ETV Bharat / business

20 ವರ್ಷಗಳ ಬಳಿಕ ವಾಜಪೇಯಿ ಕನಸು ನನಸು: ವಿಶ್ವದ ಅತಿ ಉದ್ದದ 'ಅಟಲ್​ ಟನಲ್​' ನಾಳೆ ಲೋಕಾರ್ಪಣೆ! - ಹಿಮಾಲಯದ ಪಿರ್ ಪಂಜಾಲ್ ಶ್ರೇಣಿ

ಅಕ್ಟೋಬರ್ 3ರ (ಶನಿವಾರ) ಬೆಳಗ್ಗೆ 10 ಗಂಟೆಗೆ ರೋಹ್ಟಂಗ್​ನಲ್ಲಿ ವಿಶ್ವದ ಅತಿ ಉದ್ದದ ಹೆದ್ದಾರಿಯಾದ ಅಟಲ್ ಸುರಂಗ ಮಾರ್ಗವನ್ನು ಪ್ರಧಾನಿ ನರೇಂದ್ರ ಅವರು ಲೋಕಾರ್ಪಣೆಗೊಳಿಸಲಿದ್ದಾರೆ. ಅಟಲ್ ಸುರಂಗವು ವಿಶ್ವದಲ್ಲಿಯೇ ಅತಿ ಉದ್ದದ ಹೆದ್ದಾರಿಯ ಸುರಂಗವಾಗಿದ್ದು, 9.02 ಕಿ.ಮೀ ಉದ್ದದ ಈ ಸುರಂಗ ಮನಾಲಿಯಿಂದ ಲಹೌಲ್ ಸ್ಪಿತಿ ಕಣಿವೆಯನ್ನು ವರ್ಷವಿಡೀ ಸಂಪರ್ಕಿಸಲಿದೆ.

Atal Tunnel
ಅಟಲ್​ ಟನಲ್​
author img

By

Published : Oct 2, 2020, 4:56 PM IST

ಶಿಮ್ಲಾ: ರೋಹ್ಟಂಗ್​ನಲ್ಲಿ 2000ರ ಜೂನ್ 03ರಂದು ದಿವಂಗತ ಅಟಲ್ ಬಿಹಾರಿ ವಾಜಪೇಯಿ ಅವರು ಅಡಿಪಾಯ ಹಾಕಿದ್ದ ವಿಶ್ವದ ಅತಿ ಉದ್ದದ ಹೆದ್ದಾರಿ 'ಅಟಲ್ ಸುರಂಗ' ಕಾಮಗಾರಿ ಪೂರ್ಣಗೊಂಡಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು ನಾಳೆ ಉದ್ಘಾಟಿಸಲಿದ್ದಾರೆ.

ಅಕ್ಟೋಬರ್ 3ರಂದು (ಶನಿವಾರ) ಬೆಳಗ್ಗೆ 10 ಗಂಟೆಗೆ ರೋಹ್ಟಂಗ್​ನಲ್ಲಿ ವಿಶ್ವದ ಅತಿ ಉದ್ದದ ಹೆದ್ದಾರಿಯಾದ ಅಟಲ್ ಸುರಂಗ ಮಾರ್ಗವನ್ನು ಲೋಕಾರ್ಪಣೆಗೊಳಿಸಲಿದ್ದಾರೆ. ಅಟಲ್ ಸುರಂಗವು ವಿಶ್ವದಲ್ಲಿಯೇ ಅತಿ ಉದ್ದದ ಹೆದ್ದಾರಿಯ ಸುರಂಗವಾಗಿದೆ. 9.02 ಕಿ.ಮೀ ಉದ್ದದ ಈ ಸುರಂಗ ಮನಾಲಿಯಿಂದ ಲಹೌಲ್ ಸ್ಪಿತಿ ಕಣಿವೆಯನ್ನು ವರ್ಷವಿಡೀ ಸಂಪರ್ಕಿಸಲಿದೆ.

ಹಿಮಾಲಯದ ಪಿರ್ ಪಂಜಾಲ್ ಶ್ರೇಣಿಯಲ್ಲಿ ಅತ್ಯಾಧುನಿಕ ವಿಶೇಷಣವಾದ ಅಲ್ಟ್ರಾ ಮಾಡರ್ನ್‌ ಸ್ಪೆಸಿಫಿಕೇಷನ್ಸ್​ನಿಂದ ನಿರ್ಮಿಸಲಾಗಿದ್ದು, ಇದನ್ನು ಸಮುದ್ರ ಮಟ್ಟದಿಂದ ಸರಾಸರಿ 3000 ಮೀಟರ್ ಎತ್ತರದಲ್ಲಿದೆ. ಈ ಸುರಂಗಮಾರ್ಗವು ಮನಾಲಿ ಮತ್ತು ಲೆಹ್ ನಡುವಿನ ಅಂತರವನ್ನು 46 ಕಿ.ಮೀ. ತಗ್ಗಿಸಲಿದ್ದು, 4ರಿಂದ 5 ಗಂಟೆಗಳ ಸಮಯ ಉಳಿಸಲಿದೆ.

ಅಟಲ್ ಸುರಂಗ

ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹಾಗೂ ಹಿಮಾಚಲ ಪ್ರದೇಶದ ಸಿಎಂ ಜೈರಾಮ್ ಠಾಕೂರ್ ಅವರು ಅಟಲ್ ಸುರಂಗ ಮಾರ್ಗಕ್ಕೆ ಇಂದು ಭೇಟಿ ನೀಡಿ, ನಾಳೆ ನಡೆಯುವ ಕಾರ್ಯಕ್ರಮದ ತಯಾರಿಯನ್ನು ಪರಿಶೀಲಿಸಿದರು.

10.5 ಮೀಟರ್ ಅಗಲವಿದ್ದು, ಮುಖ್ಯ ಸುರಂಗದಲ್ಲಿ 3.6 x 2.25 ಮೀಟರ್ ಅಗ್ನಿ ನಿರೋಧಕ ತುರ್ತು ನಿರ್ಗಮನದ ಸುರಂಗವನ್ನೂ ಒಳಗೊಂಡಿದೆ. ಅಟಲ್ ಸುರಂಗವನ್ನು 3,000 ಕಾರುಗಳು ಮತ್ತು 1,500 ಟ್ರಕ್​ಗಳು ನಿತ್ಯ ಗರಿಷ್ಠ ಗಂಟೆಗೆ 80 ಕಿ.ಮೀ. ವೇಗದಲ್ಲಿ ಓಡಾಡಲು ಸಾಧ್ಯವಾಗುವಂತೆ ವಿನ್ಯಾಸ ಮಾಡಲಾಗಿದೆ.

ರೋಹ್ಟಾಂಗ್ ಪಾಸ್ ಕೆಳಗೆ ವ್ಯೂಹಾತ್ಮಕ ಸುರಂಗವನ್ನು ನಿರ್ಮಿಸುವ ಐತಿಹಾಸಿಕ ನಿರ್ಧಾರವನ್ನು 2000ರ ಜೂನ್ 03ರಂದು ದಿವಂಗತ ಅಟಲ್ ಬಿಹಾರಿ ವಾಜಪೇಯಿ ಅವರು ಪ್ರಧಾನಿಯಾಗಿದ್ದಾಗ ತೆಗೆದುಕೊಳ್ಳಲಾಗಿತ್ತು. 2002ರ ಮೇ 26ರಂದು ಸುರಂಗದ ದಕ್ಷಿಣ ಭಾಗದ ಪ್ರವೇಶ ರಸ್ತೆಗೆ ಅಡಿಪಾಯ ಹಾಕಲಾಯಿತು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.