ETV Bharat / business

ಇ-ಫೈಲಿಂಗ್‌ ಪೋರ್ಟಲ್‌ನಲ್ಲಿ ದೋಷ: ಇನ್ಫೋಸಿಸ್‌ ಸಿಇಒಗೆ ಹಣಕಾಸು ಸಚಿವಾಲಯದಿಂದ ಸಮನ್ಸ್‌

ಇ-ಫೈಲಿಂಗ್ ಪೋರ್ಟಲ್‌ನಲ್ಲಿರುವ ತಾಂತ್ರಿಕ ಸಮಸ್ಯೆಯನ್ನು ಇನ್ನೂ ಏಕೆ ಸರಿಪಡಿಸಿಲ್ಲ ಎಂಬುದರ ಬಗ್ಗೆ ಇಂದು ವಿವರಣೆ ನೀಡುವಂತೆ ಇನ್ಫೋಸಿಸ್‌ ಸಿಇಒ ಹಾಗೂ ವ್ಯವಸ್ಥಾಪಕ ನಿರ್ದೇಶಕ ಸಲೀಲ್‌ ಪರೇಖ್‌ ಅವರಿಗೆ ಕೇಂದ್ರ ಹಣಕಾಸು ಸಚಿವಾಲಯ ಸಮನ್ಸ್‌ ನೀಡಿದೆ.

FinMin 'summons' Infosys MD and CEO Salil Parekh to explain non-resolution of I-T portal glitches
ಇ-ಫೈಲ್ಲಿಂಗ್‌ ಪೋರ್ಟಲ್‌ನಲ್ಲಿ ದೋಷ; ಇಂದು ವಿವರಣೆಗೆ ಸೂಚಿಸಿ ಇನ್ಫೋಸಿಸ್‌ ಸಿಇಒ ಪರೇಖ್‌ಗೆ ಸಚಿವೆ ಸೀತಾಮಾರನ್‌ ಸಮನ್ಸ್‌
author img

By

Published : Aug 23, 2021, 7:40 AM IST

ನವದೆಹಲಿ: ಹೊಸ ಇ-ಫೈಲಿಂಗ್ ಪೋರ್ಟಲ್‌ನಲ್ಲಿ ತಾಂತ್ರಿಕ ಸಮಸ್ಯೆ ಮುಂದುವರೆದಿರುವುದು ಕೇಂದ್ರ ಸರ್ಕಾರಕ್ಕೆ ಇರುಸುಮುರಿಸು ಉಂಟು ಮಾಡುತ್ತಿದೆ. ಪೋರ್ಟಲ್‌ನಲ್ಲಿ ಕಂಡುಬರುವ ದೋಷಗಳನ್ನು ಇನ್ನೂ ಏಕೆ ಸರಿಪಡಿಸಿಲ್ಲ? ಈ ಬಗ್ಗೆ ಇಂದು ವಿವರಣೆ ನೀಡುವಂತೆ ಇನ್ಫೋಸಿಸ್‌ ಸಿಇಒ ಮತ್ತು ವ್ಯವಸ್ಥಾಪಕ ನಿರ್ದೇಶಕ ಸಲೀಲ್‌ ಪರೇಖ್‌ಗೆ ಕೇಂದ್ರ ಹಣಕಾಸು ಸಚಿವಾಲಯ ಸಮನ್ಸ್‌ ನೀಡಿದೆ.

  • Ministry of Finance has summoned Sh Salil Parekh,MD&CEO @Infosys on 23/08/2021 to explain to hon'ble FM as to why even after 2.5 months since launch of new e-filing portal, glitches in the portal have not been resolved. In fact,since 21/08/2021 the portal itself is not available.

    — Income Tax India (@IncomeTaxIndia) August 22, 2021 " class="align-text-top noRightClick twitterSection" data=" ">

