ETV Bharat / business

ಕರ್ನಾಟಕ ಆಯವ್ಯಯ: ಅನ್ನದಾತರಿಗೆ ಬಿಎಸ್​ವೈ ಬಂಪರ್​ ಗಿಫ್ಟ್​ - ಟುಡೇ ಕರ್ನಾಟಕ ಬಜೆಟ್​

ರಾಜ್ಯವು ಸಂಪನ್ಮೂಲಗಳ ಕೊರತೆಯನ್ನು ಎದುರಿಸುತ್ತಿದ್ದರೂ ನಮ್ಮ ಸರ್ಕಾರವು ರೈತರ ಬದುಕನ್ನು ಹಸನುಗೊಳಿಸಿ, ಬಡವರು ಮತ್ತು ದುರ್ಬಲರ ಅಭ್ಯುದಯ ಸಾಧಿಸಲು ಬದ್ಧವಾಗಿದೆ. ಸಮಾಜದ ಆಶೋತ್ತರಗಳಿಗೆ ಸ್ಪಂದಿಸುವ ಆಯವ್ಯಯ ಇದಾಗಿದೆ. ರೈತರ ನಿರಂತರ ಪರಿಶ್ರಮದ ಫಲವಾಗಿ ನಮಗೆ ಆಹಾರ ಸಿಗುತ್ತಿದೆ. ನಮ್ಮ ಸರ್ಕಾರವು ರೈತರ ಕಲ್ಯಾಣ ಹಾಗೂ ಅವರ ಆದಾಯ ದ್ವಿಗುಣಗೊಳಿಸಲು ಬದ್ಧವಾಗಿದೆ ಎಂದು ಸಿಎಂ ಯಡಿಯೂರಪ್ಪ ಆಯವ್ಯಯ ಮಂಡನೆ ವೇಳೆ ಘೋಷಿಸಿದರು.

Karnataka Budget
ಕರ್ನಾಟಕ ಆಯವ್ಯಯ
author img

By

Published : Mar 5, 2020, 2:49 PM IST

ಇದಲ್ಲದೇ, ಕೃಷಿ ವಲಯಕ್ಕೆ ಸಂಬಂಧಿಸಿದ ಯೋಜನೆಗಳಿಗೆ ಹೊಸ ಆಯಾಮ ನೀಡುವ ಮೂಲಕ ರೈತರು ಎದುರಿಸುತ್ತಿರುವ ಸಮಸ್ಯೆಗಳನ್ನು ನಿವಾರಿಸಲು ನಾನು ಪ್ರಾಮಾಣಿಕ ಪ್ರಯತ್ನ ಮಾಡುತ್ತಿದ್ದೇನೆ. ನಾನು ಕೇಂದ್ರ ಸರ್ಕಾರವು ಘೋಷಿಸಿದ ಹೊಸ ಯೋಜನೆಗಳ ಜೊತೆಗೆ, ತಜ್ಞರ ಹಾಗೂ ರೈತ ಮುಖಂಡರ ಸಲಹೆಗಳನ್ನು ಪರಿಗಣನೆಗೆ ತೆಗೆದುಕೊಂಡಿದ್ದೇನೆ ಎಂದು ಬಿಎಸ್​ವೈ ಹೇಳಿದರು.

ನೀರಿನ ಭದ್ರತೆ, ಭೂ ಸಂಚಯ ಮತ್ತು ಸಾಮೂಹಿಕ ಕೃಷಿಯನ್ನು ಪ್ರೋತ್ಸಾಹಿಸಲು, ಸೂಕ್ಷ್ಮ ನೀರಾವರಿ ಕೃಷಿಕರ ಉತ್ತೇಜನ, ಕೃಷಿ ಉತ್ಪನ್ನ ಸಂಸ್ಕರಣೆ, ಮಾರುಕಟ್ಟೆಯ ಪ್ರೋತ್ಸಾಹ ಮತ್ತು ಕೃಷಿ ಹಾಗೂ ತೋಟಗಾರಿಕೆಯನ್ನು ಉದ್ದಿಮೆಯಾಗಿ ಪರಿಗಣಿಸಲು ನಮ್ಮ ಸರ್ಕಾರವು ಹೊಸ ಕೃಷಿ ನೀತಿಯನ್ನು ಜಾರಿಗೆ ತರಲಿದೆ.

