ನವದೆಹಲಿ: ವಲಸೆ ಕಾರ್ಮಿಕರನ್ನು ಅವರ ತವರಿಗೆ ಸಾಗಿಸಲು ಬಸ್ ಮತ್ತು ರೈಲುಗಳನ್ನು ಒದಗಿಸುವ ನೀತಿಯನ್ನು ಕೇಂದ್ರಕ್ಕೆ ಸರಿಯಾಗಿ ವಿನ್ಯಾಸಗೊಳಿಸಲು ಆಗಲಿಲ್ಲ ಎಂದು ಕಾಂಗ್ರೆಸ್ನ ಹಿರಿಯ ಮುಖಂಡ ಪಿ. ಚಿದಂಬರಂ ಕಿಡಿಕಾರಿದ್ದಾರೆ.
ಮಹಾರಾಷ್ಟ್ರದ ಔರಂಗಾಬಾದ್‌ನಲ್ಲಿ ನಡೆದ ರೈಲು ಅವಘಡದಲ್ಲಿ 14 ವಲಸೆ ಕಾರ್ಮಿಕರು ಸಾವನ್ನಪ್ಪಿದ್ದಾರೆ. ರೈಲು ಹಳಿ ಮೇಲೆ ಮಲಗಿದ್ದ ಕಾರ್ಮಿಕರ ಮೇಲೆ ಶುಕ್ರವಾರ ಬೆಳಗ್ಗೆ ಸರಕು ರೈಲು ಹರಿದು ಮೃತಪಟ್ಟರು. ಇದರ ಬೆನ್ನಲ್ಲೇ ಮಾಜಿ ಹಣಕಾಸು ಸಚಿವ ಕೇಂದ್ರ ವಿರುದ್ಧ ಕಿಡಿಕಾರಿದ್ದಾರೆ.
ಎರಡು ದಿನಗಳ ಹಿಂದೆ ನಾನು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಏಕೆ ಸಾವಿರಾರು ವಲಸೆ ಕಾರ್ಮಿಕರು ತಮ್ಮ ತವರು ರಾಜ್ಯಗಳಿಗೆ ಹೋಗುತ್ತಿದ್ದಾರೆ ಎಂಬ ಅಂಶವನ್ನು ಏಕೆ ಮರೆತು ಬಿಡುತ್ತಿವೆ ಎಂದು ಟ್ವಿಟರ್ನಲ್ಲಿ ಕೇಳಿದ್ದೆ.
ವಲಸೆ ಕಾರ್ಮಿಕರನ್ನು ಸಾಗಿಸಲು ಬಸ್ ಮತ್ತು ರೈಲುಗಳನ್ನು ಒದಗಿಸುವ ಸಾರಿಗೆ ನೀತಿಯನ್ನು ಸರಿಯಾಗಿ ವಿನ್ಯಾಸಗೊಳಿಸಲು, ಯೋಜಿಸಲು, ಸಮನ್ವಯಗೊಳಿಲು ಮತ್ತು ಕಾರ್ಯಗತಗೊಳಿಸಲು ಆಗಿಲ್ಲ ಎಂಬುದು ಸ್ಪಷ್ಟವಾಗಿದೆ ಎಂದು ಸರಣಿ ಟ್ವೀಟ್‌ಗಳಲ್ಲಿ ಟೀಕಿಸಿದರು.