಲಿಸುತ್ತಿಲ್ಲ ಎಂದು ತಮಿಳುನಾಡು ಸರ್ಕಾರ ಗುರುವಾರ ಸುಪ್ರೀಂಕೋರ್ಟ್‌ನಲ್ಲಿ ಪ್ರಸ್ತಾಪಿಸಿತ್ತು. ಇದರಿಂದಾಗಿ ಕಾನೂನುಬಾಹಿರ ಚಟುವಟಿಕೆಗಳು ಹೆಚ್ಚಾಗುತ್ತಿವೆ ಮತ್ತು ಅಪರಾಧಗಳನ್ನು ಪತ್ತೆಹಚ್ಚುವಲ್ಲಿ ತೊಂದರೆಗಳು ಎದುರಾಗುತ್ತಿವೆ ಎಂದು ಹೇಳಿತ್ತು.