ನವದೆಹಲಿ: ಮುಂದಿನ ಮೂರು ವರ್ಷಗಳಲ್ಲಿ ಹೊಸ ತಲೆಮಾರಿನ 400 ವಂದೇ ಭಾರತ್ ರೈಲುಗಳನ್ನು ತರಲಾಗುವುದು. ಅತ್ಯಾಧುನಿಕ ಸೌಲಭ್ಯಗಳಿಂದ ರೈಲು ಸೇವೆಗಳು ಮತ್ತಷ್ಟು ಪರಿಣಾಮಕಾರಿಯಾಗಿರಲಿವೆ ಎಂದು ಸಚಿವೆ ನಿರ್ಮಲಾ ಸೀತಾರಾಮನ್ ಬಜೆಟ್ ಮಂಡನೆ ವೇಳೆ ಘೋಷಿಸಿದ್ದಾರೆ.
ಮುಂದಿನ ಮೂರು ವರ್ಷಗಳಲ್ಲಿ ಗತಿ ಶಕ್ತಿ 100 ಕಾರ್ಗೋ ಟರ್ಮಿನಲ್ಗಳನ್ನು ಅಭಿವೃದ್ಧಿಪಡಿಸಲಾಗುತ್ತದೆ. ಮೆಟ್ರೋ ವ್ಯವಸ್ಥೆಗಳನ್ನು ನಿರ್ಮಿಸಲು ಹೊಸ ಮಾರ್ಗಗಳನ್ನು ಅನುಷ್ಠಾನ ಮಾಡಲಾಗುತ್ತದೆ.
ಜನರು ಮತ್ತು ಸರಕುಗಳ ಸಾಗಣೆಯನ್ನು ಇನ್ನಷ್ಟು ಸುಲಭಗೊಳಿಸಲು 2022- 23 ರಲ್ಲಿ ಎಕ್ಸ್‌ಪ್ರೆಸ್‌ವೇಗಳಿಗೆ ಪಿಎಂ ಗತಿ ಶಕ್ತಿಯ ಮಾಸ್ಟರ್ ಪ್ಲಾನ್ ಅನ್ನು ರೂಪಿಸಲಾಗುತ್ತದೆ ಎಂದು ನಿರ್ಮಲಾ ಸೀತಾರಾಮನ್ ತಿಳಿಸಿದ್ದಾರೆ.
2022-23ರಲ್ಲಿ ರಾಷ್ಟ್ರೀಯ ಹೆದ್ದಾರಿ ಜಾಲವನ್ನು 25,000 ಕಿ.ಮೀ.ಗೆ ವಿಸ್ತರಣೆಯಾಗಲಿದೆ. ಸಾರ್ವಜನಿಕ ಸಂಪನ್ಮೂಲಕ್ಕಾಗಿ 20,000 ಕೋಟಿ ರೂಪಾಯಿಗಳನ್ನು ಮೀಸಲಿಡುತ್ತಿರುವುದಾಗಿ ಪ್ರಕಟಿಸಿದ್ದಾರೆ.