Karnataka Budget
ಕರ್ನಾಟಕ ಬಜೆಟ್​ :ಕೃಷಿ ಮತ್ತು ಪೂರಕ ಚಟುವಟಿಕೆಗಳು

"ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ಯೋಜನೆ"ಯಡಿ ಸಣ್ಣ ಮತ್ತು ಅತೀ ಸಣ್ಣ ರೈತರಿಗೆ ಕೇಂದ್ರ ಸರ್ಕಾರದ 6000 ರೂ.ಗಳ ಜೊತೆಗೆ ನಮ್ಮ ಸರ್ಕಾರವು 4000 ರೂ.ಗಳ ಹೆಚ್ಚುವರಿ ನೆರವನ್ನು ಘೋಷಿಸಿ, ಈವರೆಗೆ ಸುಮಾರು 41 ಲಕ್ಷ ಬ್ಯಾಂಕ್ ಖಾತೆಗಳಿಗೆ 825 ಕೋಟಿ ರೂ.ಗಳನ್ನು ರಾಜ್ಯದ ವತಿಯಿಂದ ವರ್ಗಾಯಿಸಲಾಗಿದೆ. ಈ ಯೋಜನೆಯನ್ನು ಮುಂದುವರೆಸಲು 2020-21ನೇ ಸಾಲಿನಲ್ಲಿ 2600 ಕೋಟಿ ರೂ.ಗಳನ್ನು ಒದಗಿಸಲಾಗುವುದು ಎಂದು ತಮ್ಮ 7 ನೇ ಬಜೆಟ್​ನಲ್ಲಿ ಬಿಎಸ್​ವೈ ಹೇಳಿದ್ದಾರೆ.

ಸಣ್ಣ ಹಾಗೂ ಅತೀ ಸಣ್ಣ ರೈತರಿಗೆ ಪ್ರತಿ ವರ್ಷ 10,000 ರೂ.ಗಳ ವಾರ್ಷಿಕ ಹಣಕಾಸು ನೆರವು ನೀಡುವುದರ ಜೊತೆಗೆ, ಎಲ್ಲ ರೈತರಿಗೆ ಹಾಗೂ ಮೀನುಗಾರರಿಗೆ ಕಿಸಾನ್ ಕ್ರೆಡಿಟ್ ಕಾರ್ಡ್ ಒದಗಿಸಲಾಗುವುದು. ರೈತರು ಅಧಿಕ ಬಡ್ಡಿ ದರದ ಅನೌಪಚಾರಿಕ ಸಾಲದ ಸುಳಿಯಲ್ಲಿ ಸಿಲುಕಿಕೊಳ್ಳುವುದನ್ನು ತಪ್ಪಿಸಲು ಇದು ರೈತರಿಗೆ ಸಹಾಯಕವಾಗುವುದು. ಉತ್ತಮ ಪ್ರಯತ್ನಗಳ ಹೊರತಾಗಿಯೂ, ರೈತರು ಪ್ರತಿಕೂಲ ಹವಾಮಾನದಿಂದಾಗಿ ಬೆಳೆ ನಷ್ಟವನ್ನು ಅನುಭವಿಸುತ್ತಿದ್ದಾರೆ ಎಂದಿರುವ ಸಿಎಂ, ಪ್ರಧಾನಮಂತ್ರಿ ಫಸಲ್ ಭೀಮಾ ಯೋಜನೆಯ ಅಡಿಯಲ್ಲಿ ಇದನ್ನು ಪರಿಹರಿಸಲಾಗುತ್ತಿದೆ. ನಮ್ಮ ಸರ್ಕಾರವು ರೈತರ ಹಿತಾಸಕ್ತಿಗಳನ್ನು ಸಂರಕ್ಷಿಸಲು ಬದ್ಧವಾಗಿದ್ದು, ಸಕಾಲದಲ್ಲಿ ರಾಜ್ಯದ ವಿಮಾ ಪಾಲನ್ನು ಬಿಡುಗಡೆಗೊಳಿಸಲಾಗುವುದು. ಈ ಉದ್ದೇಶಕ್ಕಾಗಿ 900 ಕೋಟಿ ರೂ.ಗಳನ್ನು ಒದಗಿಸಲಾಗಿದೆ ಎಂದು ಹೇಳಿದ್ದಾರೆ.

