ನವದೆಹಲಿ: ಮುಂಬೈ ವಿಮಾನ ನಿಲ್ದಾಣ ನಡೆಸುವಲ್ಲಿ 705 ಕೋಟಿ ರೂ. ಅಕ್ರಮದ ಬಗ್ಗೆ ತನಿಖೆ ನಡೆಸುತ್ತಿರುವ ಜಾರಿ ನಿರ್ದೇಶನಾಲಯ (ಇಡಿ) ಜಿವಿಕೆ ಗ್ರೂಪ್, ಮುಂಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಲಿಮಿಟೆಡ್ (ಮಿಯಾಲ್) ಮತ್ತು ಇತರರ ವಿರುದ್ಧ ಮನಿ ಲಾಂಡರಿಂಗ್ ಪ್ರಕರಣ ದಾಖಲಿಸಿದೆ.
ಈ ಸಂಸ್ಥೆಗಳ ವಿರುದ್ಧ ಇತ್ತೀಚೆಗೆ ದಾಖಲಾದ ಸಿಬಿಐನ ಎಫ್‌ಐಆರ್ ಪರಿಶೀಲನೆಯ ನಂತರ ಕೇಂದ್ರೀಯ ತನಿಖಾ ಸಂಸ್ಥೆ ಹಣ ವರ್ಗಾವಣೆ ತಡೆ ಕಾಯ್ದೆಯಡಿ ಪ್ರಕರಣ ದಾಖಲಿಸಿದೆ. ಕಾನೂನುಬಾಹಿರವಾಗಿ ಹಣ ವರ್ಗಾವಣೆ ಮಾಡುವ ಮೂಲಕ ವೈಯಕ್ತಿಕ ಸ್ವತ್ತು ಸಂಗ್ರಹಣೆಗೆ ಲಾಂಡರಿಂಗ್ ಮಾಡಲಾಗಿದೆ ಎಂಬ ಆರೋಪದ ಮೇಲೆ ಇಡಿ ತನಿಖೆ ನಡೆಸುತ್ತಿದೆ.
ಜಿವಿಕೆ ಏರ್ಪೋರ್ಟ್ ಹೋಲ್ಡಿಂಗ್ಸ್ ಲಿಮಿಟೆಡ್ ಮತ್ತು ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರ (ಎಎಐ) ನಡುವಿನ ಸಾರ್ವಜನಿಕ-ಖಾಸಗಿ ಸಹಭಾಗಿತ್ವದ (ಪಿಪಿಪಿ) ಜಂಟಿ ಉದ್ಯಮವಾದ ಮುಂಬೈ ಇಂಟರ್ನ್ಯಾಷನಲ್ ಏರ್ಪೋರ್ಟ್ ಲಿಮಿಟೆಡ್ (ಮಿಯಾಲ್) ನಿಧಿಯಿಂದ 705 ಕೋಟಿ ರೂ. ಇತರೆ ವೆಚ್ಚವೆಂದು ತೋರಿಸುವ ಮೂಲಕ ಆದಾಯ ಕಡಿಮೆ ಆಗಿದೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿತ್ತು ಎಂದು ಹೇಳಿದೆ.
ಕೇಂದ್ರೀಯ ತನಿಖಾ ತಂಡ(ಸಿಬಿಐ) ಮಿಯಾಲ್ನ ನಿರ್ದೇಶಕರಾದ ಗುಣಪತಿ, ಅವರ ಮಗ/ವ್ಯವಸ್ಥಾಪಕ ನಿರ್ದೇಶಕ ಜಿ.ವಿ. ಸಂಜಯ್ ರೆಡ್ಡಿ, ಜಿವಿಕೆ ಏರ್ಪೋರ್ಟ್ ಹೋಲ್ಡಿಂಗ್ಸ್ ಲಿಮಿಟೆಡ್ (ಜಿವಿಕೆ ಗ್ರೂಪ್ ) ಮತ್ತು ಇತರ ಒಂಬತ್ತು ಖಾಸಗಿ ಕಂಪನಿಗಳ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಎಎಐನ ಹೆಸರು ಹೇಳಲು ಇಚ್ಛಿಸದ ಅಧಿಕಾರಿ ತಿಳಿಸಿದ್ದಾರೆ.
2006ರ ಏಪ್ರಿಲ್ 4ರಂದು ಮುಂಬೈ ವಿಮಾನ ನಿಲ್ದಾಣದ ಆಧುನೀಕರಣ, ನಿರ್ವಹಣೆ, ಕಾರ್ಯಾಚರಣೆ ಮತ್ತು ಮೇಲ್ದರ್ಜೆಗೆ ಏರಿಸಲು ಎಎಐ ಮಿಯಾಲ್ ಜೊತೆ ಒಪ್ಪಂದ ಮಾಡಿಕೊಂಡಿತ್ತು.