ಮುಂಬೈ: ಈಗಾಗಲೇ ತೀವ್ರ ಆರ್ಥಿಕ ಬಿಕ್ಕಟ್ಟನಿಂದ ನಲುಗಿರುವ ಜೆಟ್ ಏರ್ವೇಸ್ ಸಂಸ್ಥೆ ಆಡಳಿತ ಮಂಡಳಿಯಲ್ಲಿ ಮತ್ತೊಂದು ಸಮಸ್ಯೆ ತಲೆದೋರಿದೆ. ಇದೀಗ ಮುಖ್ಯ ಹಣಕಾಸು ಅಧಿಕಾರಿ (ಸಿಎಫ್ಒ) ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿ ಹೊರ ಬಂದಿದ್ದಾರೆ.
ಡೆಪ್ಯೂಟಿ ಚೀಫ್ ಸಿಇಒ ಅಮಿತ್ ಅಗರ್ವಾಲ್ ಸಂಸ್ಥೆಯ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಮೇ 13ರಿಂದ ಅನ್ವಯವಾಗುವಂತೆ ರಾಜೀನಾಮೆ ಅಂಗೀಕಾರಗೊಂಡಿದೆ ಎಂದು ಜೆಟ್ ಏರ್ವೇಸ್ ತಿಳಿಸಿದೆ.
ಸಂಸ್ಥೆಯ ಉಪಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮತ್ತು ಸಿಎಫ್ಒ ಅಮಿತ್ ಅಗರ್ವಾಲ್ ಅವರು ತಮ್ಮ ವೈಯಕ್ತಿಕ ಕಾರಣಗಳಿಗಾಗಿ ರಾಜೀನಾಮೆ ಸಲ್ಲಿಸಿದ್ದಾರೆ ಎಂದು ಜೆಟ್ ಏರ್ವೇಸ್ ಸ್ಪಷ್ಟನೆ ನೀಡಿ ಹೇಳಿಕೆ ಪ್ರಕಟಿಸಿದೆ.
ಜೆಟ್ ಏರ್ವೇಸ್ ಏಪ್ರಿಲ್ನಿಂದಲೇ ತನ್ನ ಎಲ್ಲ ಕಾರ್ಯಾಚರಣೆಗಳನ್ನು ಸ್ಥಗಿತಗೊಳಿಸಿದೆ. ಕಳೆದ ಒಂದು ತಿಂಗಳಿಂದ ಆಡಳಿತ ವಿಭಾಗದ ಹಿರಿಯ ಅಧಿಕಾರಿಗಳಲ್ಲಿ ಒಬ್ಬೊಬ್ಬರಾಗಿ ಸಂಸ್ಥೆಗೆ ರಾಜೀನಾಮೆ ಸಲ್ಲಿಸಿ ಹೊರ ಬರುತ್ತಿದ್ದಾರೆ. ಇದು ಸಂಸ್ಥೆ ಯಾವ ಸ್ಥಿತಿಗೆ ಬಂದಿದೆ ಎಂಬುದರ ದ್ಯೋತಕವಾಗಿದೆ.