ನವದೆಹಲಿ: ಕೋವಿಡ್ 19 ಲಾಕ್ಡೌನ್ ಬಿಕ್ಕಟ್ಟು ಹಿನ್ನೆಲೆಯಲ್ಲಿ ಆರ್ಥಿಕ ಹೊರೆ ಸರಿದೂಗಿಸಲು ಕೇಂದ್ರ ಸರ್ಕಾರ ತನ್ನ ನೌಕರರಿಗೆ ಹಾಗೂ ಪಿಂಚಣಿದಾರರಿಗೆ ನೀಡುವ ವಿವಿಧ ಭತ್ಯೆಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲು ನಿರ್ಧರಿಸಿದೆ.
ಕೇಂದ್ರ ಸರ್ಕಾರಿ ಉದ್ಯೋಗಿಗಳು ಮತ್ತು ಪಿಂಚಣಿದಾರರಿಗೆ ಮೂರು ಕಂತುಗಳ ಹೆಚ್ಚುವರಿ ಭತ್ಯೆ (ಡಿಎ) 2020ರ ಜನವರಿಯಿಂದ 2021ರ ಜೂನ್ 30ರವರೆಗೆ ಸ್ಥಗಿತಗೊಳಿಸಲು ನಿರ್ಧರಿಸಿದೆ ಎಂದು ಕೇಂದ್ರ ಸರ್ಕಾರ ಪ್ರಕಟಣೆ ಮೂಲಕ ತಿಳಿಸಿದೆ.
ಕಳೆದ ಮಾರ್ಚ್‌ನಲ್ಲಿ ಕೇಂದ್ರ ಸರ್ಕಾರಿ ಉದ್ಯೋಗಿಗಳ ಡಿಎ ಮತ್ತು ಡಿಆರ್ ಅನ್ನು ಶೇ17ರಿಂದ ಶೇ 21ಕ್ಕೆ ಹೆಚ್ಚಳ ಮಾಡಿ ಸಚಿವ ಸಂಪುಟ ಅನುಮೋದನೆ ನೀಡಿತ್ತು. ಆದರೆ, ಈಗ ಆ ಹೆಚ್ಚಳವನ್ನು ತಾತ್ಕಾಲಿಕವಾಗಿ ತಡೆಹಿಡಿದಿದೆ. ಸರ್ಕಾರದ ಈ ನಿರ್ಧಾರದಿಂದ ಸುಮಾರು 49.26 ಲಕ್ಷ ಕೇಂದ್ರ ಸರ್ಕಾರಿ ನೌಕರರು ಮತ್ತು 61.17 ಲಕ್ಷ ಪಿಂಚಣಿದಾರರ ಮೇಲೆ ಪರಿಣಾಮ ಬೀರಲಿದೆ.
ಕೊರೊನಾ ವೈರಸ್ ಸಾಂಕ್ರಾಮಿಕ ರೋಗದಿಂದಾಗಿ ಹಣಕಾಸಿನ ಮೇಲೆ ಒತ್ತಡ ಉಂಟಾಗಿದೆ. ಸರ್ಕಾರದ ವೆಚ್ಚದಲ್ಲಿ ಕೂಡು ಏರಿಕೆಯಾಗಿದೆ. ಹೀಗಾಗಿ, ಈ ಕ್ರಮ ಕೈಗೊಳ್ಳಲಾಗಿದೆ. ಪ್ರಸ್ತುತ ದರದಲ್ಲಿ ಹೆಚ್ಚುವರಿ ಭತ್ಯೆ (ಡಿಎ) ಮತ್ತು ಪರಿಹಾರ ಭತ್ಯೆ (ಡಿಆರ್) ಪಾವತಿ ಮುಂದುವರಿಸುವುದಾಗಿ ಹಣಕಾಸು ಸಚಿವಾಲಯ ಹೇಳಿದೆ