ನವದೆಹಲಿ: ಕೇಂದ್ರ ಸರ್ಕಾರ ಎರಡು ಸರ್ಕಾರಿ ಸ್ವಾಮ್ಯದ ಬ್ಯಾಂಕ್ಗಳ ಖಾಸಗೀಕರಣಕ್ಕೆ ಮುಂದಾಗಿದ್ದು, ಇದನ್ನು ವಿರೋಧಿಸಿ ಮುಷ್ಕರ ಬ್ಯಾಂಕ್ಗಳ ಒಕ್ಕೂಟ ಮುಷ್ಕರಕ್ಕೆ ಕರೆ ನೀಡಿವೆ.
ರಾಷ್ಟ್ರವ್ಯಾಪಿ ಮುಷ್ಕರಕ್ಕೆ ಬ್ಯಾಂಕ್ ನೌಕರರ ಒಕ್ಕೂಟಗಳು ಕರೆ ನೀಡಿರುವುದರಿಂದ ಮಾರ್ಚ್ 15 ಮತ್ತು 16ರಂದು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್‌ಬಿಐ) ಸೇವೆಯಲ್ಲಿ ವ್ಯತ್ಯಯ ಉಂಟಾಗುವ ಸಾಧ್ಯತೆ ಇದೆ.
ಯುನೈಟೆಡ್ ಫೋರಂ ಆಫ್ ಬ್ಯಾಂಕ್ ಯೂನಿಯನ್ಸ್ (ಯುಎಫ್‌ಬಿಯು) ಮಾರ್ಚ್ 15ರಂದು ಬ್ಯಾಂಕ್ ನೌಕರರು ಅಖಿಲ ಭಾರತ ಮುಷ್ಕರಕ್ಕೆ ಕರೆ ನೀಡಿದೆ ಎಂದು ಭಾರತೀಯ ಬ್ಯಾಂಕ್ಗಳ ಸಂಘ (ಐಬಿಎ) ತಿಳಿಸಿದೆ.
ದೇಶದ ಅತಿದೊಡ್ಡ ಬ್ಯಾಂಕ್ ತನ್ನ ಶಾಖೆ ಮತ್ತು ಕಚೇರಿಗಳಲ್ಲಿ ಸಾಮಾನ್ಯ ಕಾರ್ಯನಿರ್ವಹಣೆ ಖಚಿತಪಡಿಸಿಕೊಳ್ಳಲು ಎಲ್ಲಾ ವ್ಯವಸ್ಥೆ ಮಾಡಿಕೊಂಡಿದೆ. ಪ್ರತಿಭಟನೆಯಿಂದ ಬ್ಯಾಂಕ್ನ ಕೆಲವು ಕೆಲಸಗಳ ಮೇಲೆ ಪರಿಣಾಮ ಬೀರುವ ಸಾಧ್ಯತೆಯಿದೆ. ಮುಷ್ಕರದ ನಿರೀಕ್ಷಿತ ನಷ್ಟವನ್ನು ಮಾಡಲಾಗುವುದಿಲ್ಲ ಎಂದಿದೆ.
ಇದನ್ನೂ ಓದಿ: ಡಾ. ಸಿಂಗ್ ಕಾಲದ ಪೆಟ್ರೋಲ್, ಡಿಸೇಲ್ ತೆರಿಗೆ ಮೋದಿ ಕಾಲದ 2021ಕ್ಕೆ ಶೇ 459% ಏರಿಕೆ: LPG ರೇಟ್ ಡಬಲ್!
ಅಖಿಲ ಭಾರತ ಬ್ಯಾಂಕ್ ನೌಕರರ ಸಂಘ (ಎಐಬಿಇಎ), ಅಖಿಲ ಭಾರತ ಬ್ಯಾಂಕ್ ಅಧಿಕಾರಿಗಳ ಒಕ್ಕೂಟ (ಎಐಬಿಒಸಿ), ಬ್ಯಾಂಕ್ ನೌಕರರ ರಾಷ್ಟ್ರೀಯ ಒಕ್ಕೂಟ (ಎನ್‌ಸಿಬಿಇ), ಅಖಿಲ ಭಾರತ ಬ್ಯಾಂಕ್ ಅಧಿಕಾರಿಗಳ ಸಂಘ (ಎಐಬಿಒಎ), ಭಾರತೀಯ ಬ್ಯಾಂಕ್ ನೌಕರರ ಒಕ್ಕೂಟ (ಬಿಇಎಫ್‌ಐ), ಇಂಡಿಯನ್ ನ್ಯಾಷನಲ್ ಬ್ಯಾಂಕ್ ಎಂಪ್ಲಾಯೀಸ್ ಫೆಡರೇಷನ್ (ಐಎನ್‌ಬಿಇಎಫ್), ಇಂಡಿಯನ್ ನ್ಯಾಷನಲ್ ಬ್ಯಾಂಕ್ ಆಫೀಸರ್ಸ್ ಒಕ್ಕೂಟ (ಐಎನ್‌ಬಿಒಸಿ), ನ್ಯಾಷನಲ್ ಆರ್ಗನೈಸೇಶನ್ ಆಫ್ ಬ್ಯಾಂಕ್ ವರ್ಕರ್ಸ್ (ಎನ್‌ಒಬಿಡಬ್ಲ್ಯೂ) ಮತ್ತು ನ್ಯಾಷನಲ್ ಆರ್ಗನೈಸೇಷನ್ ಆಫ್ ಬ್ಯಾಂಕ್ ಆಫೀಸರ್ಸ್ (ಎನ್‌ಒಬಿಒ) ಒಂಬತ್ತು ಒಕ್ಕೂಟಗಳು ಮುಷ್ಕರಕ್ಕೆ ಕರೆಕೊಟ್ಟಿವೆ.
ಈ ವರ್ಷದ ಕೇಂದ್ರ ಬಜೆಟ್‌ನಲ್ಲಿ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು, ಸಾರ್ವಜನಿಕ ವಲಯದ ಬ್ಯಾಂಕ್ಗಳ (ಪಿಎಸ್‌ಬಿ) ಪೈಕಿ ಎರಡು ಬ್ಯಾಂಕ್ಗಳು ಹಾಗೂ ಒಂದು ವಿಮಾ ಕಂಪನಿ ಖಾಸಗೀಕರಣಗೊಳಿಸುವುದಾಗಿ ಘೋಷಿಸಿದ್ದರು.
ಐಡಿಬಿಐ ಬ್ಯಾಂಕ್ ಹೊರತುಪಡಿಸಿ 2021-22ರಲ್ಲಿ ಎರಡು ಸಾರ್ವಜನಿಕ ವಲಯದ ಬ್ಯಾಂಕ್ಗಳು ಮತ್ತು ವಿಮಾ ಕಂಪನಿಯ ಖಾಸಗೀಕರಣದ ಮಾಡಿಲು ನಾವು ಪ್ರಸ್ತಾಪಿಸುತ್ತೇವೆ. ಇದಕ್ಕೆ ಶಾಸಕಾಂಗ ತಿದ್ದುಪಡಿಗಳು ಬೇಕಾಗುತ್ತದೆ. ಬಜೆಟ್ ಅಧಿವೇಶನದಲ್ಲಿಯೇ ತಿದ್ದುಪಡಿ ಪರಿಚಯಿಸಲು ನಾನು ಸಲಹೆ ನೀಡುತ್ತೇನೆ ಎಂದು ಬಜೆಟ್ ಭಾಷಣದಲ್ಲಿ ಹೇಳಿದ್ದರು.