ನವದೆಹಲಿ: ಮುಂಬರುವ ದಿನಗಳಲ್ಲಿ ಬಡ್ಡಿ ದರ ಕಡಿತದ ಹಂಚಿಕೆಯು ಇನ್ನಷ್ಟು ಸುಧಾರಿಸುವ ನಿರೀಕ್ಷೆಯಿದೆ. ಇದು ಸಾಲದ ಬೆಳವಣಿಗೆಯ ವೇಗವನ್ನು ಹೆಚ್ಚಿಸಲಿದೆ ಎಂದು ಭಾರತೀಯ ರಿಸರ್ವ್ ಬ್ಯಾಂಕ್ ಗವರ್ನರ್ ಶಕ್ತಿಕಾಂತ ದಾಸ್ ಹೇಳಿದರು.
ಈ ತಿಂಗಳ ಆರಂಭದಲ್ಲಿ ಕೇಂದ್ರೀಯ ಬ್ಯಾಂಕ್, ಬ್ಯಾಂಕ್ಗಳ ಬಡ್ಡಿ ದರವನ್ನು ಈ ಹಿಂದಿನಂತೆ ಯಥಾಸ್ಥಿತಿಯಲ್ಲಿ ಉಳಿಸಿಕೊಂಡಿದೆ. ಹಣದುಬ್ಬರ ಸದೃಢವಾಗುವ ಲಕ್ಷಣಗಳು ಗೋಚರಿಸಿವೆ. ಜಾಗತಿಕ ಆರ್ಥಿಕ ಅನಿಶ್ಚಿತ ವಾತಾವರಣ ತಿಳಿಯಾಗಲಿದೆ ಎಂದರು.
ದರ ಕಡಿತದ ಹಂಚಿಕೆಯು ನಿಧಾನವಾಗಿ ಮತ್ತು ಸ್ಥಿರವಾಗಿ ಸುಧಾರಿಸುತ್ತಿದೆ ಎಂದು ಆರ್‌ಬಿಐ ಮಂಡಳಿಯ ಸಭೆಯ ನಂತರ ಸುದ್ದಿಗಾರರಿಗೆ ಶಕ್ತಿಕಾಂತ್ ದಾಸ್ ತಿಳಿಸಿದರು.
ಎಜಿಆರ್ ಬಾಕಿ ಕುರಿತು ಸುಪ್ರೀಂಕೋರ್ಟ್‌ನ ಆದೇಶದ ಮೇರೆಗೆ ಅದರಿಂದ ಉದ್ಭವಿಸಬಹುದಾದ ಸಮಸ್ಯೆಗಳಿದ್ದರೆ ಆ ಕುರಿತು ಆಂತರಿಕವಾಗಿ ಚರ್ಚಿಸಲಾಗುವುದು. ಮುಂಬರುವ ತಿಂಗಳುಗಳಲ್ಲಿ ಸಾಲದ ಬೆಳವಣಿಗೆ ಹೆಚ್ಚಾಗುತ್ತದೆ ಎಂದು ನಾವು ನಿರೀಕ್ಷಿಸುತ್ತೇವೆ ಎಂದರು.