ನವದೆಹಲಿ : ಕೋವಿಡ್-19 ಸಾಂಕ್ರಾಮಿಕ ವೈರಸ್ ಭೀತಿಯಿಂದಾಗಿ ಮಾರ್ಚ್ ತಿಂಗಳಲ್ಲಿ ವಿದೇಶಿ ಬಂಡವಾಳ ಹೂಡಿಕೆದಾರರು ಭಾರತದ ಮಾರಕಟ್ಟೆಯಿಂದ ಲಕ್ಷ ಕೋಟಿ ರೂ. ಹಿಂದಕ್ಕೆ ಪಡೆದುಕೊಂಡಿದ್ದಾರೆ.
ಮಾರ್ಚ್ 2ರಿಂದ 27ರ ಅವಧಿಯ ನಡುವೆ ಹೂಡಿಕೆದಾರರು ₹5,377 ಕೋಟಿ ಮೌಲ್ಯದ ಷೇರುಗಳನ್ನು ಹಾಗೂ 52,811 ಕೋಟಿ ರೂ. ಮೌಲ್ಯದ ಸಾಲ ಪತ್ರಗಳನ್ನು ಮಾರಾಟ ಮಾಡಿದ್ದಾರೆ. ಒಟ್ಟಾರೆ ಮಾರ್ಚ್ ಮಾಸಿಕದಲ್ಲಿ ವಿದೇಶಿ ಬಂಡವಾಳ ಹೂಡಿಕೆದಾರರು (ಎಫ್‌ಪಿಐ) 1 ಲಕ್ಷ ಕೋಟಿ ರೂ. ಹಿಂದಕ್ಕೆ ಪಡೆದುಕೊಂಡಿದ್ದಾರೆ. ಇದಕ್ಕೆ ಮುಖ್ಯ ಕಾರಣ ಕೊರೊನಾ ವೈರಸ್ನಿಂದ ದೇಶಿ ಆರ್ಥಿಕತೆಯಲ್ಲಿ ಉಂಟಾಗಿರುವ ಆರ್ಥಿಕ ಹಿಂಜರಿತ ಕಾರಣ ಎನ್ನಲಾಗಿದೆ.
ಮಾರ್ಚ್ ತಿಂಗಳಿನಲ್ಲಿ ವಿದೇಶಿ ಬಂಡವಾಳ ಹೂಡಿಕೆದಾರರು (ಎಫ್‌ಪಿಐ) ₹1ಲಕ್ಷ ಕೋಟಿ ಹಿಂದಕ್ಕೆ ಪಡೆದಿದ್ದಾರೆ. ನ್ಯಾಷನಲ್ ಸೆಕ್ಯುರಿಟೀಸ್ ಡೆಪಾಸಿಟರಿ ಲಿಮಿಟೆಡ್ ದತ್ತಾಂಶವನ್ನು ಸಂಗ್ರಹಿಸಲು ಆರಂಭಿಸಿದ ಬಳಿಕ ಗರಿಷ್ಠ ಮಟ್ಟದ ಬಂಡವಾಳ ಹೊರಹರಿವು ಇದಾಗಿದೆ. ಹೂಡಿಕೆದಾರರು ಮಾರ್ಚ್ 2 ರಿಂದ 27ರವರೆಗೆ ನಡೆದಿರುವ ವಹಿವಾಟಿನಲ್ಲಿ ₹59,377 ಕೋಟಿ ಮೌಲ್ಯದ ಷೇರುಗಳನ್ನು ಹಾಗೂ ₹ 52,811 ಕೋಟಿ ಮೌಲ್ಯದ ಸಾಲಪತ್ರಗಳನ್ನು ಮಾರಾಟ ಮಾಡಿದ್ದಾರೆ.
ಸೋಂಕು ಹರಡುವುದನ್ನು ನಿಯಂತ್ರಿಸಲು ಜಗತ್ತಿನೆಲ್ಲೆಡೆ ಲಾಕ್‌ಡೌನ್ ವಿಧಿಸಲಾಗಿದೆ. ಇದರಿಂದ ಹೂಡಿಕೆದಾರರು ಎಚ್ಚರಿಕೆಯಿಂದ ವಹಿವಾಟು ನಡೆಸುತ್ತಿದ್ದಾರೆ ಎಂದು ತಜ್ಞರು ಹೇಳಿದ್ದಾರೆ.