ರಾಜ್ಯದಲ್ಲಿ ಬರ ನಿರೋಧಕ ಬೆಳೆಗಳನ್ನು ಪ್ರೋತ್ಸಾಹಿಸಲು ‘ರೈತ ಸಿರಿ’ ಯೋಜನೆಯನ್ನು ಈಗಾಗಲೇ ಘೋಷಿಸಲಾಗಿದೆ. ಈ ಯೋಜನೆಯಡಿ ಪ್ರಮುಖ ಸಿರಿಧಾನ್ಯಗಳಾದ ಊದಲು, ನವಣೆ, ಹಾರಕ, ಕೊರಲೆ, ಸಾಮೆ ಮತ್ತು ಬರಗು ಬೆಳೆಗಳನ್ನು ಬೆಳೆಯಲು ಪ್ರತಿ ಹೆಕ್ಟೇರ್​ಗೆ 10,000 ರೂ.ಗಳಂತೆ ಗರಿಷ್ಠ 20,000 ರೂ.ಗಳ ಪ್ರೋತ್ಸಾಹ ಧನವನ್ನು ನೀಡಲಾಗುತ್ತಿದೆ. ಈ ಯೋಜನೆಯನ್ನು ವಿಸ್ತರಿಸಿ 2020-21ನೇ ಸಾಲಿನಲ್ಲಿ ಟೆಫ್, ಚಿಯಾ ಮತ್ತು ಕ್ವಿನೋವಾ ಸಿರಿಧಾನ್ಯಗಳನ್ನು ಸೇರ್ಪಡೆ ಮಾಡಲಾಗುವುದು.

ಪ್ರಸ್ತುತ ರೈತ ಸಂಪರ್ಕ ಕೇಂದ್ರಗಳ ಮುಖಾಂತರ ರೈತರಿಗೆ ಉತ್ತಮ ಗುಣಮಟ್ಟದ ಬೀಜಗಳನ್ನು ಒದಗಿಸಲಾಗುತ್ತಿದೆ. ಅಲ್ಲದೆ, ಹುಟ್ಟುವಳಿ ಖರ್ಚನ್ನು ಕಡಿಮೆ ಮಾಡುವ ಅಧಿಕ ಮೊಳಕೆ ಒಡೆಯುವ ಸಾಮಥ್ರ್ಯವಿರುವ ಬೀಜಗಳನ್ನ ಒದಗಿಸುವ ದೃಷ್ಟಿಯಿಂದ ನಮ್ಮ ಸರ್ಕಾರವು ರಾಸಾಯನಿಕದಿಂದ ಪೂರ್ವ ಸಂಸ್ಕರಿತ ಹಾಗೂ ಪಾಲಿಮರ್ ಲೇಪಿತ ಬೀಜಗಳನ್ನು ಒದಗಿಸುತ್ತದೆ.