ಈ ಬಗ್ಗೆ ಟ್ವೀಟ್‌ ಮಾಡಿರುವ ಹಣಕಾಸು ಸಚಿವಾಲಯ, ಆಗಸ್ಟ್ 21 ರಂದು ವೆಬ್‌ಸೈಟ್ ಕಾರ್ಯನಿರ್ವಹಣೆ ಸ್ಥಗಿತದ ನಂತರ ಪರೇಖ್ ಅವರಿಗೆ ಸಮನ್ಸ್ ನೀಡಲು ನಿರ್ಧರಿಸಲಾಗಿದೆ. 2020ರ ಜೂನ್‌ 7 ರಂದು ಹಳೆಯ ವೆಬ್‌ಸೈಟ್ ಸ್ಥಗಿತಗೊಂಡ ನಂತರ ಇ-ಫೈಲಿಂಗ್ ವೆಬ್‌ಸೈಟ್‌ಗೆ ಔಪಚಾರಿಕವಾಗಿ ಚಾಲನೆ ನೀಡಲಾಗಿತ್ತು. ಆಧುನಿಕ ತಂತ್ರಜ್ಞಾನದ ಮೂಲಕ ತೆರಿಗೆದಾರರಿಗೆ ಅನುಕೂಲ ಮಾಡಿಕೊಡಲು ಹಾಗೂ ತಡೆರಹಿತ ಸೇವೆಯಂತಹ ಅನುಭವಕ್ಕೆ ಹೊಸ ಇ-ಫೈಲಿಂಗ್ ಪೋರ್ಟಲ್ ನೀಡಬೇಕಿತ್ತು. ಆದರೆ, ಚಾಲನೆಗೊಂಡಾಗಿನಿಂದಲೂ ಪೋರ್ಟಲ್‌ನಲ್ಲಿ ಸರಿಯಾಗಿ ತೆರಿಗೆ ಪಾವತಿ ಮಾಡಲಾಗದೆ ತೆರಿಗೆದಾರರು ಸಮಸ್ಯೆ ಎದುರಿಸುತ್ತಿದ್ದಾರೆ.

ಇದನ್ನೂ ಓದಿ: ಹೊಸ IT ಇ-ಫೈಲಿಂಗ್ ಪೋರ್ಟಲ್​ನಲ್ಲಿ ದೋಷ: ನಿರ್ಮಲಾ ಹೇಳಿಕೆಗೆ ನಿಲೇಕಣಿ ವಿವರಣೆ

ವೆಬ್‌ಸೈಟ್ ತುಂಬಾ ನಿಧಾನಗತಿಯಲ್ಲಿ ಕಾರ್ಯನಿರ್ವಹಿಸುತ್ತಿದೆ. ಪ್ರೊಫೈಲ್ ಅಪ್‌ಡೇಟಿಂಗ್, ಪಾಸ್‌ವರ್ಡ್ ಬದಲಾವಣೆಗೂ ತುಂಬಾ ಸಮಯ ತೆಗೆದುಕೊಳ್ಳುತ್ತಿದೆ ಎಂದು ಬಳಕೆದಾರರು ದೂರಿದ್ದರು. ಅದರಲ್ಲಿ ಟಿಡಿಎಸ್ ರಿಟರ್ನ್ಸ್ ಫೈಲ್ ಮಾಡಲು ಆಗುತ್ತಿಲ್ಲ, 'ಪಾರ್ಗಟ್ ಪಾಸ್‌ವರ್ಡ್' ಆಪ್ಶನ್ ಕೆಲಸ ಮಾಡುತ್ತಿಲ್ಲ ಎಂದು ಹಲವರು ಅಸಮಾಧಾನ ತೋಡಿಕೊಂಡಿದ್ದರು.

ಹೊಸ ವೆಬ್‌ಸೈಟ್‌ನಲ್ಲಿನ ತಾಂತ್ರಿಕ ತೊಂದರೆ ಸರಿಯಾಗುವವರೆಗೂ ಹಳೆಯ ವೆಬ್‌ಸೈಟ್ ಲಭ್ಯವಾಗುವಂತೆ ಮಾಡಬೇಕೆಂದು ಸಲಹೆ ನೀಡಿರುವುದಾಗಿ ನಿರ್ಮಲಾ ಸೀತಾರಾಮನ್ ಹೇಳಿದ್ದರು. ಆದರೂ ಅಪ್‌ಡೇಟ್ ಐಟಿ ರಿಟರ್ನ್ಸ್ ಫಾರಂನಲ್ಲಿರುವ ಅನೇಕ ಹೊಸ ಅಂಶಗಳು ಹಳೆಯ ವೆಬ್‌ಸೈಟ್‌ನಲ್ಲಿ ಇಲ್ಲ. ಈ ಕುರಿತಾಗಿ ಇನ್ಫೋಸಿಸ್ ಅಧಿಕಾರಿಗಳೊಂದಿಗೆ ನಿರಂತರವಾಗಿ ಸಂಪರ್ಕದಲ್ಲಿದ್ದು, ಹೊಸ ಇಫೈಲಿಂಗ್ ಪೋರ್ಟಲ್ ತಾಂತ್ರಿಕ ದೋಷ ಪರಿಹಾರದ ಬಗ್ಗೆ ಮಾಹಿತಿ ಪಡೆಯುತ್ತಿರುವುದಾಗಿ ನಿರ್ಮಲಾ ಸೀತಾರಾಮನ್ ತಿಳಿಸಿದ್ದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.