ETV Bharat / business

$ 5 ಟ್ರಿಲಿಯನ್ ಆರ್ಥಿಕತೆಗೆ ರಾಜ್ಯಗಳೇ ಚಾಲಕ ಶಕ್ತಿ.. ನೀತಿ ಆಯೋಗದ ಸಿಇಒ ಹೀಗೆ ಹೇಳಿದ್ದೇಕೆ?

author img

By

Published : Sep 8, 2019, 12:14 PM IST

ಇಂಡಸ್ಟ್ರಿ ಚೇಂಬರ್​ ಪಿಹೆಚ್​ಡಿಸಿಸಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ನೀತಿ ಆಯೋಗದ ಸಿಇಒ ಅಮಿತಾಬ್ ಕಾಂತ್ ಅವರು, ಭಾರತವನ್ನು ಆಮೂಲಾಗ್ರವಾಗಿ ಪರಿವರ್ತಿಸಲು ರಾಜ್ಯಗಳು ಒಟ್ಟಾಗಿ ಕೆಲಸ ಮಾಡಬೇಕು ಮತ್ತು ಪರಸ್ಪರರು ಕಲಿಯಬೇಕಿದೆ ಎಂದು ಸಲಹೆ ನೀಡಿದ್ದಾರೆ.

ಸಾಂದರ್ಭಿಕ ಚಿತ್ರ

ನವದೆಹಲಿ: ಭಾರತದ 5 ಟ್ರಿಲಿಯನ್ ಡಾಲರ್ ಆರ್ಥಿಕತೆ ಗುರಿ ತಲುಪಬೇಕಾದರೇ ರಾಜ್ಯಗಳು ಬೆಳವಣಿಗೆಯ ಪ್ರಮುಖ ಚಾಲಕ ಶಕ್ತಿ ಆಗಬೇಕಿದೆ ಎಂದು ನೀತಿ ಆಯೋಗದ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಅಮಿತಾಬ್ ಕಾಂತ್ ಹೇಳಿದ್ದಾರೆ.

ಇಂಡಸ್ಟ್ರಿ ಚೇಂಬರ್​ ಪಿಹೆಚ್​ಡಿಸಿಸಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಭಾರತವನ್ನು ಆಮೂಲಾಗ್ರವಾಗಿ ಪರಿವರ್ತಿಸಲು ರಾಜ್ಯಗಳು ಒಟ್ಟಾಗಿ ಕೆಲಸ ಮಾಡಬೇಕು ಮತ್ತು ಪರಸ್ಪರರು ಕಲಿಯಬೇಕಿದೆ ಎಂದು ಸಲಹೆ ನೀಡಿದ್ದಾರೆ.

ಇತ್ತೀಚಿನ ದಿನಗಳಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಹೆಚ್ಚು ಗಮನ ಹರಿಸುತ್ತಿರುವ ಒಂದೇ ವಿಷಯವೆಂದರೆ 2024ರ ವೇಳೆಗೆ 5 ಟ್ರಿಲಿಯನ್ ಡಾಲರ್ ಆರ್ಥಿಕತೆ ಮತ್ತು 2030ರ ವೇಳೆಗೆ 10 ಟ್ರಿಲಿಯನ್ ಡಾಲರ್​ ಆರ್ಥಿಕತೆಯ ಗುರಿ ತಲುಪುವುದಾಗಿ ಪ್ರಸ್ತಾಪಿಸುತ್ತಿದ್ದಾರೆ ಎಂದರು.

"ನಮ್ಮ ನಿಜವಾದ ಸವಾಲು ರಾಜ್ಯಗಳು ತಮ್ಮ ಜಿಡಿಪಿಯನ್ನು ದ್ವಿಗುಣಗೊಳಿಸುವ ಮತ್ತು ಮೂರು ಪಟ್ಟು ಹೆಚ್ಚಿಸುವ ಗುರಿಯನ್ನು ಹೊಂದುವವರೆಗೆ ಇದನ್ನು ಸಾಧಿಸಲು ಸಾಧ್ಯವಿಲ್ಲ. ಇದಕ್ಕೆ ವ್ಯಾಪಕ ಶ್ರೇಣಿಯ ಕ್ಷೇತ್ರಗಳಲ್ಲಿ ಮಹತ್ವದ ರಚನಾತ್ಮಕ ಸುಧಾರಣೆಗಳು ತರಬೇಕಿದೆ" ಎಂದು ಕಾಂತ್​ ತಿಳಿಸಿದ್ದಾರೆ.

Intro:Body:Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.