ETV Bharat / business

ಅಂತಾರಾಷ್ಟ್ರೀಯ ಪ್ರಯಾಣಿಕರ ವೀಸಾ, ಪ್ರಯಾಣ ನಿರ್ಬಂಧ ಸಡಿಲಿಕೆ - Indian Visa Relaxation

ರ್ಕಾರ ವೀಸಾ ಮತ್ತು ಪ್ರಯಾಣ ನಿರ್ಬಂಧಗಳನ್ನು ಸಡಿಲಿಸಲು ನಿರ್ಧರಿಸಿದೆ. ಆ ಮೂಲಕ ದೇಶಕ್ಕೆ ಆಗಮಿಸುವ ಮತ್ತು ನಿರ್ಗಮಿಸುವ ಭಾರತೀಯರು ಮತ್ತು ವಿದೇಶಿ ಪ್ರಜೆಗಳಿಗೆ ಅವಕಾಶ ಮಾಡಿಕೊಟಿದೆ. ಆದ್ದರಿಂದ ಭಾರತಕ್ಕೆ ಯಾವುದೇ ಉದ್ದೇಶಕ್ಕೆ ಆಗಮಿಸಲು ಬಯಸುವ ಎಲ್ಲ ವಿದೇಶಿ ಪ್ರಜೆಗಳಿಗೆ ಮತ್ತು ಒಸಿಐ ಮತ್ತು ಪಿಐಒ ಕಾರ್ಡ್ ಹೊಂದಿರುವವರಿಗೆ ಅನುಮತಿ ನೀಡಲಾಗುತ್ತಿದೆ.

visa
ವೀಸಾ
author img

By

Published : Oct 23, 2020, 4:15 AM IST

ನವದೆಹಲಿ: ಕೋವಿಡ್-19 ಸಾಂಕ್ರಾಮಿಕದಿಂದ ಉಂಟಾಗಿರುವ ಪರಿಸ್ಥಿತಿ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ 2020ರ ಫೆಬ್ರವರಿಯಿಂದ ಅಂತಾರಾಷ್ಟ್ರೀಯ ಪ್ರಯಾಣಿಕರ ಆಗಮನ ಮತ್ತು ನಿರ್ಗಮನ ಸಂಚಾರ ನಿರ್ಬಂಧವನ್ನು ಹಂತ-ಹಂತವಾಗಿ ಸಡಿಲಗೊಳಿಸಿದೆ.

ಇದೀಗ ಸರ್ಕಾರ ವೀಸಾ ಮತ್ತು ಪ್ರಯಾಣ ನಿರ್ಬಂಧಗಳನ್ನು ಸಡಿಲಿಸಲು ನಿರ್ಧರಿಸಿದೆ. ಆ ಮೂಲಕ ದೇಶಕ್ಕೆ ಆಗಮಿಸುವ ಮತ್ತು ನಿರ್ಗಮಿಸುವ ಭಾರತೀಯರು ಮತ್ತು ವಿದೇಶಿ ಪ್ರಜೆಗಳಿಗೆ ಅವಕಾಶ ಮಾಡಿಕೊಟಿದೆ. ಆದ್ದರಿಂದ ಭಾರತಕ್ಕೆ ಯಾವುದೇ ಉದ್ದೇಶಕ್ಕೆ ಆಗಮಿಸಲು ಬಯಸುವ ಎಲ್ಲ ವಿದೇಶಿ ಪ್ರಜೆಗಳಿಗೆ ಮತ್ತು ಒಸಿಐ ಮತ್ತು ಪಿಐಒ ಕಾರ್ಡ್ ಹೊಂದಿರುವವರಿಗೆ ಅನುಮತಿ ನೀಡಲಾಗುತ್ತಿದೆ. ವಿಮಾನ ನಿಲ್ದಾಣ ಮತ್ತು ಬಂದರುಗಳ ತಪಾಸಣಾ ಕೇಂದ್ರಗಳ ಮೂಲಕ ವಾಯು ಅಥವಾ ಜಲಮಾರ್ಗದ ಮೂಲಕ ಪ್ರವೇಶಿಸಲು ಅವಕಾಶವಿದೆ.

