ETV Bharat / business

ಅಮೆಜಾನ್​, ಫ್ಲಿಪ್​ಕಾರ್ಟ್​ ವಿರುದ್ಧ ಶಿಸ್ತು ಕ್ರಮಕ್ಕೆ ಇಡಿ, ಆರ್​ಬಿಐಗೆ ಕೇಂದ್ರ ಸೂಚನೆ

ಅಮೆಜಾನ್​ ಮತ್ತು ಫ್ಲಿಪ್​ಕಾರ್ಟ್​ ಕಂಪನಿಗಳು ಎಫ್‌ಡಿಐ ನೀತಿ ಮತ್ತು ವಿದೇಶಿ ವಿನಿಮಯ ನಿರ್ವಹಣಾ ಕಾಯ್ದೆ 1999 (ಫೆಮಾ) ನಿಯಮಗಳನ್ನು ಉಲ್ಲಂಘಿಸಿದ್ದಕ್ಕಾಗಿ ಅಖಿಲ ಭಾರತ ವರ್ತಕರ ಒಕ್ಕೂಟ (ಸಿಎಐಟಿ) ಹಲವು ದೂರುಗಳ ಸ್ವೀಕರಿಸಿದ ಬಳಿಕ ಕೇಂದ್ರವು ಈ ನಿರ್ದೇಶನ ನೀಡಿದೆ.

author img

By

Published : Dec 31, 2020, 4:06 PM IST

E commerce
ಇ ಕಾಮರ್ಸ್​

ನವದೆಹಲಿ: ಇ-ಕಾಮರ್ಸ್ ದೈತ್ಯರು ಮತ್ತು ಭಾರತೀಯ ವರ್ತಕರ ನಡುವಿನ ವಾಣಿಜ್ಯ ಸಮರದಲ್ಲಿ ಮಹತ್ವದ ಬೆಳವಣಿಗೆ ನಡೆದಿದ್ದು, ಅಮೆಜಾನ್ ಮತ್ತು ವಾಲ್​​ಮಾರ್ಟ್​​ ಒಡೆತನದ ಫ್ಲಿಪ್‌ಕಾರ್ಟ್ ವಿರುದ್ಧ ಅಗತ್ಯ ಕ್ರಮ ಕೈಗೊಳ್ಳುವಂತೆ ಕೇಂದ್ರ ಸರ್ಕಾರವು ಜಾರಿ ನಿರ್ದೇಶನಾಲಯ ಮತ್ತು ಭಾರತೀಯ ರಿಸರ್ವ್ ಬ್ಯಾಂಕ್‌ಗೆ ನಿರ್ದೇಶನ ನೀಡಿದೆ.

ಈ ಕಂಪನಿಗಳು ಎಫ್‌ಡಿಐ ನೀತಿ ಮತ್ತು ವಿದೇಶಿ ವಿನಿಮಯ ನಿರ್ವಹಣಾ ಕಾಯ್ದೆ 1999 (ಫೆಮಾ) ನಿಯಮಗಳನ್ನು ಉಲ್ಲಂಘಿಸಿದ್ದಕ್ಕಾಗಿ ಅಖಿಲ ಭಾರತ ವರ್ತಕರ ಒಕ್ಕೂಟ (ಸಿಎಐಟಿ) ಹಲವು ದೂರುಗಳ ಸ್ವೀಕರಿಸಿದ ಬಳಿಕ ಕೇಂದ್ರವು ಈ ನಿರ್ದೇಶನ ನೀಡಿದೆ.

ಇದನ್ನೂ ಓದಿ: ಫಾಸ್ಟ್​ಟ್ಯಾಗ್​ ಕಡ್ಡಾಯ ಗಡುವು ಮತ್ತೆ ಮುಂದೂಡಿಕೆ ಮಾಡಿದ ಸಾರಿಗೆ ಸಚಿವಾಲಯ!

ಅಮೆಜಾನ್ ಮತ್ತು ವಾಲ್​​​​ಮಾರ್ಟ್​​ ಒಡೆತನದ ಫ್ಲಿಪ್‌ಕಾರ್ಟ್ ವಿರುದ್ಧ ಸಿಎಐಟಿ ರಾಷ್ಟ್ರೀಯ ಅಧ್ಯಕ್ಷ ಬಿ.ಸಿ. ಭಾರ್ತಿಯಾ ಹಾಗೂ ಪ್ರಧಾನ ಕಾರ್ಯದರ್ಶಿ ಪ್ರವೀಣ್ ಖಂಡೇಲ್ವಾಲ್ ಅವರು ಕೇಂದ್ರ ವಾಣಿಜ್ಯ ಸಚಿವ ಪಿಯೂಷ್ ಗೋಯಲ್ ಅವರಿಗೆ ನೀಡಿದ ಹಲವು ದೂರುಗಳನ್ನು ನೀಡಿದ್ದರು. ಅಮೆಜಾನ್ ಮತ್ತು ಫ್ಲಿಪ್‌ಕಾರ್ಟ್ ವಿರುದ್ಧ ಅಗತ್ಯ ಕ್ರಮ ಕೈಗೊಳ್ಳುವಂತೆ ವಾಣಿಜ್ಯ ಸಚಿವಾಲಯವು ಡಿಸೆಂಬರ್‌ನಲ್ಲಿ ಜಾರಿ ನಿರ್ದೇಶನಾಲಯ ಮತ್ತು ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾಗೆ ಸೂಚಿಸಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.