ETV Bharat / business

2020ರ ಅಕ್ಟೋಬರ್ ತನಕ ವಲಸಿಗ ಕಾರ್ಮಿಕರಿಗೆ 8 ಲಕ್ಷ ಮಾನವ ದಿನಗಳ ಉದ್ಯೋಗ ಸೃಷ್ಟಿ: ರೈಲ್ವೆ - ಗರೀಬ್ ಕಲ್ಯಾಣ್ ರೋಜಗಾರ್​ ಅಭಿಯಾನ

ಪಿಎಂ ನರೇಂದ್ರ ಮೋದಿ ಅವರ ಗರೀಬ್ ಕಲ್ಯಾಣ್ ಯೋಜನೆ ಅಡಿಯಲ್ಲಿ ವಲಸೆ ಕಾರ್ಮಿಕರಿಗೆ ಅಕ್ಟೋಬರ್ 31ರವರೆಗೆ ಆರು ರಾಜ್ಯಗಳ 116 ಜಿಲ್ಲೆಗಳಲ್ಲಿ ರೈಲ್ವೆಯು 8 ಲಕ್ಷ ಮಾನವ ದಿನಗಳ ಉದ್ಯೋಗವನ್ನು ಸೃಷ್ಟಿಸುತ್ತದೆ. ಕೆಲವು ಜಿಲ್ಲೆಗಳಲ್ಲಿ ವಲಸಿಗ ಕಾರ್ಮಿಕರು ಈಗಾಗಲೇ ತಮ್ಮ ಕೆಲಸಗಳನ್ನು ಪ್ರಾರಂಭಿಸಿದ್ದಾರೆ ಎಂದು ಕೇಂದ್ರ ಸಚಿವ ಪಿಯೂಷ್ ಗೋಯಲ್ ಟ್ವೀಟ್ ಮಾಡಿದ್ದಾರೆ.

Railway
ರೈಲ್ವೆ
author img

By

Published : Jul 14, 2020, 6:02 PM IST

ನವದೆಹಲಿ: 2020ರ ಅಕ್ಟೋಬರ್ ತನಕ ಆರು ರಾಜ್ಯಗಳಲ್ಲಿ ವಿವಿಧ ಮೂಲಸೌಕರ್ಯ ಯೋಜನೆಗಳಲ್ಲಿ 8 ಲಕ್ಷ ಮಾನವ ದಿನಗಳ ಉದ್ಯೋಗ ಸೃಜಿಸಲಾಗುವುದು ಎಂದು ರೈಲ್ವೆ ಸಚಿವಾಲಯ ತಿಳಿಸಿದೆ.

ಕೊರೊನಾ ವೈರಸ್ ಸಾಂಕ್ರಾಮಿಕ ರೋಗದ ಮಧ್ಯೆ ವಲಸೆ ಕಾರ್ಮಿಕರಿಗೆ ಜೀವನೋಪಾಯದ ಅವಕಾಶಗಳನ್ನು ಒದಗಿಸಲು ಪ್ರಾರಂಭಿಸಲಾದ ಗರೀಬ್ ಕಲ್ಯಾಣ್ ರೋಜಗಾರ್​ ಅಭಿಯಾನದಡಿ ಈ ಉಪಕ್ರಮ ತೆಗೆದುಕೊಳ್ಳಲಾಗಿದೆ.

ಪಿಎಂ ನರೇಂದ್ರ ಮೋದಿ ಅವರ ಗರೀಬ್ ಕಲ್ಯಾಣ್ ಯೋಜನೆ ಅಡಿಯಲ್ಲಿ ವಲಸೆ ಕಾರ್ಮಿಕರಿಗೆ ಅಕ್ಟೋಬರ್ 31ರವರೆಗೆ ಆರು ರಾಜ್ಯಗಳ 116 ಜಿಲ್ಲೆಗಳಲ್ಲಿ ರೈಲ್ವೆಯು 8 ಲಕ್ಷ ಮಾನವ ದಿನಗಳ ಉದ್ಯೋಗವನ್ನು ಸೃಷ್ಟಿಸುತ್ತದೆ. ಕೆಲವು ಜಿಲ್ಲೆಗಳಲ್ಲಿ ವಲಸಿಗ ಕಾರ್ಮಿಕರು ಈಗಾಗಲೇ ತಮ್ಮ ಕೆಲಸಗಳನ್ನು ಪ್ರಾರಂಭಿಸಿದ್ದಾರೆ ಎಂದು ಕೇಂದ್ರ ಸಚಿವ ಪಿಯೂಷ್ ಗೋಯಲ್ ಟ್ವೀಟ್ ಮಾಡಿದ್ದಾರೆ.

ಗರೀಬ್ ಕಲ್ಯಾಣ್ ಅಭಿಯಾನವು ಕೇಂದ್ರ ಸರ್ಕಾರದ ಬೃಹತ್ ಉದ್ಯೋಗ ಸೃಷ್ಟಿಯ ಯೋಜನೆ ಆಗಿದ್ದು, ಜೂನ್ 20ರಂದು ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಿದ್ದರು.

ಕೋವಿಡ್​-19 ಸಾಂಕ್ರಾಮಿಕ ರೋಗದಿಂದ ತಮ್ಮ ತವರು ಊರಿಗೆ ಮರಳಿರುವ ವಲಸಿಗ ಕಾರ್ಮಿಕರಿಗೆ ಮುಂದಿನ ನಾಲ್ಕು ತಿಂಗಳು ತನಕ ಅವರು ಇದ್ದ ಸ್ಥಳದಲ್ಲಿ ಉದ್ಯೋಗ ಒದಗಿಸುವುದು ಇದರ ಮುಖ್ಯ ಉದ್ದೇಶವಾಗಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.