ಆದರೆ, ಪ್ರವಾಸಿ ವೀಸಾ ಹೊಂದಿರುವವರಿಗೆ ಈ ಅವಕಾಶ ಇರುವುದಿಲ್ಲ. ಈ ನಿರ್ಧಾರದಡಿ, ವಂದೇ ಭಾರತ್ ಮಿಷನ್ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ವಿಮಾನಗಳು, ವಾಯುಸಾರಿಗೆ ಬಬಲ್ ವ್ಯಸ್ಥೆಗಳು ಅಥವಾ ನಾಗರಿಕ ವಿಮಾನಯಾನ ಸಚಿವಾಲಯ ಅವಕಾಶ ನೀಡಿರುವ ಯಾವುದೇ ನಿಗದಿಯಾಗದ ವಾಣಿಜ್ಯ ವಿಮಾನಗಳ ಸಂಚಾರಕ್ಕೆ ಅನುಮತಿ ನೀಡಲಾಗಿದೆ. ಅಂತಹ ಎಲ್ಲ ಪ್ರಯಾಣಿಕರು ಕ್ವಾರಂಟೈನ್ ಮತ್ತು ಇತರ ಕೋವಿಡ್-19 ಸಂಬಂಧಿತ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಬೇಕು.

ಕೇಂದ್ರ ಸರ್ಕಾರ ಹಂತ ಹಂತವಾಗಿ ನಿಯಮಗಳನ್ನು ಸಡಿಲಿಸಲು ನಿರ್ಧರಿಸಿರುವ ಜೊತೆಗೆ ಈ ತಕ್ಷಣದಿಂದ ಜಾರಿಗೆ ಬರಲಿದೆ. ಎಲ್ಲಾ ಹಾಲಿ ವೀಸಾಗಳು (ಎಲೆಕ್ಟ್ರಾನಿಕ್ ವೀಸಾ, ಪ್ರವಾಸಿ ವೀಸಾ ಮತ್ತು ವೈದ್ಯಕೀಯ ವೀಸಾ ಹೊರತುಪಡಿಸಿ) ಪುನರ್ ಜಾರಿಗೆ ಬರಲಿದೆ. ಒಂದು ವೇಳೆ ಅಂತಹ ವೀಸಾಗಳ ಅವಧಿ ಮುಗಿದಿದ್ದರೆ ಸಂಬಂಧಿಸಿದ ಭಾರತೀಯ ರಾಯಭಾರ ಕಚೇರಿಗಳಿಂದ ಸೂಕ್ತ ವರ್ಗದಡಿ ಹೊಸ ವೀಸಾಗಳನ್ನು ಪಡೆಯಬಹುದಾಗಿದೆ.

ಯಾವುದೇ ವಿದೇಶಿಯರು ವೈದ್ಯಕೀಯ ಚಿಕಿತ್ಸೆಗಾಗಿ ಭಾರತಕ್ಕೆ ಭೇಟಿ ನೀಡಲು ಬಯಸಿದರೆ ಅವರು ತಮ್ಮ ಪರಿಚಾರಕರು ಸೇರಿದಂತೆ ಪ್ರತ್ಯೇಕ ವೈದ್ಯಕೀಯ ವೀಸಾಗಾಗಿ ಅರ್ಜಿ ಸಲ್ಲಿಸಬಹುದು. ಈ ನಿರ್ಧಾರದಿಂದಾಗಿ ವಿದೇಶಿ ಪ್ರಜೆಗಳು ವಾಣಿಜ್ಯ, ಸಮಾವೇಶಗಳಲ್ಲಿ ಭಾಗವಹಿಸಲು, ಉದ್ಯೋಗ, ಅಧ್ಯಯನ, ಸಂಶೋಧನೆ, ವೈದ್ಯಕೀಯ ಉದ್ದೇಶ ಸೇರಿದಂತೆ ಇತರೆ ಉದ್ದೇಶಗಳಿಗಾಗಿ ಭಾರತಕ್ಕೆ ಬರುವುದು ಸುಲಭವಾಗಲಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.