ಕೃಷಿಯಲ್ಲಿ ಕಾಲಕಾಲಕ್ಕೆ ಮಣ್ಣು / ನೀರು ಪರೀಕ್ಷೆ ಮತ್ತು ಇತರೆ ತಾಂತ್ರಿಕ ನೆರವಿಗಾಗಿ “ಸಂಚಾರಿ ಕೃಷಿ ಹೆಲ್ತ್ ಕ್ಲಿನಿಕ್‍ಗಳನ್ನು” ಪ್ರಾರಂಭಿಸಲು ಉದ್ದೇಶಿಸಲಾಗಿದೆ. ಈ ಸಂಚಾರಿ ಘಟಕಗಳು ಹಳ್ಳಿಗಳಿಗೆ ಭೇಟಿ ನೀಡಿ, ಮಣ್ಣು ಮತ್ತು ನೀರನ್ನು ಸ್ಥಳದಲ್ಲಿಯೇ ಪರೀಕ್ಷಿಸಿ, ರೈತರ ಮನೆ ಬಾಗಿಲಿನಲ್ಲಿಯೇ ಕೀಟನಾಶಕಗಳ ಹಾಗೂ ರೋಗಗಳ ಬಗ್ಗೆ ತಾಂತ್ರಿಕ ಮಾಹಿತಿಗಳನ್ನು ಹಾಗೂ ಪರಿಹಾರಗಳನ್ನು ಒದಗಿಸಲಿವೆ.

ರಾಸಾಯನಿಕ ಆಧಾರಿತ ಕೃಷಿಯ ಅನಾನುಕೂಲತೆ ಮತ್ತು ಅಪಾಯವು ವಿಜ್ಞಾನಿಗಳಿಗೆ ಗೋಚರವಾಗಿದೆ. ಸಾವಯವ ಕೃಷಿ ಇದಕ್ಕೆ ಪರಿಹಾರವಾಗಿದೆ. ರಾಸಾಯನಿಕಗಳ ಮೂಲಕ ದೊರೆಯುವಂತಹ ಅದೇ ಪೌಷ್ಟಿಕತೆಯನ್ನು ಸಾವಯವ ಆಕರಗಳಿಂದ ಪಡೆದುಕೊಳ್ಳಬಹುದಾಗಿದೆ. ಈ ಉದ್ದೇಶಕ್ಕಾಗಿ ನೀರಿನಲ್ಲಿ ಕರಗುವಂತಹ ಗೊಬ್ಬರಗಳು, ಸೂಕ್ಷ್ಮ-ಪೌಷ್ಟಿಕಾಂಶಗಳು, ಹೈಡ್ರೋಜೆಲ್ ಇತ್ಯಾದಿಗಳನ್ನು ಬಳಸಲು ನೆರವು ನೀಡಲಾಗುವುದು. ಸಾವಯವ ಕೃಷಿಯನ್ನು ಪ್ರೋತ್ಸಾಹಿಸುವುದಕ್ಕಾಗಿ 200 ಕೋಟಿ ರೂ.ಗಳನ್ನು ತೆಗೆದಿರಸಲಾಗಿದೆ ಎಂದು ಸಿಎಂ ತಮ್ಮ ಬಜೆಟ್ ಭಾಷಣದಲ್ಲಿ ಹೇಳಿದ್ದಾರೆ.

ಮಣ್ಣಿನ ಆರೋಗ್ಯ ಕಾರ್ಯಕ್ರಮವು ಅತ್ಯಾದ್ಯತೆಯ ವಿಷಯವಾಗಿದೆ. ರಾಜ್ಯವು 163 ಲಕ್ಷ ಮಣ್ಣು ಆರೋಗ್ಯ ಕಾರ್ಡ್‍ಗಳನ್ನು ಕೃಷಿಕರಿಗೆ ವಿತರಿಸಿದೆ. ಭೂ ಸಂಪನ್ಮೂಲ ಯಾದಿ, ನೀರಿನ ಲಭ್ಯತೆ ಮತ್ತು ಮಣ್ಣು ಆರೋಗ್ಯ ಕಾರ್ಡ್ ಶಿಫಾರಸ್ಸುಗಳ ಮೇಲೆ ರೈತರಿಗೆ ಪ್ರದೇಶವಾರು ಸೂಕ್ತ ಬೆಳೆಯನ್ನು ಬೆಳೆಯಲು, ಅಗತ್ಯ ಬೀಜಗಳು, ರಸಗೊಬ್ಬರಗಳು, ಸಣ್ಣ ಪೌಷ್ಟಿಕಾಂಶಗಳನ್ನು ಉಪಯೋಗಿಸುವಂತಹ ಶಿಫಾರಸುಗಳನ್ನೊಳಗೊಂಡ ಒಂದು ನೀತಿಯನ್ನು ರೂಪಿಸಲಾಗುವುದು ಎಂದು ಘೋಷಿಸಿದ್ದಾರೆ.

