ಬೆಂಗಳೂರು: ಜಗತ್ತನ್ನು ಕಾಡಿದ ಮಹಾಮಾರಿ ಕೊರೊನಾ ಸಾಂಕ್ರಾಮಿಕ ತಂದೊಡ್ದಿದ ಕಠಿಣ ಸವಾಲು ಹಾಗೂ ಪ್ರಾಕೃತಿಕ ವಿಕೋಪದಂತಹ ಸರಣಿ ಸಮಸ್ಯೆಗಳು ಕರ್ನಾಟಕದ ಆರ್ಥಿಕತೆಯ ತಳಪಾಯ ಅಲುಗಾಡಿಸಿದವು. ಇಂತಹ ಜಟಿಲತೆಯ ನಡುವೆಯೂ ಮುಖ್ಯಮಂತ್ರಿ ಯಡಿಯೂರಪ್ಪ ಅವರು ರಾಜ್ಯ ಬಜೆಟ್ ಮಂಡಿಸಿದರು. ತಮ್ಮ 8ನೇ ಬಜೆಟ್ನಲ್ಲಿ ಯಾವ ಜಿಲ್ಲೆಗೆ ಏನು ಯೋಜನೆ ಘೋಷಿಸಿದರು ಎಂಬ ಮಾಹಿತಿ ಇಲ್ಲಿದೆ.
ದಕ್ಷಿಣ ಕರ್ನಾಟಕ ಮತ್ತು ಹಳೆ ಮೈಸೂರು ಪ್ರಾಂತ್ಯ:
ರಾಮನಗರದಲ್ಲಿ 75 ಕೋಟಿ ರೂ. ವೆಚ್ಚದಲ್ಲಿ ಹೈಟೆಕ್ ರೇಷ್ಮೆ ಗೂಡು ಮಾರುಕಟ್ಟೆ
ಮೈಸೂರಿನ ಕಬಿನಿಯಲ್ಲಿ 50 ಕೋಟಿ ರೂ. ವೆಚ್ಚದಲ್ಲಿ ಉದ್ಯಾನವನ
ವಿಜಯಪುರ ಬಸವನಬಾಗೇವಾಡಿಯ ಇಂಗಳಗಿ ಅಭಿವೃದ್ಧಿಗೆ 5 ಕೋಟಿ ರೂ.
ಬೆಂಗಳೂರು ಸಮಗ್ರ ಅಭಿವೃದ್ಧಿಗೆ 7,795 ಕೋಟಿ ರೂ.
ಬೆಂಗಳೂರಿನಲ್ಲಿ 67 ಕಿಲೋ ಮೀಟರ್ ಫೆರಿಫರಲ್ ರಿಂಗ್ ರಸ್ತೆ
ಚಾಮರಾಜನಗರದಲ್ಲಿ ಅರಿಶಿನ ಮಾರುಕಟ್ಟೆ
ಬೈಯಪ್ಪನಹಳ್ಳಿಯಲ್ಲಿ 50 ಕೋಟಿ ರೂ. ವೆಚ್ಚದಲ್ಲಿ ಸುಸ್ಸಜ್ಜಿತ ಹೂವಿನ ಮಾರುಕಟ್ಟೆ ನಿರ್ಮಾಣ
ಮೈಸೂರಿನಲ್ಲಿ ಕಿದ್ವಾಯಿ ಆಸ್ಪತ್ರೆಯ ಮಾದರಿಯಲ್ಲಿ ಆಸ್ಪತ್ರೆಗಳ ನಿರ್ಮಾಣ
ಆದಿಚುಂಚನಗಿರಿ ಮಠಕ್ಕೆ 10 ಕೋಟಿ ರೂ.
ಮಂಡ್ಯ ಸ್ಟೇಡಿಯಂಗೆ 10 ಕೋಟಿ ರೂ.
ಡಾ ಎಚ್ ನರಸಿಂಹಯ್ಯ ಗೌರವಾರ್ಥ ಚಿಕ್ಕಬಳ್ಳಾಪುರದ ಗೌರಿಬಿದನೂರು ತಾಲೂಕಿನ ಹೊಸೂರಿನಲ್ಲಿ 200 ಎಕರೆ ಪ್ರದೇಶದಲ್ಲಿ ಅಂತಾರಾಷ್ಟ್ರೀಯ ವಿಜ್ಞಾನ ಕೇಂದ್ರ ನಿರ್ಮಾಣ
ಸಿಂಗೇನ ಅಗ್ರಹಾರ ಸಮೀಪದ ಗುಳಿಮಂಗಳ ಗ್ರಾಮದಲ್ಲಿ ಅತ್ಯಾಧುನಿಕ ತರಕಾರಿ ಮಾರುಕಟ್ಟೆ ನಿರ್ಮಾಣ
ಹಾಸನದ ಶ್ರವಣ ಬೆಳಗೋಳ ಮತ್ತು ಇತರೆ ಜೈನ ಕ್ಷೇತ್ರಗಳ ಅಭಿವೃದ್ಧಿಗೆ 50 ಕೋಟಿ ರೂ.
