ನವದೆಹಲಿ: ಕಳೆದ ಕೆಲ ದಿನಗಳಿಂದ ಸತತವಾಗಿ ಏರಿಕೆ ಹಾದಿ ಹಿಡಿದಿದ್ದ ಚಿನ್ನ-ಬೆಳ್ಳಿ ಬೆಲೆಯಲ್ಲಿ ಇಂದು ಭಾರೀ ಮಟ್ಟದ ಇಳಿಕೆ ಕಂಡು ಬಂದಿದೆ.
ಭಾರತೀಯ ಮಾರುಕಟ್ಟೆಯಲ್ಲಿ ಇಂದು ಹಳದಿ ಲೋಹದ ಬೆಲೆ 10 ಗ್ರಾಂಗೆ 640 ರೂ ಕಡಿಮೆಯಾಗಿದೆ. ಈ ಮೂಲಕ ಸದ್ಯ ನವದೆಹಲಿಯಲ್ಲಿ ಬಂಗಾರದ ಬೆಲೆ 54,269 ರೂ ಆಗಿದೆ. ಇದರ ಜತೆಗೆ ಬೆಳ್ಳಿ ಬೆಲೆಯಲ್ಲೂ ದಾಖಲೆಯ ಮಟ್ಟದ ಇಳಿಕೆ ಕಂಡು ಬಂದಿದೆ. ಪ್ರತಿ ಕೆ.ಜಿ ಬೆಳ್ಳಿಯ ಬೆಲೆಯಲ್ಲಿ 3,112 ರೂ. ಕಡಿಮೆಯಾಗಿ ಸದ್ಯ 69,450 ರೂ ಆಗಿದೆ. ಇದಕ್ಕೂ ಮೊದಲು ಕೆ.ಜಿ ಬೆಳ್ಳಿ ಬೆಲೆ 72,562 ರೂ ಆಗಿತ್ತು.
ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಇದರ ಮೇಲಿನ ಬೇಡಿಕೆ ಕಡಿಮೆಯಾಗಿದ್ದರಿಂದ ಇವತ್ತು ಇಷ್ಟೊಂದು ಮಟ್ಟದ ಕುಸಿತ ಕಂಡು ಬಂದಿದೆ ಎಂದು ತಿಳಿದು ಬಂದಿದೆ.
ಪ್ರತಿದಿನ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿನ ಬೇಡಿಕೆ, ಚಿನ್ನದ ಮೇಲಿನ ಆಮದು ಸುಂಕ ಮತ್ತು ಡಾಲರ್ ಎದುರು ರೂಪಾಯಿ ಮೌಲ್ಯವನ್ನಾಧರಿಸಿ ಬಂಗಾರ ಹಾಗೂ ಬೆಳ್ಳಿ ದರ ನಿರ್ಧಾರವಾಗುತ್ತದೆ.