ನವದೆಹಲಿ: ಕೊರೊನಾ ವೈರಸ್ ಲಾಕ್‌ಡೌನ್‌ನಿಂದಾಗಿ ರಾಜ್ಯಗಳು ತೀವ್ರ ಸಂಕಷ್ಟದಲ್ಲಿವೆ. ತುರ್ತಾಗಿ ಹಣಕಾಸಿನ ನೆರವು ಒದಗಸಿಬೇಕು ಎಂದು ಕಾಂಗ್ರೆಸ್ ಹಿರಿಯ ಮುಖಂಡ ಪಿ.ಚಿದಂಬರಂ ಕೇಂದ್ರ ಸರ್ಕಾರವನ್ನ ಒತ್ತಾಯಿಸಿದರು.
ಇಂದು ನಡೆದ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಮಾತನಾಡಿದ ಅವರು, ಮೂರು ಪ್ರಮುಖ ವಿಷಯಗಳನ್ನು ಕೇಂದ್ರ ಮುಂದೆ ಪ್ರಸ್ತಾಪಿಸಿದರು. 1. ರಾಜ್ಯಗಳು ಹಣಕಾಸಿನ ತೀವ್ರ ಸಂಕಷ್ಟದಲ್ಲಿವೆ ಮತ್ತು ಅವುಗಳಿಗೆ ತುರ್ತು ಸಹಾಯದ ಅಗತ್ಯವಿದೆ. 2. ಆರೋಗ್ಯ ಮೂಲಸೌಕರ್ಯಗಳ ಸ್ಥಿತಿಯನ್ನು ಗಮನಿಸಬೇಕಾಗಿದೆ. 3. ವಲಸೆ ಕಾರ್ಮಿಕರು ತಮ್ಮ ಊರು ತಲುಪಿಸಲು ಮಾನವೀಯ ನೀತಿಯನ್ನು ಜಾರಿಗೆ ತರಬೇಕಾಗಿದೆ ಎಂದು ಹೇಳಿದರು.
ಕಾವಲುಗಾರರಾಗಿ ಕಾರ್ಯನಿರ್ವಹಿಸುವ ಜವಾಬ್ದಾರಿ ಪಕ್ಷಕ್ಕೆ ಇದೆ. ವಾಚ್‌ಡಾಗ್‌ಗಳಾಗಿ ಕಾರ್ಯನಿರ್ವಹಿಸುವುದು ಮತ್ತು ತಿದ್ದುಪಡಿ ಖಚಿತಪಡಿಸಿಕೊಳ್ಳುವುದು ನಮ್ಮ ಜವಾಬ್ದಾರಿಯಾಗಿದೆ. ವಿದೇಶಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸಿಲುಕಿರುವ ಅನಿವಾಸಿ ಭಾರತೀಯರಿಗೆ ಸರಿಯಾದ ತಪಸಾಣೆ ನಡೆಸಿದ ನಂತರ ವಿಶೇಷ ವಿಮಾನಗಳ ವ್ಯವಸ್ಥೆ ಮಾಡಿ, ರಾಜ್ಯ ಸರ್ಕಾರಗಳೊಂದಿಗೆ ಸಮಾಲೋಚಿಸಿ ಸ್ವದೇಶಕ್ಕೆ ಮರಳಲು ಅನುಮತಿ ನೀಡಬೇಕು. ಭಾರತ ಏಕೆ ಹಾಗೆ ಮಾಡುತ್ತಿಲ್ಲ? ಎಂದು ಕಾಂಗ್ರೆಸ್ ಮುಖಂಡ ಎ.ಕೆ.ಆಂಟನಿ ಪ್ರಶ್ನಿಸಿದರು.
ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಸಭೆಯಲ್ಲಿ ಕೊರೊನಾ ವೈರಸ್ ಲಾಕ್‌ಡೌನ್‌ನಿಂದಾಗಿ ಸಿಕ್ಕಿಹಾಕಿಕೊಂಡಿರುವ ವಲಸೆ ಕಾರ್ಮಿಕರ ವಿಷಯವನ್ನು ಪ್ರಸ್ತಾಪಿಸಿದರು.