ETV Bharat / business

2021ಮಾ. 31ರೊಳಗೆ 'ಒನ್ ನೇಷನ್ ಒನ್ ರೇಷನ್ ಕಾರ್ಡ್' ಯೋಜನೆಗೆ ಎಲ್ಲ ರಾಜ್ಯಗಳು ಸೇರ್ಪಡೆ - ಐಎಂಪಿಡಿಎಸ್

ಒಡಿಶಾ, ಸಿಕ್ಕಿಂ ಮತ್ತು ಮಿಜೋರಾಂ 'ಒನ್ ನೇಷನ್ ಒನ್ ರೇಷನ್ ಕಾರ್ಡ್' ಯೋಜನೆಗೆ ಸೇರ್ಪಡೆಯಾದ ನಂತರ 20 ರಾಜ್ಯಗಳು ಈಗ ಇಂಟಿಗ್ರೇಟೆಡ್ ಮ್ಯಾನೇಜ್ಮೆಂಟ್ ಆಫ್ ಪಬ್ಲಿಕ್ ಡಿಸ್ಟ್ರಿಬ್ಯೂಷನ್ ಸಿಸ್ಟಮ್ ಪಡೆದಿವೆ ಎಂದು ಕೇಂದ್ರ ಸಚಿವ ಸಚಿವ ರಾಮ್ ವಿಲಾಸ್ ಪಾಸ್ವಾನ್ ಹೇಳಿದ್ದಾರೆ.

One Nation One Ration Card
ಒನ್ ನೇಷನ್ ಒನ್ ರೇಷನ್ ಕಾರ್ಡ್
author img

By

Published : Jun 1, 2020, 6:53 PM IST

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಸರ್ಕಾರದ ಮಹತ್ವಾಕಾಂಕ್ಷಿ 'ಒನ್ ನೇಷನ್ ಒನ್ ರೇಷನ್ ಕಾರ್ಡ್' ಯೋಜನೆಯನ್ನು ಈವರೆಗೆ 20 ರಾಜ್ಯಗಳಲ್ಲಿ ಜಾರಿಗೆ ತರಲಾಗಿದೆ. ಕೇಂದ್ರ ಸರ್ಕಾರ ಮುಂದಿನ ವರ್ಷದ ಮಾರ್ಚ್ 31ರೊಳಗೆ ಇಡೀ ದೇಶವನ್ನು ಗುರಿಯಾಗಿಸಿಕೊಂಡಿದೆ.

ಒಡಿಶಾ, ಸಿಕ್ಕಿಂ ಮತ್ತು ಮಿಜೋರಾಂ 'ಒನ್ ನೇಷನ್ ಒನ್ ರೇಷನ್ ಕಾರ್ಡ್' ಯೋಜನೆಗೆ ಸೇರ್ಪಡೆಯಾದ ನಂತರ 20 ರಾಜ್ಯಗಳು ಈಗ ಐಎಂಪಿಡಿಎಸ್​ಗೆ (ಇಂಟಿಗ್ರೇಟೆಡ್ ಮ್ಯಾನೇಜ್ಮೆಂಟ್ ಆಫ್ ಪಬ್ಲಿಕ್ ಡಿಸ್ಟ್ರಿಬ್ಯೂಷನ್ ಸಿಸ್ಟಮ್) ಸಂಪರ್ಕ ಹೊಂದಿವೆ ಎಂದು ಕೇಂದ್ರ ಗ್ರಾಹಕ ವ್ಯವಹಾರಗಳು, ಆಹಾರ ಮತ್ತು ಸಾರ್ವಜನಿಕ ವಿತರಣಾ ಸಚಿವ ರಾಮ್ ವಿಲಾಸ್ ಪಾಸ್ವಾನ್ ಹೇಳಿದ್ದಾರೆ.

One Nation One Ration Card
ಒನ್ ನೇಷನ್ ಒನ್ ರೇಷನ್ ಕಾರ್ಡ್

'ನಾನು ಮೊದಲೇ ಘೋಷಿಸಿದಂತೆ ಒಡಿಶಾ, ಸಿಕ್ಕಿಂ ಮತ್ತು ಮಿಜೋರಾಂ ಇಂದು ಸರ್ಕಾರದ ಮಹತ್ವಾಕಾಂಕ್ಷೆಯ 'ಒನ್ ನೇಷನ್ ಒನ್ ರೇಷನ್ ಕಾರ್ಡ್' ಯೋಜನೆಗೆ ಸೇರಿಸಲಾಗಿದೆ. ಇದರೊಂದಿಗೆ 20 ರಾಜ್ಯಗಳು ಐಎಂಪಿಡಿಎಸ್ ಯೋಜನೆಗೆ ಸೇರಿಕೊಂಡಿವೆ' ಎಂದು ಟ್ವಿಟರ್​ನಲ್ಲಿ ಬರೆದುಕೊಂಡಿದ್ದಾರೆ.

ಮತ್ತೊಂದು ಟ್ವೀಟ್‌ನಲ್ಲಿ 'ಒನ್ ನೇಷನ್ ಒನ್ ರೇಷನ್ ಕಾರ್ಡ್' ಯೋಜನೆಯನ್ನು 2021ರ ಮಾರ್ಚ್ 31ರೊಳಗೆ ದೇಶಾದ್ಯಂತ ಜಾರಿಗೆ ತರಲಾಗುವುದು. ಈ ನಿಟ್ಟಿನಲ್ಲಿ 2020ರ ಆಗಸ್ಟ್ 1 ರೊಳಗೆ ಉತ್ತರಾಖಂಡ್, ನಾಗಾಲ್ಯಾಂಡ್ ಮತ್ತು ಮಣಿಪುರ ಸೇರಿಸಲು ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ' ಎಂದಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.