ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎರಡನೇ ಅವಧಿಯಲ್ಲಿ ಹಣಕಾಸು ಇಲಾಖೆಯ ಕಾರ್ಯದರ್ಶಿ ಹುದ್ದೆಗೆ ರಾಜೀವ್ ಕುಮಾರ್ ಅವರನ್ನು ನೇಮಕ ಮಾಡಲಾಗಿದೆ.
ಪ್ರಸ್ತುತ ಹಣಕಾಸು ಸೇವೆಗಳ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುತ್ತಿರುವ ರಾಜೀವ್ ಕುಮಾರ್ ಅವರನ್ನು ಮಂಗಳವಾರ ಹೊಸ ಹಣಕಾಸು ಕಾರ್ಯದರ್ಶಿಯಾಗಿ ನೇಮಿಸಲಾಗಿದೆ.
ಪ್ರಧಾನ ಮಂತ್ರಿ ನರೇಂದ್ರ ಮೋದಿ ನೇತೃತ್ವದ ಸಂಪುಟದ ನೇಮಕಾತಿ ಸಮಿತಿ (ಎಸಿಸಿ) ರಾಜೀವ್ ಕುಮಾರ್ ಅವರನ್ನು ಹೊಸ ಹಣಕಾಸು ಕಾರ್ಯದರ್ಶಿಯಾಗಿ ನೇಮಿಸಲು ಅನುಮೋದನೆ ನೀಡಿದೆ. ಕುಮಾರ್ ಜಾರ್ಖಂಡ್ ಕೇಡರನ್ 1984 ಬ್ಯಾಚ್ನ ಐಎಎಸ್ ಅಧಿಕಾರಿ.
ಹಣಕಾಸು ಇಲಾಖೆಯ ಮಾಜಿ ಕಾರ್ಯದರ್ಶಿ ಸುಭಾಷ್ ಚಂದ್ರ ಗರ್ಗ್ ಅವರು ದಿಢೀರಾಗಿ ಇಂಧನ ಇಲಾಖೆಗೆ ಕಳೆದ ಬುಧವಾರ ತಡ ರಾತ್ರಿ ವರ್ಗಾಯಿಸಲಾಗಿತ್ತು. ಆ ಬಳಿಕ ಸ್ವಯಂ ನಿವೃತ್ತಿ ಘೋಷಿಸುವುದಾಗಿ ಹೇಳಿದ್ದರು. ಗರ್ಗ್ ಅವರ ಸ್ಥಾನಕ್ಕೆ ರಾಜೀವ್ ನೇಮಕವಾಗಿದ್ದಾರೆ.