ಚೆನ್ನೈ: ಬ್ಯಾಂಕ್ ಖಾತೆದಾರರಿಗೆ ಅನುಕೂಲವಾಗುವಂತೆ ಬ್ಯಾಂಕಿಂಗ್ ಕ್ಷೇತ್ರದಲ್ಲಿ ಹೆಚ್ಚಿನ ನಿಯಂತ್ರಕ ಕಾರ್ಯವಿಧಾನಗಳನ್ನು ತರುವ ಪ್ರಯತ್ನವನ್ನು ಕೇಂದ್ರ ಸರ್ಕಾರ ಮಾಡುತ್ತಿದೆ ಎಂದು ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.
ಇಲ್ಲಿ ನಡೆದ 6ನೇ ಜಿ. ರಾಮಚಂದ್ರನ್ ಸ್ಮಾರಕ ಉಪನ್ಯಾಸ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಪಿಎಂಸಿ ಬ್ಯಾಂಕ್ ಹಗರಣದಲ್ಲಿ ಮೇಲ್ವಿಚಾರಣಾ ಮತ್ತು ನಿಯಂತ್ರಕ ಕ್ರಮಗಳು ಸಂಸ್ಥೆಯೊಳಗೆ ತೆಗೆದುಕೊಳ್ಳಲಾಗಿದೆಯೆ ಎಂಬುದನ್ನು ಖಚಿತಪಡಿಸಿಕೊಳ್ಳಲು ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ (ಆರ್‌ಬಿಐ) ಪರಿಶೀಲನೆ ಆರಂಭಿಸಿದೆ ಎಂದರು.
ಸ್ವಾತಂತ್ರ್ಯ ನಿರ್ಧಾರ ತೆಗೆದುಕೊಳ್ಳಲು ಸಂಸ್ಥೆಗಳಿಗೆ ಇದ್ದ ಅಡೆತಡೆಗಳನ್ನು ಸರಿಪಡಿಸಲಾಗಿದೆ. ಇದರಿಂದ ನಿಯಂತ್ರಕರು ಉತ್ತಮವಾಗಿ ಕಾರ್ಯನಿರ್ವಹಿಸಬಹುದಾಗಿದೆ. ಬ್ಯಾಂಕ್ಗಳು ತಮ್ಮ ಪ್ರಮುಖ ಸಾಮರ್ಥ್ಯಗಳನ್ನು ಅರ್ಥಮಾಡಿಕೊಳ್ಳಬೇಕು ಎಂದು ಸೀತಾರಾಮನ್ ಹೇಳಿದರು.
ಪ್ರಮಾಣೀಕರಣ ಎಂಬುದು ಸಾಂಕ್ರಾಮಿಕ ಕಾಯಿಲೆಯಂತಿದೆ. ಬ್ಯಾಂಕ್ಗಳಂತಹ ಸಂಸ್ಥೆಗಳು ತಮ್ಮ ಪ್ರಮುಖ ಸಾಮರ್ಥ್ಯವನ್ನು ಅರ್ಥಮಾಡಿಕೊಳ್ಳಬೇಕು. ಬ್ಯಾಂಕ್ಗಳು ಮೊದಲು ಅದರ ಪ್ರಮುಖ ಶಕ್ತಿ ದುರ್ಬಲಗೊಳ್ಳುತ್ತದೆಯೇ ಎಂದು ಆಲೋಚಿಸಬೇಕು ಎಂದು ಸಲಹೆ ನೀಡಿದ್ದಾರೆ.