ಮುಂಬೈ: ಪಂಜಾಬ್ ಮತ್ತು ಮಹಾರಾಷ್ಟ್ರ ಸಹಕಾರಿ ಬ್ಯಾಂಕ್ ಲಿಮಿಟೆಟ್ (ಪಿಎಂಸಿ) ಹಗರಣಕ್ಕೆ ಸಂಬಂಧಿಸಿದಂತೆ ಮೃತಪಟ್ಟವರ ಸಂಖ್ಯೆ ನಾಲ್ಕಕ್ಕೆ ಏರಿಕೆಯಾಗಿದೆ.
ಮುಂಬೈನ ಮುಲುಂದ್ ನಿವಾಸಿ ಮುರುಳೀಧರ್ ಧಾರಾ (80) ಎಂಬುವರು ಮೃತಪಟ್ಟಿದ್ದಾರೆ. ಹೃದಯಘಾತ ಸಂಭವಿಸಿ ಆಸ್ಪತ್ರೆಗೆ ದಾಖಲಾಗಿದ್ದ ಮುರುಳೀಧರ್ ಅವರಿಗೆ ಸಕಾಲದಲ್ಲಿ ಚಿಕಿತ್ಸೆಗೆ ಹಣ ಹೊಂದಿಸಲು ಆಗಿರಲಿಲ್ಲ. ಪಿಎಂಸಿ ಬ್ಯಾಂಕ್ನಲ್ಲಿ ಹಣ ಠೇವಣಿ ಇರಿಸಿದ್ದರೂ ಅದನ್ನು ತೆಗೆದುಕೊಳ್ಳಲು ಸಾಧ್ಯವಾಗಲಿಲ್ಲ. ಹೀಗಾಗಿ, ಚಿಕಿತ್ಸೆಗೆ ಹಣ ನೀಡಲಾಗದೆ ನನ್ನ ತಂದೆ ಮೃತಪಟ್ಟಿದ್ದಾರೆ ಎಂದು ಮೃತರ ಪುತ್ರ ಆರೋಪಿಸಿದ್ದಾರೆ.
ದೀರ್ಘಕಾಲದವರೆಗೆ ಅಸ್ವಸ್ಥರಾಗಿದ್ದು, ವೈದ್ಯರು ಬೈಪಾಸ್ ಶಸ್ತ್ರಚಿಕಿತ್ಸೆ ಮಾಡುವ ತಯಾರಿ ನಡೆಸಿದ್ದರು. ಆರ್ಬಿಐ ಪಿಎಂಸಿಯಿಂದ ಹಣ ಹಿಂಪಡೆಯಲು ನಿರ್ಬಂಧ ಹೇರಿದ ನಂತರ ಹಣ ಮರಳಿ ಪಡೆಯಲು ಸಾಧ್ಯವಾಗಲಿಲ್ಲ. ಎರಡು ದಿನಗಳ ಹಿಂದೆಯಷ್ಟೇ 90 ಲಕ್ಷ ರೂ. ಬ್ಯಾಂಕ್ನಲ್ಲಿ ಠೇವಣಿ ಇಟ್ಟಿದ್ದ ಪಿಎಂಸಿ ಬ್ಯಾಂಕ್ ಖಾತೆದಾರರೊಬ್ಬರು ಪ್ರತಿಭಟನೆಯಲ್ಲಿ ಭಾಗವಹಿಸಿ ಹೃದಯ ಸ್ತಂಭನದಿಂದ ಸಾವನ್ನಪ್ಪಿದ್ದರು.