ETV Bharat / business

RBI ಮೇಲ್ವಿಚಾರಣಾ ವ್ಯಾಪ್ತಿಗೆ 1,500+ ಸಹಕಾರಿ ಬ್ಯಾಂಕ್​ಗಳು.. ಕೇಂದ್ರ ಕ್ಯಾಬಿನೆಟ್​ನಿಂದ ಸುಗ್ರೀವಾಜ್ಞೆ!! - ಕೇಂದ್ರ ಸಚಿವ ಪ್ರಕಾಶ್ ಜಾವಡೇಕರ್

ಕಳೆದ ವರ್ಷ ಪಂಜಾಬ್ ಮತ್ತು ಮಹಾರಾಷ್ಟ್ರ ಸಹಕಾರಿ (ಪಿಎಂಸಿ) ಬ್ಯಾಂಕ್​ ವೈಫಲ್ಯದ ನಂತರ, ಕೇಂದ್ರ ಕ್ಯಾಬಿನೆಟ್ ಫೆಬ್ರವರಿಯಲ್ಲಿ ದೇಶದ ಸಹಕಾರಿ ಬ್ಯಾಂಕ್​ಗಳನ್ನು ಬಲಪಡಿಸಲು ಬ್ಯಾಂಕಿಂಗ್ ನಿಯಂತ್ರಣ ಕಾಯ್ದೆಗೆ ತಿದ್ದುಪಡಿ ಮಾಡಿತು. 2020ರ ಬಜೆಟ್ ಸಂದರ್ಭದಲ್ಲಿ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸಹಕಾರಿ ಬ್ಯಾಂಕ್​ಗಳನ್ನು ಆರ್‌ಬಿಐ ವ್ಯಾಪ್ತಿಗೆ ತರಲಾಗುವುದು ಎಂದು ಘೋಷಿಸಿದ್ದರು..

Union Cabinet Meeting
ಕೇಂದ್ರ ಕ್ಯಾಬಿನೆಟ್​
author img

By

Published : Jun 24, 2020, 4:31 PM IST

ನವದೆಹಲಿ : 1,482 ನಗರ ಸಹಕಾರಿ ಬ್ಯಾಂಕ್​ಗಳು ಮತ್ತು 58 ಬಹು ರಾಜ್ಯ ಸಹಕಾರಿ ಬ್ಯಾಂಕ್​ಗಳು ಸೇರಿ ಇತರೆ ಸರ್ಕಾರಿ ಬ್ಯಾಂಕ್​ಗಳನ್ನು ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ (ಆರ್‌ಬಿಐ) ಮೇಲ್ವಿಚಾರಣಾ ಅಧಿಕಾರಕ್ಕೆ ತರಲು ಕೇಂದ್ರ ಸಚಿವ ಸಂಪುಟ ಬುಧವಾರ ಪ್ರಕಟಿಸಿದೆ.

ಮಾಧ್ಯಮಗಳನ್ನುದ್ದೇಶಿಸಿ ಮಾತನಾಡಿದ ಕೇಂದ್ರ ಸಚಿವ ಪ್ರಕಾಶ್ ಜಾವಡೇಕರ್, ನಿಗದಿತ ಬ್ಯಾಂಕ್​ಗಳಿಗೆ ಅನ್ವಯವಾಗುವಂತೆ ಆರ್‌ಬಿಐನ ಅಧಿಕಾರಗಳು ಸಹಕಾರಿ ಬ್ಯಾಂಕ್​ಗಳಿಗೂ ಅನ್ವಯವಾಗುತ್ತವೆ ಎಂದು ಹೇಳಿದರು.

ಕಳೆದ ವರ್ಷ ಪಂಜಾಬ್ ಮತ್ತು ಮಹಾರಾಷ್ಟ್ರ ಸಹಕಾರಿ (ಪಿಎಂಸಿ) ಬ್ಯಾಂಕ್​ ವೈಫಲ್ಯದ ನಂತರ, ಕೇಂದ್ರ ಕ್ಯಾಬಿನೆಟ್ ಫೆಬ್ರವರಿಯಲ್ಲಿ ದೇಶದ ಸಹಕಾರಿ ಬ್ಯಾಂಕ್​ಗಳನ್ನು ಬಲಪಡಿಸಲು ಬ್ಯಾಂಕಿಂಗ್ ನಿಯಂತ್ರಣ ಕಾಯ್ದೆಗೆ ತಿದ್ದುಪಡಿ ಮಾಡಿತು. 2020ರ ಬಜೆಟ್ ಸಂದರ್ಭದಲ್ಲಿ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸಹಕಾರಿ ಬ್ಯಾಂಕ್​ಗಳನ್ನು ಆರ್‌ಬಿಐ ವ್ಯಾಪ್ತಿಗೆ ತರಲಾಗುವುದು ಎಂದು ಘೋಷಿಸಿದ್ದರು.

  • The decision to bring 1,540 cooperative banks under RBI's supervision will give an assurance to more than 8.6 crore depositors in these banks that their money amounting to Rs 4.84 lakh crore will stay safe: Union Minister Prakash Javadekar https://t.co/IAy0GN98el

    — ANI (@ANI) June 24, 2020 " class="align-text-top noRightClick twitterSection" data=" ">

ದೇಶಾದ್ಯಂತ 1,500ಕ್ಕೂ ಹೆಚ್ಚು ನಗರ ಮತ್ತು ಬಹು ರಾಜ್ಯ ಸಹಕಾರಿ ಬ್ಯಾಂಕ್​ಗಳಲ್ಲಿ 8.6 ಕೋಟಿಗೂ ಹೆಚ್ಚು ಠೇವಣಿದಾರರಿದ್ದಾರೆ. ಸಹಕಾರಿ ಬ್ಯಾಂಕ್​ಗಳಲ್ಲಿ 4.84 ಲಕ್ಷ ಕೋಟಿ ಮೊತ್ತದ ಠೇವಣಿದಾರರ ಹಣ ಸುರಕ್ಷಿತವಾಗಿರುತ್ತದೆ ಎಂದು ಜಾವಡೇಕರ್ ಹೇಳಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.