ನವದೆಹಲಿ: ತೆರಿಗೆ ವಿವಾದ ಪ್ರಕರಣಗಳನ್ನು ಇತ್ಯರ್ಥಗೊಳಿಸುವ ಉದ್ದೇಶದ 'ವಿವಾದ್ ಸೆ ವಿಶ್ವಾಸ್ ಮಸೂದೆ-2020' ರಲ್ಲಿ ಕೆಲ ಬದಲಾವಣೆಗಳನ್ನು ತರಲು ಕೇಂದ್ರ ಸಚಿವ ಸಂಪುಟ ಅನುಮೋದಿಸಿದೆ.
ನೇರ ತೆರಿಗೆಗೆ ಸಂಬಂಧಿಸಿದ ದಾವೆಗಳನ್ನು ಕಡಿಮೆ ಮಾಡುವ ಗುರಿಯೊಂದಿಗೆ ಈ ತಿಂಗಳ ಆರಂಭದಲ್ಲಿ ಲೋಕಸಭೆಯಲ್ಲಿ ಈ ಮಸೂದೆಯನ್ನು ಮಂಡಿಸಲಾಗಿದೆ. ಕಮಿಷನರ್ (ಮೇಲ್ಮನವಿ), ಆದಾಯ ತೆರಿಗೆ ಮೇಲ್ಮನವಿ ನ್ಯಾಯಾಧಿಕರಣ (ಐಟಿಎಟಿ), ಹೈಕೋರ್ಟ್ ಮತ್ತು ಸುಪ್ರೀಂಕೋರ್ಟ್ ಮಟ್ಟದಲ್ಲಿ ಬಾಕಿ ಇರುವ ತೆರಿಗೆ ವಿವಾದಗಳನ್ನು ಇತ್ಯರ್ಥಪಡಿಸುವುದನ್ನು ಮಸೂದೆಯಲ್ಲಿ ಪ್ರಸ್ತಾಪಿಸಲಾಗಿದೆ.