ETV Bharat / business

ಹೆಲ್ಮೆಟ್​ಗಳಿಗೆ BIS​ ಮಾನದಂಡ ಕಡ್ಡಾಯ: ನಿಮ್ಮ ಸಲಹೆ, ಕಮೆಂಟ್​ ಕೇಳ್ತಿದೆ ಸಾರಿಗೆ ಸಚಿವಾಲಯ - ಹೆಲ್ಮೆಟ್

ಬ್ಯೂರೋ ಆಫ್ ಇಂಡಿಯನ್ ಸ್ಟ್ಯಾಂಡರ್ಡ್ಸ್ ಕಾಯ್ದೆ 2016ರ ಪ್ರಕಾರ, ಕಡ್ಡಾಯ ಪ್ರಮಾಣೀಕರಣದಡಿಯಲ್ಲಿ ದ್ವಿಚಕ್ರ ವಾಹನ ಸವಾರರಿಗೆ ರಕ್ಷಣಾತ್ಮಕ ಹೆಲ್ಮೆಟ್‌ಗಳನ್ನು ತರಲು ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯ ಕರಡು ಅಧಿಸೂಚನೆ ಹೊರಡಿಸಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.

Helmet
ಹೆಲ್ಮೆಟ್​
author img

By

Published : Aug 1, 2020, 7:08 PM IST

ನವದೆಹಲಿ: ದ್ವಿಚಕ್ರ ವಾಹನಗಳಿಂದ ಸಂಭವಿಸುವ ಮಾರಣಾಂತಿಕ ಗಾಯಗಳನ್ನು ತಗ್ಗಿಸುವ ಪ್ರಯತ್ನದ ಭಾಗವಾಗಿ ಹೆಲ್ಮೆಟ್‌ಗಳನ್ನು ಕಡ್ಡಾಯವಾಗಿ ಬಿಐಎಸ್ ಮಾನದಂಡದ ವ್ಯಾಪ್ತಿಗೆ ತರುವ ಪ್ರಕ್ರಿಯೆಯನ್ನು ಕೇಂದ್ರ ಸರ್ಕಾರ ಪ್ರಾರಂಭಿಸಿದೆ ಎಂದು ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯ ತಿಳಿಸಿದೆ.

ಈ ಪ್ರಕ್ರಿಯೆ ಪೂರ್ಣಗೊಂಡ ನಂತರ ದ್ವಿಚಕ್ರ ವಾಹನ ಸವಾರರಿಗೆ ಬಿಐಎಸ್ ಪ್ರಮಾಣೀಕೃತ ಹೆಲ್ಮೆಟ್‌ಗಳನ್ನು ಮಾತ್ರ ಭಾರತದಲ್ಲಿ ತಯಾರಿಸಿ ಮಾರಾಟ ಮಾಡಲಾಗುತ್ತದೆ.

ಬ್ಯೂರೋ ಆಫ್ ಇಂಡಿಯನ್ ಸ್ಟ್ಯಾಂಡರ್ಡ್ಸ್ ಕಾಯ್ದೆ 2016ರ ಪ್ರಕಾರ, ಕಡ್ಡಾಯ ಪ್ರಮಾಣೀಕರಣದಡಿಯಲ್ಲಿ ದ್ವಿಚಕ್ರ ವಾಹನ ಸವಾರರಿಗೆ ರಕ್ಷಣಾತ್ಮಕ ಹೆಲ್ಮೆಟ್‌ಗಳನ್ನು ತರಲು ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯ ಕರಡು ಅಧಿಸೂಚನೆ ಹೊರಡಿಸಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.

ಭಾರತದಲ್ಲಿ ದ್ವಿಚಕ್ರ ವಾಹನಗಳ ತಯಾರಿ ಮತ್ತು ಮಾರಾಟಕ್ಕೆ ಬಿಐಎಸ್ ಪ್ರಮಾಣೀಕೃತ ಹೆಲ್ಮೆಟ್‌ಗಳನ್ನು ಮಾತ್ರ ಹೊಂದಲು ಸಾಧ್ಯವಾಗುತ್ತದೆ ಎಂದು ಹೇಳಿದೆ.

ದ್ವಿಚಕ್ರ ವಾಹನಗಳ ಹೆಲ್ಮೆಟ್‌ ಗುಣಮಟ್ಟ ಸುಧಾರಿಸುತ್ತದೆ. ರಸ್ತೆ ಸುರಕ್ಷತೆ ಇನ್ನಷ್ಟು ಸುಧಾರಿಸುತ್ತದೆ. ದ್ವಿಚಕ್ರ ವಾಹನಗಳಿಂದ ಸಂಭವಿಸುವ ಮಾರಣಾಂತಿಕ ಗಾಯಗಳನ್ನು ಕಡಿಮೆ ಮಾಡಲು ಸಹಕಾರಿಯಾಗುತ್ತದೆ ಎಂದು ಸ್ಪಷ್ಟನೆ ನೀಡಿದೆ.

ಈ ವಿಷಯದಲ್ಲಿ ಸಚಿವಾಲಯವು ಸಲಹೆಗಳನ್ನು ಆಹ್ವಾನಿಸಿದೆ. ಇದನ್ನು ಜಂಟಿ ಕಾರ್ಯದರ್ಶಿ (ಎಂವಿಎಲ್), ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯಕ್ಕೆ ಒಂದು ತಿಂಗಳ ಒಳಗೆ ಕಳುಹಿಸಬಹುದು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.