ನವದೆಹಲಿ: ರಾಜ್ಯ ನಿಯಂತ್ರಣವನ್ನು ಉಳಿಸಿಕೊಳ್ಳಲು ಕೇಂದ್ರೀಯ ಸಾರ್ವಜನಿಕ ವಲಯದ ಉದ್ಯಮಗಳಲ್ಲಿನ (ಸಿಪಿಎಸ್‌ಇ) ಸರ್ಕಾರದ ಪಾಲನ್ನು ಶೇ 51ಕ್ಕಿಂತ ಕಡಿಮೆಗೊಳಿಸುವ ಪ್ರಸ್ತಾಪವನ್ನು ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ.
ಬ್ಯಾಂಕ್ ಆಯ್ತು, ಈಗ ವಿಮಾ ಕಂಪನಿಗಳ ವಿಲೀನಕ್ಕೆ ಮೋದಿ ಸರ್ಕಾರ ಸಜ್ಜು..!
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕ್ಯಾಬಿನೆಟ್ ಈ ನಿರ್ಧಾರ ತೆಗೆದುಕೊಂಡಿದೆ. 2019ರ ಬಜೆಟ್ ಭಾಷಣದಲ್ಲಿ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು, ಸರ್ಕಾರದ ಪಾಲನ್ನು ಶೇ 51ಕ್ಕಿಂತ ಕಡಿಮೆ ಹೋಗದಂತೆ ಹಣಕಾಸುಯೇತರ ಸಾರ್ವಜನಿಕ ವಲಯದ ಸಂಸ್ಥೆಗಳಲ್ಲಿ ಹೂಡಿಕಾ ನೀತಿ ಅನುಸರಿಸುತ್ತೇವೆ ಎಂದು ಘೋಷಿಸಿದ್ದರು. ಆದರೆ, ಈಗ ತಮ್ಮ ಮಾತಿಗೆ ವಿರುದ್ಧವಾಗಿ ಈ ನಿರ್ಧಾರ ತೆಗೆದುಕೊಂಡಿದ್ದಾರೆ.