ಶಿವಮೊಗ್ಗ ಜಿಲ್ಲೆಯಲ್ಲಿರುವ ಆಯುರ್ವೇದ ಕಾಲೇಜನ್ನು ಆಯುಷ್ ವಿಶ್ವವಿದ್ಯಾಲಯವನ್ನಾಗಿ ಮೇಲ್ದರ್ಜೆಗೆ
ಶಿವಮೊಗ್ಗ & ಮೈಸೂರಲ್ಲಿ 100 ಕೋಟಿ ರೂ. ವೆಚ್ಚದಲ್ಲಿ ಪ್ರಾದೇಶಿಕ ಕ್ಯಾನ್ಸರ್ ಚಿಕಿತ್ಸಾ ಕೇಂದ್ರ ಸ್ಥಾಪನೆ
ಕೋರಮಂಗಲ ರಾಜಕಾಲುವೆ ಅಭಿವೃದ್ಧಿಗೆ 169 ಕೋಟಿ ರೂ.
ಬೆಂಗಳೂರಿನ ಮೂರು ಕಡೆ ಮೇಲ್ಸೇತವೆ ನಿರ್ಮಾಣ
ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ 384 ಕೋಟಿ ರೂ.
ಹಾಸನ ವಿಮಾನ ನಿಲ್ದಾಣಕ್ಕೆ 175 ಕೋಟಿ ರೂ.
ಕರಾವಳಿ ಕರ್ನಾಟಕ
ಉಡುಪಿಯ ತ್ರಾಸಿ, ಮರವಂತೆ, ಒತ್ತಿನೆಣೆ ಹಾಗೂ ಇತರೆ ಕಡಲ ತೀರಗಳನ್ನು ಅಂತಾರಾಷ್ಟ್ರೀಯ ದರ್ಜೆಗೇರಿಸಲು 10 ಕೋಟಿ ರೂ. ವೆಚ್ಚ
ಮಂಗಳೂರು-ಪಣಜಿ ನಡುವೆ ಜಲಮಾರ್ಗ ಅಭಿವೃದ್ಧಿ
ಉತ್ತರ ಕನ್ನಡ ಜಿಲ್ಲೆಯ ಕರಾವಳಿ ಪ್ರದೇಶದಲ್ಲಿ 300 ಕೋಟಿ ರೂ. ವೆಚ್ಚದಲ್ಲಿ ನದಿಗಳಲ್ಲಿ ಪ್ರವಾಹ ಮತ್ತು ಉಪ್ಪುನೀರು ಹಿಮ್ಮುಖ ತಡೆಗೆ ಖಾರ್ ಲ್ಯಾಂಡ್ ಯೋಜನೆ
ಕರಾವಳಿ ಭದ್ರತಾ ಪಡೆ ತಂತ್ರಜ್ಞಾನ ಅಭಿವೃದ್ಧಿಗೆ ಎರಡು ಕೋಟಿ. ರೂ.
ಮಂಗಳೂರಿನ ಗಂಜಿಮಠದಲ್ಲಿ ಪ್ಲಾಸ್ಟಿಕ್ ಪಾರ್ಕ್ ಗೆ 150 ಕೋಟಿ ರೂ.
ಮಲೆನಾಡು, ಕರಾವಳಿಯಲ್ಲಿ ಕಾಲುಸಂಕ ನಿರ್ಮಾಣಕ್ಕೆ 100 ಕೋಟಿ ರೂ.
ಉಡುಪಿಯ ಪೇಜಾವರಶ್ರೀಗಳ ಸ್ಮೃತಿವನಕ್ಕೆ 2 ಕೋಟಿ ರೂ.
ಸಿದ್ದಗಂಗಾ ಶ್ರೀಗಳ ಸ್ಮೃತಿವನಕ್ಕೆ 2 ಕೋಟಿ ರೂ.
