ETV Bharat / business

ರಾತ್ರಿ ಪಾಳಿಯಲ್ಲಿ ದುಡಿಯುವ ಮಹಿಳೆಯರ ರಕ್ಷಣೆಗೆ 1,000 ಕೋಟಿ ರೂ. ಅನುದಾನ

2021ರ ಬಜೆಟ್‌ನಲ್ಲಿ ನಿರ್ಮಲಾ ಸೀತಾರಾಮನ್ ಅವರು ರಾತ್ರಿ ಪಾಳಿಯಲ್ಲಿ ದುಡಿಯುವ ಮಹಿಳೆಯರಿಗೆ ಸುರಕ್ಷತಾ ಕ್ರಮಗಳನ್ನು ಘೋಷಿಸಿದರು. ಟೀ ಕಾರ್ಮಿಕರಿಗೆ ಅದರಲ್ಲೂ ವಿಶೇಷವಾಗಿ ಮಹಿಳೆಯರು ಮತ್ತು ಮಕ್ಕಳಿಗೆ 1,000 ಕೋಟಿ ರೂ. ಅನುದಾನ ಮೀಸಲಿರಿಸುವುದಾಗಿ ತಿಳಿಸಿದರು.

Budget
Budget
author img

By

Published : Feb 1, 2021, 4:53 PM IST

ನವದೆಹಲಿ: ರಾತ್ರಿ ಪಾಳಿಯಲ್ಲಿ ಕೆಲಸ ಮಾಡುವ ಮಹಿಳೆಯರಿಗೆ ಸಾಕಷ್ಟು ರಕ್ಷಣೆ ನೀಡಲಾಗುವುದು ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್​ ಬಜೆಟ್ ಮಂಡನೆಯಲ್ಲಿ ಹೇಳಿದರು.

2021ರ ಬಜೆಟ್‌ನಲ್ಲಿ ನಿರ್ಮಲಾ ಸೀತಾರಾಮನ್ ಅವರು ರಾತ್ರಿ ಪಾಳಿಯಲ್ಲಿ ದುಡಿಯುವ ಮಹಿಳೆಯರಿಗೆ ಸುರಕ್ಷತಾ ಕ್ರಮಗಳನ್ನು ಘೋಷಿಸಿದರು. ಟೀ ಕಾರ್ಮಿಕರಿಗೆ ಅದರಲ್ಲೂ ವಿಶೇಷವಾಗಿ ಮಹಿಳೆಯರು ಮತ್ತು ಮಕ್ಕಳಿಗೆ 1,000 ಕೋಟಿ ರೂ. ಅನುದಾನ ಮೀಸಲಿರಿಸುವುದಾಗಿ ತಿಳಿಸಿದರು.

ಈ ವರ್ಷದ ಬಜೆಟ್‌ನಲ್ಲಿ ಹಣಕಾಸು ಸಚಿವೆ ಜಾಗತಿಕವಾಗಿ ಮೊದಲ ಬಾರಿಗೆ ಸಾಮಾಜಿಕ ಭದ್ರತೆ ಪ್ರಯೋಜನಗಳನ್ನು ಗಿಗ್ (ಆನ್​ಲೈನ್​ ಪ್ಲಾಟ್‌ಫಾರ್ಮ್) ಕೆಲಸಗಾರರಿಗೆ ವಿಸ್ತರಿಸುವುದಾಗಿ ಹೇಳಿದ್ದಾರೆ.

ಇದನ್ನೂ ಓದಿ: ಮತ್ತೆ ಒಂದು ವರ್ಷ ವಸತಿ ತೆರಿಗೆ ವಿನಾಯತಿ ಘೋಷಿಸಿದ ನಿರ್ಮಲಾ: ಯಾರಿಗೆಲ್ಲ ಲಾಭ?

ಕನಿಷ್ಠ ವೇತನವು ಎಲ್ಲಾ ವರ್ಗದ ಕಾರ್ಮಿಕರಿಗೆ ಅನ್ವಯಿಸುತ್ತದೆ. ಅವೆಲ್ಲವನ್ನೂ ನೌಕರರ ರಾಜ್ಯ ವಿಮಾ ನಿಗಮವು ಒಳಗೊಂಡಿರುತ್ತದೆ. ಮಹಿಳೆಯರಿಗೆ ಎಲ್ಲಾ ವಿಭಾಗಗಳಲ್ಲಿ ಮತ್ತು ರಾತ್ರಿ ಪಾಳಿಯಲ್ಲಿ ಸಾಕಷ್ಟು ರಕ್ಷಣೆಯೊಂದಿಗೆ ಕೆಲಸ ಮಾಡಲು ಅವಕಾಶವಿರುತ್ತದೆ. ಏಕ ನೋಂದಣಿ ಮತ್ತು ಪರವಾನಗಿ ಹಾಗೂ ಆನ್‌ಲೈನ್ ಆದಾಯದೊಂದಿಗೆ ಉದ್ಯೋಗದಾತರ ಮೇಲಿನ ಅನುಸರಣೆ ಹೊರೆ ಕಡಿಮೆಯಾಗುತ್ತದೆ ಎಂದು ಹೇಳಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.