ನವದೆಹಲಿ: ಎಲೆಕ್ಟ್ರಾನಿಕ್ ಟೋಲ್ ಸಂಗ್ರಹವನ್ನು ವೇಗವಾಗಿ ಅಳವಡಿಸಿಕೊಳ್ಳುವ ಪ್ರಯತ್ನದ ಭಾಗವಾಗಿ 2021ರ ಜನವರಿ 1ರಿಂದ ಎಲ್ಲಾ ನಾಲ್ಕು ಚಕ್ರಗಳ ವಾಹನಗಳಿಗೆ ಫಾಸ್ಟ್ಯಾಗ್ ಬಳಕೆ ಕಡ್ಡಾಯದ ಅವಧಿಯನ್ನು ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯ ಮತ್ತೆ ಮುಂದೂಡಿಕೆ ಮಾಡಿದೆ.
ರಾಷ್ಟ್ರೀಯ ಹೆದ್ದಾರಿ ಸಚಿವಾಲಯವು ಎಲ್ಲ ನಾಲ್ಕು ಚಕ್ರಗಳಿಗೆ ಫಾಸ್ಟ್‌ಟ್ಯಾಗ್ ಕಡ್ಡಾಯದ 2021ರ ಜನವರಿ 1ರ ಗಡುವನ್ನು ಫೆಬ್ರವರಿ 1ರವರೆಗೆ ವಿಸ್ತರಿಸಿದೆ ಎಂದು ತಿಳಿಸಿದೆ.
ಸೆಂಟ್ರಲ್ ಮೋಟಾರ್ ವೆಹಿಕಲ್ಸ್ ರೂಲ್ಸ್, 1989ರ ಪ್ರಕಾರ, 2017ರಿಂದ ಹೊಸ ನಾಲ್ಕು ಚಕ್ರಗಳ ವಾಹನಗಳ ಎಲ್ಲ ನೋಂದಣಿಗೆ ಫಾಸ್ಟ್‌ಟ್ಯಾಗ್ ಅನ್ನು ಕಡ್ಡಾಯಗೊಳಿಸಲಾಗಿದೆ. ವಾಹನ ತಯಾರಕರು ಮತ್ತು ವಿತರಕರು ಟ್ಯಾಗ್ ಅನ್ನು ಪೂರೈಸುತ್ತಿದ್ದಾರೆ.
ಇದನ್ನೂ ಓದಿ: ಮತ್ತೆ ಹಳೆಯ ಲಯಕ್ಕೆ ಮರಳಿದ Jio: ಜನವರಿ 1ರಿಂದ ಫ್ರೀ ಕಾಲ್ ಘೋಷಣೆ!
ಸಾರಿಗೆ ವಾಹನಗಳಿಗೆ ಫಾಸ್ಟ್‌ಟ್ಯಾಗ್ ಅಳವಡಿಸಿದ ನಂತರವೇ ಫಿಟ್‌ನೆಸ್ ಪ್ರಮಾಣಪತ್ರ ನವೀಕರಿಸಲಾಗುವುದು ಎಂದು ಆದೇಶಿಸಲಾಗಿದೆ, ಈ ಹಿಂದೆ ದೇಶದಲ್ಲಿ 2017ರ ಡಿಸೆಂಬರ್ನಿಂದ ಮಾರಾಟವಾಗುವ ಎಲ್ಲ ಚಥುರ್ಚಕ್ರ ವಾಹನಗಳ ನೋಂದಣಿಗೆ ಫಾಸ್ಟ್‌ಟ್ಯಾಗ್ ಅನ್ನು ಸರ್ಕಾರ ಕಡ್ಡಾಯಗೊಳಿಸಿತ್ತು. ಟೋಲ್ ಶುಲ್ಕವನ್ನು ಸ್ವಯಂಚಾಲಿತವಾಗಿ ಕಡಿತವಾಗುವಂತೆ ಫಾಸ್ಟ್‌ಟ್ಯಾಗ್ ಅಳವಡಿಸಲಾಗಿದೆ. ಫಾಸ್ಟ್‌ಟ್ಯಾಗ್ ಇರದ ವಾಹನಗಳಿಗೆ ಟೋಲ್ ಮೊತ್ತದ ಎರಡು ಪಟ್ಟು ದಂಡ ಶುಲ್ಕ ಪಾವತಿಸಬೇಕಾಗುತ್ತದೆ.