ETV Bharat / business

ಕೇಂದ್ರದ ಜಿಎಸ್​ಟಿ ನಷ್ಟ ಪರಿಹಾರ: 8ನೇ ಕಂತಿನಡಿ ರಾಜ್ಯಗಳಿಗೆ 6,000 ಕೋಟಿ ರೂ. ಬಿಡುಗಡೆ - ರಾಜ್ಯಗಳಿಗೆ ಜಿಎಸ್​ಟಿ ನಷ್ಟ ಪರಿಹಾರ

ವಿತ್ತ ಸಚಿವಾಲಯ ಬಿಡುಗಡೆ ಮಾಡಿದ ಹಣದಲ್ಲಿ 23 ರಾಜ್ಯಗಳಿಗೆ 5,516.60 ಕೋಟಿ ರೂ. ಹಾಗೂ 483.40 ಕೋಟಿ ರೂ. ಮೂರು ಕೇಂದ್ರಾಡಳಿತ ಪ್ರದೇಶಗಳಿಗೆ (ದೆಹಲಿ, ಜಮ್ಮು & ಕಾಶ್ಮೀರ ಮತ್ತು ಪುದುಚೇರಿ) ಬಿಡುಗಡೆ ಮಾಡಲಾಗಿದೆ ಎಂದು ಜಿಎಸ್​ಟಿ ಮಂಡಳಿ ತಿಳಿಸಿದೆ.

GST compensation
ಜಿಎಸ್​ಟಿ ನಷ್ಟ ಪರಿಹಾರ
author img

By

Published : Dec 21, 2020, 5:06 PM IST

ನವದೆಹಲಿ: ಜಿಎಸ್‌ಟಿ ನಷ್ಟ ಪರಿಹಾರದ ಕೊರತೆ ನೀಗಿಸಲು ಹಣಕಾಸು ಸಚಿವಾಲಯವು 8ನೇ ಕಂತಿನಡಿ ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ 6,000 ಕೋಟಿ ರೂ. ಬಿಡುಗಡೆ ಮಾಡಿದೆ.

ವಿತ್ತ ಸಚಿವಾಲಯ ಬಿಡುಗಡೆ ಮಾಡಿದ ಹಣದಲ್ಲಿ 23 ರಾಜ್ಯಗಳಿಗೆ 5,516.60 ಕೋಟಿ ರೂ. ಹಾಗೂ 483.40 ಕೋಟಿ ರೂ. ಮೂರು ಕೇಂದ್ರಾಡಳಿತ ಪ್ರದೇಶಗಳಿಗೆ (ದೆಹಲಿ, ಜಮ್ಮು & ಕಾಶ್ಮೀರ ಮತ್ತು ಪುದುಚೇರಿ) ಬಿಡುಗಡೆ ಮಾಡಲಾಗಿದೆ ಎಂದು ಜಿಎಸ್​ಟಿ ಮಂಡಳಿ ತಿಳಿಸಿದೆ.

ಉಳಿದ ಐದು ರಾಜ್ಯಗಳಾದ ಅರುಣಾಚಲ ಪ್ರದೇಶ, ಮಣಿಪುರ, ಮಿಜೋರಾಂ, ನಾಗಾಲ್ಯಾಂಡ್ ಮತ್ತು ಸಿಕ್ಕಿಂ ಜಿಎಸ್​​ಟಿ ಅನುಷ್ಠಾನದಿಂದ ಆದಾಯದಲ್ಲಿ ಅಂತರ ಇಲ್ಲ ಎಂದು ಹೇಳಿದೆ.

ರಾಜ್ಯಗಳಿಗೆ ನೀಡಲಾದ 1,06,830 ಕೋಟಿ ರೂ. ಪೈಕಿ ಈವರೆಗೆ ಒಟ್ಟು 42,000 ಕೋಟಿ ರೂ. ಒದಗಿಸಲಾಗಿದೆ. ಜಿಎಸ್​ಟಿ ಅನುಷ್ಠಾನದ ಕಾರಣದಿಂದ ಉಂಟಾಗುವ ನಷ್ಟದ ಕೊರತೆ ಆದಾಯದಲ್ಲಿ ಅಂದಾಜು 1.10 ಲಕ್ಷ ಕೋಟಿ ರೂ. ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಪರವಾಗಿ ಕೇಂದ್ರ ಸರ್ಕಾರವು ವಿಶೇಷ ವಿಂಡೋ ಮೂಲಕ ಸಾಲ ಪಡೆಯುತ್ತಿದೆ.

ಬ್ರಿಟನ್​ ವೈರಸ್​ಗೆ ಬೆದರಿದ ಗೂಳಿ: ಮುಂಬೈ ಪೇಟೆಯಲ್ಲಿ ರಕ್ತಪಾತಕ್ಕೆ ಲಕ್ಷಾಂತರ ಕೋಟಿ ರೂ.ನಷ್ಟ!

ಎಂಟು ಹಂತಗಳಲ್ಲಿ ಸಾಲ ಮಾಡಿದ ಕೇಂದ್ರ ಅಕ್ಟೋಬರ್ 23, ನವೆಂಬರ್ 2, ನವೆಂಬರ್ 9, ನವೆಂಬರ್ 23, ಡಿಸೆಂಬರ್ 1, ಡಿಸೆಂಬರ್ 7, ಡಿಸೆಂಬರ್ 14 ಮತ್ತು ಡಿಸೆಂಬರ್ 21ರಂದು ರಾಜ್ಯಗಳಿಗೆ ಹಣ ಬಿಡುಗಡೆ ಮಾಡಿದೆ.

ಈ ವಾರ ಬಿಡುಗಡೆಯಾದ ಮೊತ್ತವು ರಾಜ್ಯಗಳಿಗೆ ಒದಗಿಸಿದ 8ನೇ ಕಂತಾಗಿದೆ. ಈ ವಾರ ಶೇ 4.1902 ಬಡ್ಡಿದರದಲ್ಲಿ ಎರವಲು ಪಡೆದಿದೆ. ಇಲ್ಲಿಯವರೆಗೆ ಕೇಂದ್ರವು ವಿಶೇಷ ಸಾಲ ಪಡೆಯುವ ವಿಂಡೋ ಮೂಲಕ ಸರಾಸರಿ ಶೇ 4.7712ರಷ್ಟು ಬಡ್ಡಿದರದಲ್ಲಿ 42,000 ಕೋಟಿ ರೂ. ಬಿಡುಗಡೆ ಮಾಡಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.