ಉತ್ತರ ಕರ್ನಾಟಕ
ಬಳ್ಳಾರಿಯ ಆಲದಮಹಳ್ಳಿ ಗ್ರಾಮದಲ್ಲಿ ಅತ್ಯಾಧುನಿಕ ಒಣಮೆಣಸಿನಕಾಯಿ ಮಾರುಕಟ್ಟೆ ಸ್ಥಾಪನೆ
ಬ್ಯಾಡಗಿ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ 4 ಕೋಟಿ ರೂ. ವೆಚ್ಚದಲ್ಲಿ ಆಧುನಿಕ ಗುಣವಿಶ್ಲೇಷಣಾ ಘಟಕ ಸ್ಥಾಪನೆ
ಚಿತ್ರದುರ್ಗದಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆ
ಧಾರವಾಡ-ಕಿತ್ತೂರು-ಬೆಳಗಾವಿಗೆ ಹೊಸ ರೈಲು ಮಾರ್ಗ ನಿರ್ಮಿಸಲು 927 ಕೋಟಿ ರೂ. ಅನುದಾನ
ಬಾಗಲಕೋಟೆಯ ಬಾದಾಮಿ ತಾಲೂಕಿನ ಗುಳೇದಗುಡ್ಡ ನಗರದಲ್ಲಿ ಜವಳಿ ಪಾರ್ಕ್ ಸ್ಥಾಪನೆ
ಬಳ್ಳಾರಿಯ ಕುಡುತಿನಿ ಬೂದಿದಿಬ್ಬವನ್ನು 5 ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ಧಿ
ವಿಜಯಪುರ ವಿಮಾನ ನಿಲ್ದಾಣಕ್ಕೆ 220 ಕೋಟಿ ರೂ.
ಕೊಪ್ಪಳದಲ್ಲಿ ನಾರಿ ಸುವರ್ಣ ಕುರಿ ಸಂವರ್ಧನ ಕೇಂದ್ರ
ಇಟ್ಟಂಗಿಹಾಳದಲ್ಲಿ ಆಹಾರ ಪಾರ್ಕ್ ನಿರ್ಮಾಣ
ಬೀದರ್ನ ಬಸವಕಲ್ಯಾಣಕ್ಕೆ 200 ಕೋಟಿ ರೂ.
ಕಿತ್ತೂರು ಅಭಿವೃದ್ದಿ ಪ್ರಾಧಿಕಾರಕ್ಕೆ 50 ಕೋಟಿ ರೂ.
ಜಗಜ್ಯೋತಿ ಬಸವಣ್ಣ ಜನ್ಮಸ್ಥಳ ಅಭಿವೃದ್ಧಿಗೆ 5 ಕೋಟಿ ರೂ.
ಕೊಪ್ಪಳ ಜಿಲ್ಲೆ ಕನಕಗಿರಿ ತಾಲೂಕಿನ ಸಿರಿವಾರ ಗ್ರಾಮದಲ್ಲಿ ತೋಟಗಾರಿಕೆ ತಂತ್ರಜ್ಞಾನ ಪಾರ್ಕ್ ಅಭಿವೃದ್ಧಿ
ದಾವಣಗೆರೆಯಲ್ಲಿ 20 ಕೋಟಿ ರೂ. ವೆಚ್ಚದಲ್ಲಿ 50 ಹಾಸಿಗೆ ಸಾಮರ್ಥ್ಯದ ಜಯದೇವ ಹೃದ್ರೋಗ ವಿಜ್ಞಾನ ಸಂಸ್ಥೆಯ ಉಪಕೇಂದ್ರ
ಧಾರವಾಢದ ಡಿಮ್ಹಾನ್ಸ್ ಸಂಸ್ಥೆಯನ್ನು 75 ಕೋಟಿ ರೂ. ವೆಚ್ಚದಲ್ಲಿ ಮಾನಸಿಕ ನರರೋಗಿಗಳ ಸುಸಜ್ಜಿತ ಚಿಕಿತ್ಸಾ ಸಂಸ್ಥೆಯನ್ನಾಗಿಸಲು ಕ್ರಮ. ಪ್ರಸಕ್ತ ಸಾಲಿನಲ್ಲಿ 10 ಕೋಟಿ ರೂ. ಅನುದಾನ
ಬೆಳಗಾವಿ ನಗರ ವರ್ತುಲ ರಸ್ತೆ ನಿರ್ಮಾಣಕ್ಕೆ 140 ಕೋಟಿ ರೂ.
ಕಲಬುರಗಿ ಜಿಲ್ಲೆಯ ಫಿರೋಜಾಬಾದ್ನಲ್ಲಿ 500 ಮೆಗಾ ವ್ಯಾಟ್ ಸಾಮರ್ಥ್ಯದ ಸೌರಶಕ್ತಿ ಪಾರ್ಕ್
ಯಾದಗಿರಿ ಕಡೆಚೂರಿನಲ್ಲಿ 1,478 ಕೋಟಿ ರೂ. ವೆಚ್ಚದಲ್ಲಿ ಬಲ್ಕ್ ಡ್ರಗ್ ಪಾರ್ಕ್