ನವದೆಹಲಿ: ಕಳೆದ ಎಂಟು ದಿನಗಳಿಂದ ದೆಹಲಿಯ ಏಮ್ಸ್ನಲ್ಲಿ (ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆ) ಚಿಕಿತ್ಸೆ ಪಡೆಯುತ್ತಿರುವ ಮಾಜಿ ಹಣಕಾಸು ಸಚಿವ, ಬಿಜೆಪಿ ಹಿರಿಯ ನಾಯಕ ಅರುಣ್ ಜೇಟ್ಲಿ ಅವರ ಆರೋಗ್ಯ ಸ್ಥಿತಿ ಮತ್ತಷ್ಟು ಗಂಭೀರವಾಗಿದೆ ಎಂದು ಮೂಲಗಳಿಂದ ತಿಳಿದುಬಂದಿದೆ.
ಗೃಹ ಸಚಿವ ಅಮಿತ್ ಶಾ ಹಾಗೂ ಆರೋಗ್ಯ ಸಚಿವ ಡಾ. ಹರ್ಷವರ್ಧನ್ ಅವರು ತಡರಾತ್ರಿ ಏಮ್ಸ್ ಆಸ್ಪತ್ರೆಗೆ ಭೇಟಿ ನೀಡಿ ಜೇಟ್ಲಿ ಅವರ ಆರೋಗ್ಯ ವಿಚಾರಿಸಿದ್ದಾರೆ. ಇನ್ನು ಇಲ್ಲಿನ ಜೇಟ್ಲಿ ನಿವಾಸದ ಬಳಿ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿದೆ.
ಕಳೆದ ವಾರದಿಂದ ಪ್ರಧಾನಿ ಮೋದಿ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಲೋಕಸಭೆ ಸ್ಪೀಕರ್ ಓಂ ಬಿರ್ಲಾ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸೇರಿದಂತೆ ಕೇಂದ್ರದ ಹಲವು ಸಚಿವರು ಭೇಟಿ ನೀಡಿದ್ದರು.