ನೀರು ಮತ್ತು ಗೊಬ್ಬರಗಳ ಬಳಕೆಯ ದಕ್ಷತೆಯನ್ನು ಹೆಚ್ಚಿಸಲು ಮತ್ತುಕೃಷಿಉತ್ಪಾದಕತೆಯನ್ನುಹೆಚ್ಚಿಸಲುಸಾಮಥ್ರ್ಯಾಭಿವೃದ್ಧಿ ಮತ್ತು ಅರಿವು ಮೂಡಿಸುವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು. ಈ ನಿಟ್ಟಿನಲ್ಲಿ ರಾಜ್ಯಾದ್ಯಂತ 40 ಪ್ರ್ರಾತ್ಯಕ್ಷಿಕೆ ಕ್ಷೇತ್ರಗಳನ್ನು ಅಭಿವೃದ್ಧಿಪಡಿಸಿ, ಉತ್ತಮ ಕೃಷಿ ಪದ್ಧತಿಗಳು, ನೂತನ ತಂತ್ರಜ್ಞಾನಗಳು ಮತ್ತು ಕೊಯ್ಲೋತ್ತರ ನಿರ್ವಹಣೆ ಇತ್ಯಾದಿಗಳ ಬಗ್ಗೆ ಕೃಷಿಕರಿಗೆ ಪ್ರಾತ್ಯಕ್ಷಿಕೆ ನೀಡಲಾಗುವುದು ಎಂದು ತಿಳಿಸಿದ್ದಾರೆ.

ಆಹಾರ ಸಂಸ್ಕರಣಾ ವಲಯದ ಬಲವರ್ಧನೆ ಮತ್ತು ಕೃಷಿ ಉತ್ಪನ್ನ ಆಧಾರಿತ ರಫ್ತುಗಳನ್ನು ಹೆಚ್ಚಿಸುವುದು ನಮ್ಮ ಆದ್ಯತೆಯಾಗಿದೆ. ಕೃಷಿ ಮಹಾಮಂಡಳಗಳು, ರಫ್ತುದಾರರು, ಆಹಾರ ಸಂಸ್ಕರಣಾ ಸಂಸ್ಥೆಗಳು ಮತ್ತು ಆಹಾರ ಸಂಸ್ಕರಣಾ ಉದ್ದಿಮೆದಾರರಿಗೆ ಕೇಂದ್ರೀಯ ಆಹಾರ ತಂತ್ರಜ್ಞಾನ ಮತ್ತುಸಂಶೋಧನಾ ಸಂಸ್ಥೆ, ಭಾರತೀಯ ತೋಟಗಾರಿಕಾ ಸಂಶೋಧನಾ ಸಂಸ್ಥೆ ಹಾಗೂ ಕೃಷಿ ಮತ್ತು ಸಂಸ್ಕರಿತ ಆಹಾರ ಉತ್ಪನ್ನಗಳ ರಫ್ತು ಅಭಿವೃದ್ಧಿ ಪ್ರಾಧಿಕಾರಗಳ ಸಕ್ರಿಯ ಸಹಭಾಗಿತ್ವದೊಂದಿಗೆ ಮೌಲ್ಯವರ್ಧನೆ, ಸಂಸ್ಕರಣೆ, ದಾಸ್ತಾನು ಮತ್ತು ಪ್ಯಾಕೇಜಿಂಗ್‍ಗಳ ಬಗ್ಗೆ ಹೊಸ ತಂತ್ರಜ್ಞಾನಗಳನ್ನು ಪರಿಚಯಿಸಲಾಗುವುದು ಎಂದು ಸಿಎಂ ಘೋಷಿಸಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.