ಮುಂಬೈ: ಆರ್‌ಬಿಐ ಗವರ್ನರ್ ಶಕ್ತಿಕಾಂತ ದಾಸ್ ಅವರು ಗುರುವಾರ ಕ್ರೆಡಿಟ್ ರೇಟಿಂಗ್ ಏಜೆನ್ಸಿಗಳ ಮುಖ್ಯಸ್ಥರೊಂದಿಗೆ ಸಭೆ ನಡೆಸಿದರು.
ಆರ್‌ಬಿಐ ಗವರ್ನರ್ ವಿಡಿಯೋ ಕಾನ್ಫರೆನ್ಸ್ ಮೂಲಕ ವ್ಯವಸ್ಥಾಪಕ ನಿರ್ದೇಶಕರು ಮತ್ತು ಕ್ರೆಡಿಟ್ ರೇಟಿಂಗ್ ಏಜೆನ್ಸಿಗಳ (ಸಿಆರ್‌ಎ) ಮುಖ್ಯ ಅಧಿಕಾರಿಗಳ ಜತೆ ಸಂವಾದ ನಡೆಸಿದರು. ಸ್ಥೂಲ ಆರ್ಥಿಕ ಪರಿಸ್ಥಿತಿಯ ಮೌಲ್ಯಮಾಪನ ಮತ್ತು ಹಣಕಾಸು ವಲಯ ಸೇರಿದಂತೆ ವಿವಿಧ ಕೈಗಾರಿಕೆಗಳ ಬಗ್ಗೆ ತಮ್ಮ ದೃಷ್ಟಿಕೋನ ತಿಳಿಸುವಂತೆ ಕೋರಿದ್ದಾರೆ ಎಂದು ಕೇಂದ್ರ ಬ್ಯಾಂಕ್ ಪ್ರಕಟಣೆಯಲ್ಲಿ ತಿಳಿಸಿದೆ.
ಸಭೆಯಲ್ಲಿ ಡೆಪ್ಯೂಟಿ ಗವರ್ನರ್‌ಗಳು ಮತ್ತು ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾದ (ಆರ್‌ಬಿಐ) ಇತರೆ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.
ಸಿಆರ್‌ಎಗಳು ನೀಡಿದ ರೇಟಿಂಗ್ ಹಾಗೂ ಒಟ್ಟಾರೆ ಆರ್ಥಿಕ ಆರೋಗ್ಯದ ದೃಷ್ಟಿಕೋನ ಮತ್ತು ಪ್ರಸ್ತುತ ಸಂದರ್ಭದಲ್ಲಿ ಕ್ರೆಡಿಟ್ ರೇಟಿಂಗ್‌ಗಳ ಮೇಲೆ ಪರಿಣಾಮ ಬೀರುವ ಪ್ರಮುಖ ಅಂಶಗಳ ಕುರಿತು ಚರ್ಚಿಸಿದ್ದಾರೆ.
ರೇಟಿಂಗ್ ಪ್ರಕ್ರಿಯೆಗಳನ್ನು ಮತ್ತಷ್ಟು ಬಲಪಡಿಸುವ ಮತ್ತು ಪ್ರಮುಖ ಸ್ಟೇಕ್ಹೋಲ್ಡರ್ಗಳ ಜತೆ ತೊಡಗಿಸಿಕೊಳ್ಳುವ ಮಾರ್ಗಗಳ ಬಗ್ಗೆ ಆರ್‌ಬಿಐ ಪ್ರತಿಕ್ರಿಯೆ ಕೋರಿದೆ.